ಐಪಿಎಲ್ 2023 | ಡೆಲ್ಲಿ vs ಆರ್‌ಸಿಬಿ: ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಕ್ಯಾಪಿಟಲ್ಸ್

Date:

ಐಪಿಎಲ್ 16ನೇ ಆವೃತ್ತಿಯಲ್ಲಿ ಸತತ 4 ಪಂದ್ಯಗಳಲ್ಲಿ ಸೋಲು ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ಶನಿವಾರದ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಸವಾಲನ್ನು ಎದುರಿಸಲಿದೆ.

- Advertisement -

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಡೇವಿಡ್ ವಾರ್ನರ್ ಸಾರಥ್ಯದ ಡೆಲ್ಲಿ ಟೂರ್ನಿಯಲ್ಲಿ ಮೊದಲ ಗೆಲುವಿನ ನಿರೀಕ್ಷೆಯೊಂದಿಗೆ ಕಣಕ್ಕಿಳಿಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಏಪ್ರಿಲ್ 10, ಸೋಮವಾರ ನಡೆದಿದ್ದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್‌ಸಿಬಿ ಅಂತಿಮ ಎಸೆತದಲ್ಲಿ ರೋಚಕ ಸೋಲು ಕಂಡಿತ್ರು.

ಟೂರ್ನಿಯಲ್ಲಿ ಇದುವರೆಗೂ 3 ಪಂದ್ಯಗಳನ್ನಾಡಿರುವ ಡುಪ್ಲೆಸಿಸ್ ಪಡೆ , ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿತ್ತು. ಆದರೆ ಆ ನಂತರದಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಗೆಲುವಿನ ಒತ್ತಡ ಮತ್ತು ಹ್ಯಾಟ್ರಿಕ್ ಸೋಲಿನ ಮುಖ ಭಂಗ ತಪ್ಪಿಸಿಕೊಳ್ಳಬೇಕಾದ ಒತ್ತಡದಲ್ಲಿದೆ ಆರ್‌ಸಿಬಿ.
ಮತ್ತೊಂದೆಡೆ ಐಪಿಎಲ್ 16ನೇ ಆವೃತ್ತಿಯ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಇನ್ನೂ ಖಾತೆ ತೆರೆಯಬೇಕಿದೆ.

ಡೆಲ್ಲಿ ಕ್ಯಾಪಿಟಲ್ಸ್​ ತಂಡವು ನಾಯಕ ಡೇವಿಡ್​ ವಾರ್ನರ್ ಅವರನ್ನೇ ಬಹುತೇಕ ನೆಚ್ಚಿಕೊಂಡಿದೆ. ಕಳೆದ 4 ಪಂದ್ಯಗಳಲ್ಲಿ ವಾರ್ನರ್ ಕ್ರಮವಾಗಿ 56, 37, 65, 51 ರನ್‌ಗಳಿಸುವ ಮೂಲಕ ​ಉತ್ತಮ ಪ್ರದರ್ಶನವನ್ನೇ ನೀಡಿದ್ದಾರೆ. ಆದರೆ, ತಂಡದ ಇತರ ಆಟಗಾರರು ಕಪ್ತಾನನಿಗೆ ಸಾಥ್​ ನೀಡುತ್ತಿಲ್ಲ. ಪೃಥ್ವಿ ಶಾ ಮತ್ತು ಲಲಿತ್ ಯಾದವ್ ಬ್ಯಾಟ್‌ನಿಂದ ಇನ್ನೂ ದೊಡ್ಡ ಇನ್ನಿಂಗ್ಸ್‌ ಮೂಡಿಬಂದಿಲ್ಲ.

ಲಕ್ನೋ vs ಪಂಜಾಬ್
ಶನಿವಾರದ ಎರಡನೇ ಪಂದ್ಯದಲ್ಲಿ ಕೆಎಲ್ ರಾಹುಲ್ ಸಾರಥ್ಯದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಪಂಜಾಬ್ ಕಿಂಗ್ಸ್ ಸವಾಲನ್ನು ಎದುರಿಸಲಿದೆ.
ತವರು ಮೈದಾನ ಏಕನಾ ಸ್ಟೇಡಿಯಂನಲ್ಲಿ ಆಡಿರುವ ಎರಡೂ ಪಂದ್ಯಗಳಲ್ಲಿ ಜಯಭೇರಿ ಬಾರಿಸಿರುವ ಲಕ್ನೋ ಪಡೆ ಇಂದಿನ ಪಂದ್ಯದಲ್ಲೂ ಗೆಲ್ಲುವ ನೆಚ್ಚಿನ ತಂಡವಾಗಿ ಕಣಕ್ಕಿಳಿಯಲಿದೆ. ಟೂರ್ನಿಯಲ್ಲಿ 4 ಪಂದ್ಯಗಳಲ್ಲಿ ಮೂರು ಗೆಲುವು ಕಂಡಿರುವ ಲಕ್ನೋ 6 ಅಂಕಗಳೊಂದಿಗೆ ರಾಜಸ್ಥಾನ ರಾಯಲ್ಸ್ ಜೊತೆ ಅಗ್ರಸ್ಥಾನವನ್ನು ಹಂಚಿಕೊಂಡಿದೆ.
ಮತ್ತೊಂದೆಡೆ ಗುರುವಾರ ಗುಜರಾತ್ ಟೈಟನ್ಸ್ ವಿರುದ್ಧ ಪಂದ್ಯವನ್ನಾಡಿದ್ದ ಪಂಜಾಬ್ ಕೇವಲ ಒಂದೇ ದಿನದ ಅಂತರದಲ್ಲಿ ಮತ್ತೊಂದು ಸವಾಲಿಗೆ ಸಜ್ಜಾಗಬೇಕಿದೆ‌.
ತವರು ಮೊಹಾಲಿಯಲ್ಲಿ ಹಾಲಿ ಚಾಂಪಿಯನ್ನರಿಗೆ ಶರಣಾಗಿದ್ದ ಶಿಖರ್ ಧವನ್ ಪಡೆ 4 ಪಂದ್ಯಗಳಲ್ಲಿ ತಲಾ ಎರಡು ಗೆಲುವು ಮತ್ತು ಸೋಲು ಕಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...