ಐಪಿಎಲ್‌ 16 ಎಲಿಮಿನೇಟರ್‌ | ಲಖನೌ ವಿರುದ್ಧ ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಮುಂಬೈ

Date:

Advertisements

ಐಪಿಎಲ್‌ 16ನೇ ಆವೃತ್ತಿಯ ಎಲಿಮಿನೇಟರ್​ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಚೆನ್ನೈನ ಚೆಪಾಕ್‌ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡ, ಲಖನೌ ಸೂಪರ್ ​ಜೈಂಟ್ಸ್ ಸವಾಲನ್ನು ಎದುರಿಸಲಿದೆ.

ಬುಧವಾರದ ಪಂದ್ಯ ಗೆಲ್ಲುವ ತಂಡ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆದರೆ, ಸೋತ ತಂಡ ಟೂರ್ನಿಯಿಂದಲೇ ಹೊರನಡೆಯಲಿದೆ. ಮಂಗಳವಾರ ನಡೆದ ಕ್ವಾಲಿಫೈಯರ್‌-1 ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡವನ್ನು ಮಣಿಸಿ 4 ಬಾರಿಯ ಚಾಂಪಿಯನ್‌ ಚೆನ್ನೈ, ದಾಖಲೆಯ 10ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ.

ಇಂದಿನ ಪಂದ್ಯದ ವಿಜೇತರು, ಶುಕ್ರವಾರ ಅಹಮದಾಬಾದ್‌ನಲಿ ನಡೆಯುವ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ಸವಾಲನ್ನು ಎದುರಿಸಬೇಕಿದೆ. ಐಪಿಎಲ್‌ನಲ್ಲಿ ಇದುವರೆಗೂ 9ಬಾರಿ ಪ್ಲೇ ಆಫ್‌ ಪ್ರವೇಶಿಸಿರುವ ಮುಂಬೈ ಇಂಡಿಯನ್ಸ್‌ ಕೇವಲ 1 ಪಂದ್ಯದಲ್ಲಿ ಮಾತ್ರ ಸೋಲು ಕಂಡಿದೆ.

ಕಳೆದ ಆವೃತ್ತಿಯಲ್ಲಿ ಐಪಿಎಲ್‌ಗೆ ಎಂಟ್ರಿ ಪಡೆದಿದ್ದ ಲಖನೌ ಸೂಪರ್​ ಜೈಂಟ್ಸ್​, ಮೊದಲ ಆವೃತ್ತಿಯಲ್ಲೇ ಪ್ಲೇಆಫ್​ ಪ್ರವೇಶಿಸಿತ್ತು. ಆದರೆ ಎಲಿಮಿನೇಟರ್​ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ  ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರನಡೆದಿತ್ತು. ಇದೀಗ ಸತತ ಎರಡನೇ ಆವೃತ್ತಿಯಲ್ಲೂ ಪ್ಲೇ ಆಫ್‌ ಪ್ರವೇಶಿಸಿರುವ ಲಖನೌ, ರೋಹಿತ್‌ ಬಳಗವನ್ನು ಮಣಿಸಿ ಮುಂದಿನ ಹಂತ ಪ್ರವೇಶ ನಿರೀಕ್ಷೆಯಲ್ಲಿದೆ. ನಾಯಕ ಕೆ.ಎಲ್.ರಾಹುಲ್​, ಗಾಯಗೊಂಡು ಟೂರ್ನಿಯಿಂದಲೇ ಹೊರನಡೆದರೂ ಸಹ, ಆಲ್‌ರೌಂಡರ್ ಕೃನಾಲ್​ ಪಾಂಡ್ಯ ತಂಡದ ಸಾರಥ್ಯವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.

ಮತ್ತೊಂದೆಡೆ ಐದು ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್ ತಂಡ ಈ ಬಾರಿ ಕಷ್ಟಪಟ್ಟು ಪ್ಲೇ ಆಫ್​​ಗೇರಿದೆ. ಲೀಗ್‌ ಹಂತದಲ್ಲಿ  ಆಡಿದ 14 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಮತ್ತು 6ರಲ್ಲಿ ಸೋಲು ಕಾಣುವ ಮೂಲಕ 16 ಅಂಕ ಸಂಪಾದಿಸಿತ್ತು.

ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಗುಜರಾತ್​ ವಿರುದ್ಧ ಸೋತಿದ್ದು ಮುಂಬೈ ಪಾಲಿಗೆ ವರದಾನವಾಯಿತು.

ಮುಖಾಮುಖಿ: ಉಭಯ ತಂಡಗಳು ಐಪಿಎಲ್​ನಲ್ಲಿ ಒಟ್ಟು 3 ಬಾರಿ ಎದುರಾಗಿದ್ದು, ಮುಂಬೈ ತಂಡ ಗೆಲುವಿನ ಖಾತೆ ತೆರೆಯುವಲ್ಲಿ ವಿಫಲವಾಗಿದೆ.  

ಸಂಭಾವ್ಯ ತಂಡ:

ಲಖನೌ; ಕೈಲ್ ಮೇಯರ್ಸ್, ಕ್ವಿಂಟನ್ ಡಿ ಕಾಕ್, ಪ್ರೇರಕ್ ಮಂಕಡ್, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ (ನಾಯಕ), ನಿಕೋಲಸ್ ಪೂರನ್, ಆಯುಷ್ ಬದೌನಿ, ಕೆ ಗೌತಮ್, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಯಶ್ ಠಾಕೂರ್.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ‌ (ನಾಯಕ), ಇಶಾನ್ ಕಿಶನ್, ಕ್ಯಾಮರೂನ್​ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ/ವಿಷ್ಣು ವಿನೋದ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಹೃತಿಕ್ ಶೋಕೀನ್.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ಯಾ ಕಪ್ ಫೈನಲ್ : ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ರೋಚಕ ಜಯ; 9ನೇ ಬಾರಿ ಚಾಂಪಿಯನ್

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಏಪ್ಯಾ ಕಪ್ ಫೈನಲ್...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ...

ಶೀತಲ್ ದೇವಿಗೆ ಐತಿಹಾಸಿಕ ಚಿನ್ನ; ವಿಶ್ವ ಪ್ಯಾರಾ ಆರ್ಚರಿಯಲ್ಲಿ ಭಾರತದ ಹೆಮ್ಮೆ

ದಕ್ಷಿಣ ಕೊರಿಯಾದ ಗ್ವಾಂಗ್ಜುನಲ್ಲಿ ನಡೆದ ವಿಶ್ವ ಪ್ಯಾರಾ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ...

Asia CUP2025 | ‘ಸೂಪರ್ ಓವರ್’ ಪಂದ್ಯದಲ್ಲಿ ಲಂಕಾ ಮಣಿಸಿ, ಫೈನಲ್‌ಗೆ ಭಾರತ ಲಗ್ಗೆ

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಏಷ್ಯಾ ಕಪ್‌ ಕ್ರಿಕೆಟ್‌...

Download Eedina App Android / iOS

X