ಐಪಿಎಲ್‌ 2023 | ಮೊದಲ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದ ಗುಜರಾತ್‌ ಟೈಟನ್ಸ್‌

Date:

  • ಪ್ಲೇ ಆಫ್‌ ಪ್ರವೇಶಿಸಿದ ಗುಜರಾತ್‌ ಟೈಟನ್ಸ್‌
  • ಚೊಚ್ಚಲ ಐಪಿಎಲ್​ ಶತಕ ಸಿಡಿಸಿದ ಶುಭಮನ್‌

ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡ , ಐಪಿಎಲ್‌ 16ನೇ ಆವೃತ್ತಿಯಲ್ಲಿ ಮೊದಲ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ.

- Advertisement -

ಸೋಮವಾರ ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಬಾದ್‌ ತಂಡವನ್ನು ಟೈಟನ್ಸ್‌ 34 ರನ್‌ಗಳ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತು. ಆ ಮೂಲಕ ಲೀಗ್‌ ಹಂತದಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಕ್ವಾಲಿಫೈಯರ್‌ ಹಂತಕ್ಕೆ ತೇರ್ಗಡೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮತ್ತೊಂದೆಡೆ 12ನೇ ಪಂದ್ಯದಲ್ಲಿ 8ನೇ ಸೋಲು ಕಂಡ ಹೈದರಬಾದ್‌ ಪಡೆ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದಿದೆ.

ಶುಭಮನ್‌ ಶತಕದ ಮಿಂಚು

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಗುಜರಾತ್‌ ಇನ್ನಿಂಗ್ಸ್‌ನಲ್ಲಿ ಮಿಂಚು ಹರಿಸಿದ್ದು ಆರಂಭಿಕ ಶುಭಮನ್‌ ಗಿಲ್‌.

ಚೊಚ್ಚಲ ಐಪಿಎಲ್​ ಶತಕ ಸಿಡಿಸಿ  ಸಂಭ್ರಮಿಸಿದ ಗಿಲ್‌, ಟೈಟನ್ಸ್‌ ತಂಡ 188 ರನ್‌ ದಾಖಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ವೃದ್ಧಿಮನ್‌ ಸಹಾ ಖಾತೆ ತೆರೆಯುವ ಮುನ್ನವೇ ಪೆವಿಲಿಯನ್ ಸೇರಿದರು. ಆದರೆ ಸಾಯಿ ಸುದರ್ಶನ್ ಜೊತೆ ಶುಭಮನ್ ಗಿಲ್ 147 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು.

56 ಎಸೆತಗಳಲ್ಲಿ 13 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಶತಕ ಪೂರೈಸಿದ ಗಿಲ್‌, ಅಂತಿಮವಾಗಿ 101 ರನ್‌ಗಳಿಸಿ ಭುವನೇಶ್ವರ್‌ ಕುಮಾರ್‌ಗೆ ವಿಕೆಟ್‌ ಒಪ್ಪಿಸಿದರು. ಆ ಮೂಲಕ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಯಶಸ್ವಿ ಜೈಸ್ವಾಲ್ ಅವರನ್ನು ಹಿಂದಿಕ್ಕಿ ಗಿಲ್‌ ಎರಡನೇ ಸ್ಥಾನಕ್ಕೇರಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಹೀಗಿದೆ ಪ್ಲೇ ಆಫ್‌ ಲೆಕ್ಕಾಚಾರ

ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್‌ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟದಲ್ಲಿ188 ರನ್ ಗಳಿಸಿತು. ಚೇಸಿಂಗ್‌ ವೇಳೆ ಹೈದರಾಬಾದ್​ ತಂಡ 20 ಓವರ್​ನಲ್ಲಿ 9 ವಿಕೆಟ್​ ನಷ್ಟಕ್ಕೆ 154 ರನ್​ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ  34 ರನ್‌ಗಳ ಅಂತರದಲ್ಲಿ ಸೋಲನುಭವಿಸಿತು.

ಗಿಲ್‌, ಸುದರ್ಶನ್‌ ಹೊರತುಪಡಿಸಿದರೆ ಗುಜರಾತ್‌ ತಂಡದ ಇತರ ಬ್ಯಾಟರ್‌ಗಳು ಎರಡಂಕಿ ಮೊತ್ತವನ್ನೇ ತಲುಪಲಿಲ್ಲ. ನಾಲ್ವರು ಬ್ಯಾಟರ್‌ಗಳು ಶೂನ್ಯ ಸುತ್ತಿದರು.

ಒಂದೇ ಓವರ್‌ನಲ್ಲಿ 4 ವಿಕೆಟ್‌ ಪಡೆದ ಭುವಿ

ಹೈದರಾಬಾದ್‌ ಪರವಾಗಿ 20ನೇ ಓವರ್‌ ಎಸೆದ ಅನುಭವಿ ವೇಗಿ ಭುವನೇಶ್ವರ್‌ ಕುಮಾರ್‌, ಕೇವಲ 2 ರನ್‌ ನೀಡಿ 4 ವಿಕೆಟ್‌ ಪಡೆಯುವ ಮೂಲಕ ಆಬ್ಬರಿಸಿದರು. ಮೊದಲ ಮೂರು ಎಸೆತಗಳಲ್ಲಿ ಹ್ಯಾಟ್ರಿಕ್‌ ವಿಕೆಟ್‌ ಪಡೆದ ಭುವಿ ನಂತರದ ಮೂರು ಎಸೆತಗಳಲ್ಲಿ ಕ್ರಮವಾಗಿ 1 ರನ್‌, ವಿಕೆಟ್‌, ಮತ್ತು ಕೊನೆಯ ಎಸೆತದಲ್ಲಿ ಲೆಗ್‌ ಬೈ ಮೂಲಕ 1 ರನ್‌ ನೀಡಿ ಓವರ್‌ ಮುಗಿಸಿದರು.   

ಟೈಟನ್‌ ಗೆ ಸವಾಲಾದ ಕ್ಲಾಸೆನ್‌-ಭುವಿ

ಗುಜರಾತ್ ಮುಂದಿಟ್ಟಿದ್ದ ಮೊತ್ತವನ್ನು ಬೆನ್ನಟ್ಟುವ ವೇಳೆ ಹೈದರಾಬಾದ್​ 59 ರನ್‌ಗಳಿಸುವಷ್ಟರಲ್ಲಿ 7 ವಿಕೆಟ್‌ ಕಳೆದುಕೊಂಡಿತ್ತು. ಈ ಹಂತದಲ್ಲಿ 100 ರನ್‌ ಒಳಗಾಗಿ ಆಲೌಟ್‌ ಆಗುವ ಮುನ್ಸೂಚನೆ ನೀಡಿತ್ತು. ಆದರೆ 9ನೇ ವಿಕೆಟ್‌ಗೆ ಜೊತೆಯಾದ  ಹೆನ್ರಿಚ್ ಕ್ಲಾಸೆನ್ ಮತ್ತು ಭುವನೇಶ್ವರ್‌ ಕುಮಾರ್‌ 88 ರನ್‌ಗಳ ಜೊತಯಾಟದಲ್ಲಿ ಭಾಗಿಯಾದರು. ಕ್ಲಾಸೆನ್ 64 ರನ್ (44 ಎಸೆತ 4×4, 6×3)​ ಮತ್ತು ಭುವನೇಶ್ವರ್ ಕುಮಾರ್ 27 ರನ್​ ಗಳಿಸಿದರೂ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ವಿಫಲರಾದರು

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...