ಐಪಿಎಲ್‌ 2023 |ಟೂರ್ನಿಯಲ್ಲಿ ಎರಡನೇ ಗೆಲುವು ದಾಖಲಿಸಿದ ಡೆಲ್ಲಿ ಕ್ಯಾಪಿಟಲ್ಸ್

Date:

ಕೊನೆಯ ಓವರ್‌ಗಳಲ್ಲಿ ಹೆನ್ರಿಕ್ ಕ್ಲಾಸೆನ್ ಬಿರುಸಿನ ಬ್ಯಾಟಿಂಗ್ ಹಾಗೂ ಆಲ್‌ರೌಂಡರ್‌ ವಾಷಿಂಗ್ಟನ್‌ ಸುಂದರ್‌ ಅವರ ಸಮಯೋಚಿತ ಆಟದ ಹೊರತಾಗಿಯೂ ಸನ್‌ ರೈಸರ್ರ್ ಹೈದರಾಬಾದ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿತು.

- Advertisement -

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 16ನೇ ಆವೃತ್ತಿಯ 34ನೇ ಪಂದ್ಯದಲ್ಲಿ 144 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್‌ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 137 ರನ್‌ ಗಳಿಸಲಷ್ಟೆ ಶಕ್ತವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆರಂಭಿಕ ಆಟಗಾರ ಮಾಯಾಂಕ್‌ ಅಗರ್‌ವಾಲ್ (49),ಹೆನ್ರಿಕ್ ಕ್ಲಾಸೆನ್ (31) ಹಾಗೂ ವಾಷಿಂಗ್ಟನ್‌ ಸುಂದರ್‌ (24) ಬಿಟ್ಟರೆ ಉಳಿದ ಆಟಗಾರರು ಉತ್ತಮ ಪ್ರದರ್ಶನ ತೋರಲಿಲ್ಲ. ಡೆಲ್ಲಿ ಪರ ಅಕ್ಸರ್ ಪಟೇಲ್ 21/2 ಹಾಗೂ ಅನ್ರಿಚ್ ನಾರ್ಟ್ಜೆ 33/2 ವಿಕೆಟ್ ಕಬಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಇದಕ್ಕೂ ಮೊದಲು ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಆದರೆ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬ್ಯಾಟ್ಸಮನ್‌ಗಳು, ಸನ್ ರೈಸರ್ಸ್ ಹೈದರಾಬಾದ್ ತಂಡದ ಬೌಲರ್‌ಗಳ ಎದುರು ರನ್ ಗಳಿಸಲು ತಿಣುಕಾಡಿದರು. ಡೆಲ್ಲಿ ಪರ ಆರಂಭಿಕ‌ ಆಟಗಾರರಾಗಿ ನಾಯಕ ಡೇವಿಡ್ ವಾರ್ನರ್ ಹಾಗೂ ಫಿಲಿಪ್ ಸಾಲ್ಟ್ ಕಣಕ್ಕಿಳಿದರು. ಈ ಪೈಕಿ ಫಿಲಿಪ್ ಸಾಲ್ಟ್ ಗೋಲ್ಡನ್ ಡಕ್ ಔಟ್ ಆದರು.

ಡೇವಿಡ್ ವಾರ್ನರ್ 21 ರನ್ ಗಳಿಸಿದರೆ, ಮಿಚೆಲ್ ಮಾರ್ಷ್ 25 ರನ್, ಶರ್ಘರಾಜ್ ಖಾನ್ 10 ರನ್, ಮನೀಶ್ ಪಾಂಡೆ 34 ರನ್ ಹಾಗೂ ಅಕ್ಷರ್ ಪಟೇಲ್ 34 ರನ್ ಗಳಿಸಿದ ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 144 ರನ್ ಕಲೆಹಾಕಿತು.

ಹೈದರಾಬಾದ್ ಪರ ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ 28/3 ಹಾಗೂ ವೇಗದ ಬೌಲರ್ ಭುವನೇಶ್ವರ್‌ ಕುಮಾರ್ 11/2 ವಿಕೆಟ್‌ಗಳನ್ನು ಪಡೆಯುವ ಮೂಲಕ ಯಶಸ್ವಿ ಬೌಲರ್‌ಗಳೆನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...