ಐಪಿಎಲ್ 2023 | ಮುಂಬೈ ವಿರುದ್ಧ ಆರ್‌ಸಿಬಿಗೆ ಹೀನಾಯ ಸೋಲು; ಪ್ಲೇ ಆಫ್ ಹಾದಿ ಕಠಿಣ

Date:

ವಾಂಖೆಡೆ ಮೈದಾನದಲ್ಲಿ ಸೂರ್ಯಕುಮಾರ್ ಅಬ್ಬರಕ್ಕೆ ನಲುಗಿದ ಆರ್‌ಸಿಬಿ ಪಡೆ ಹೀನಾಯವಾಗಿ ಸೋಲು ಕಂಡಿದೆ.

- Advertisement -

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿಟ್ಟಿದ್ದ 200 ರನ್‌ಗಳ ಗುರಿಯನ್ನು ರೋಹಿತ್ ಪಡೆ 4 ವಿಕೆಟ್ ನಷ್ಟದಲ್ಲಿ 16.3 ಓವರ್‌ಗಳಲ್ಲೇ ಚೇಸ್ ಮಾಡುವ ಮೂಲಕ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಗೆಲುವಿನೊಂದಿಗೆ ಐಪಿಎಲ್ 16ನೇ ಆವೃತ್ತಿಯ ಅಂಕಪಟ್ಟಿಯಲ್ಲಿ ಮುಂಬೈ 3ನೇ ಸ್ಥಾನಕ್ಕೇರಿತು. ಮತ್ತೊಂದೆಡೆ 11ನೇ ಪಂದ್ಯದಲ್ಲಿ 6ನೇ ಸೋಲು ಕಂಡ ಆರ್‌ಸಿಬಿ, 7ನೇ ಸ್ಥಾನಕ್ಕೆ ಕುಸಿದಿದೆ.

ಪ್ಲೇ ಆಫ್ ಹಂತಕ್ಕೇರಲು ಇನ್ನುಳಿದ 3 ಪಂದ್ಯಗಳನ್ನು ಬೆಂಗಳೂರು ತಂಡ ಬೃಹತ್ ಅಂತರದಿಂದ ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ.

ಚೇಸಿಂಗ್ ವೇಳೆ ಆತಿಥೇಯ ಮುಂಬೈ ಇಂಡಿಯನ್ಸ್ ತಂಡ ಆರಂಭದಲ್ಲೇ ಉತ್ತಮ ರನ್ ಗತಿ ಕಾಯ್ದುಕೊಂಡಿತ್ತು. 4.4 ಓವರ್‌ಗಳಲ್ಲೇ ತಂಡದ ಮೊತ್ತ 50 ದಾಟಿತ್ತು.

21 ಎಸೆತಗಳಲ್ಲಿ ತಲಾ 4 ಸಿಕ್ಸರ್ ಮತ್ತು ಬೌಂಡರಿ ಬಾರಿಸಿದ ಇಶಾನ್ ಕಿಶನ್ 42 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು.

ಅಬ್ಬರಿಸಿದ ಸೂರ್ಯಕುಮಾರ್!

ಮೂರನೇ ಕ್ರಮಾಂಕದಲ್ಲಿ ಬಂದ ಸೂರ್ಯಕುಮಾರ್ ಯಾದವ್, ನಿಧಾನಗತಿಯಲ್ಲಿ ಬ್ಯಾಟಿಂಗ್‌ ಆರಂಭಿಸಿದ್ದರು. ಆದರೆ ಆ ಬಳಿಕ ಅಬ್ಬರಿಸಿದ ಸೂರ್ಯ, ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಬಡಿದಟ್ಟಿದರು.

35 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್, 6 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 83 ರನ್‌ಗಳಿಸಿ ವಿಕೆಟ್‌ ಒಪ್ಪಿಸಿದರು.

ತಾನೆದುರಿಸಿದ ಮೊದಲ 14 ಎಸೆತಗಳಲ್ಲಿ 18 ರನ್‌ಗಳಿಸಿದ್ದ ಯಾದವ್ ನಂತರದ 21 ಎಸೆತಗಳಲ್ಲಿ 65 ರನ್ ಚಚ್ಚಿದರು. ಅಂತಿಮವಾಗಿ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.

ಆರ್‌ಸಿಬಿ 199/6

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ [ 65 ರನ್ ] ಮತ್ತು ಗ್ಲೆನ್ ಮ್ಯಾಕ್ಸ್’ವೆಲ್ [ 68 ರನ್] ಗಳಿಸಿದ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 199 ರನ್‌ಗಳಿಸಿತ್ತು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...