ಐಪಿಎಲ್‌ 2023 | ಚೆನ್ನೈ vs ಪಂಜಾಬ್;‌ ವಿಶಿಷ್ಠ ದಾಖಲೆ ಬರೆದ ಎಂಎಸ್‌ ಧೋನಿ

Date:

  • 20ನೇ ಓವರ್‌ನಲ್ಲಿ 1000 ಸಾವಿರ ರನ್‌ಗಳಿಸಿದ ಎಂಎಸ್‌ ಧೋನಿ
  • 27ನೇ ಬಾರಿ 200 ಪ್ಲಸ್‌ ಮೊತ್ತ ದಾಖಲಿಸಿದ ಚೆನ್ನೈ ತಂಡ

ಐಪಿಎಲ್‌ 16ನೇ ಆವೃತ್ತಿಯ ಪಂಜಾಬ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಸಿಎಸ್‌ಕೆ ತಂಡದ ನಾಯಕ ಎಂಎಸ್‌ ಧೋನಿ ಮತ್ತೊಂದು ವಿಶಿಷ್ಠ ದಾಖಲೆ ಬರೆದಿದ್ದಾರೆ.

- Advertisement -

ಟಿ20 ಕ್ರಿಕೆಟ್‌ನಲ್ಲಿ ಅಂತಿಮ 20ನೇ ಓವರ್‌ನಲ್ಲಿ ಒಟ್ಟು 1000 ಸಾವಿರ ರನ್‌ಗಳಿಸಿದ ಎರಡನೇ ಬ್ಯಾಟರ್‌ ಎಂಬ ದಾಖಲೆ ಭಾನುವಾರ ಧೋನಿ ಪಾಲಾಗಿದೆ. ವೆಸ್ಟ್ ಇಂಡೀಸ್ ಮತ್ತು ಮುಂಬೈ ಇಂಡಿಯನ್ಸ್ ತಂಡದ ಮಾಜಿ ಆಲ್‌ರೌಂಡರ್‌ ಆಗಿದ್ದ ಕೀರಾನ್ ಪೊಲಾರ್ಡ್ ಈ ಸಾಧನೆಗೈದ ಮೊದಲ ಬ್ಯಾಟರ್‌ ಆಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ...

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ ಸಂಚು ನಡೆದಿದೆ. ಕೇಂದ್ರ ಸರ್ಕಾರ (ಮೋದಿ-ಶಾ ಜೋಡಿ) ಮತ್ತು ಚುನಾವಣಾ ಆಯೋಗ (ಗ್ಯಾನೇಶ್‌ ಕುಮಾರ್‌) ಜಂಟಿಯಾಗಿ ಎಸ್‌ಐಆರ್‌ ಹೆಸರಿನಲ್ಲಿ ಅರ್ಹ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಪಂಜಾಬ್‌ ಕಿಂಗ್ಸ್‌ ವಿರುದ್ಧದ ಭಾನುವಾರದ ಪಂದ್ಯದಲ್ಲಿ 20ನೇ ಓವರ್‌ನ ಮೊದಲ ಎಸೆತದಲ್ಲಿ ರವೀಂದ್ರ ಜಡೇಜಾ ವಿಕೆಟ್‌ ಪತನದ ಬಳಿಕ 41ರ ಹರೆಯದ ಧೋನಿ ಕ್ರೀಸ್‌ಗೆ ಆಗಮಿಸಿದ್ದರು. ಮೊದಲ ಎಸೆತದಲ್ಲಿ ರನ್‌ ಗಳಿಸಲು ವಿಫಲರಾದ ಧೋನಿ ನಂತರದ ಎಸೆತದಲ್ಲಿ ಒಂಟಿ ರನ್‌ ಪಡೆದರು. ಬಳಿಕ ಅಂತಿಮ ಎರಡು ಎಸೆತಗಳು ಇರುವಾಗ ಸ್ಟ್ರೈಕ್ ಪಡೆದ ಎಂಎಸ್‌ಡಿ, ಸ್ಯಾಮ್‌ ಕರನ್‌ ಓವರ್‌ನ ಎರಡೂ ಎಸೆತಗಳನ್ನೂ ಭರ್ಜರಿ ಸಿಕ್ಸರ್‌ಗೆ ಅಟ್ಟಿದರು.‌

ಈ ಮೂಲಕ ತಂಡದ ಮೊತ್ತವನ್ನು200ಕ್ಕೆ ತಲುಪಿಸಿದರು. ಈ ವೇಳೆ ಹಳದಿ ಹೊಳೆಯಂತೆ ಚೆಪಾಕ್‌ ಮೈದಾನಕ್ಕೆ ಹರಿದು ಬಂದಿದ್ದ ಚೆನ್ನೈ ಅಭಿಮಾನಿಗಳು ಗ್ಯಾಲರಿಯಲ್ಲಿ ಸಂಭ್ರಮದಿಂದ ಕುಣಿದಾಡಿದರು.

ಈ ಸುದ್ದಿ ಓದಿದ್ದೀರಾ?: ಅಥ್ಲೀಟ್‌ಗಳು ಬೀದಿಗಿಳಿದಿರುವುದು ನೋವು ತಂದಿದೆ; ಪ್ರತಿಭಟನಾನಿರತರಿಗೆ ನೀರಜ್‌ ಚೋಪ್ರಾ, ಕಪಿಲ್‌ ದೇವ್ ಬೆಂಬಲ

27ನೇ ಬಾರಿ 200+ ರನ್‌

ಪಂಜಾಬ್‌ ವಿರುದ್ಧ ನಿಗದಿತ 20 ಓವರ್‌ಗಳಲ್ಲಿ ಎಂಎಸ್‌ ಧೋನಿ ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ 4 ವಿಕೆಟ್‌ ನಷ್ಟದಲ್ಲಿ 200 ರನ್‌ ಗಳಿಸಿದೆ.  ಈ ಮೂಲಕ ಐಪಿಎಲ್‌ನಲ್ಲಿ ಸಿಎಸ್‌ಕೆ 27ನೇ ಬಾರಿ 200 ಪ್ಲಸ್‌ ಮೊತ್ತವನ್ನು ದಾಖಲಿಸಿದಂತಾಗಿದೆ. ಐಪಿಎಲ್‌ ಇತಿಹಾಸದಲ್ಲೇ ಇದು ದಾಖಲೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...