ಐಪಿಎಲ್ 16ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್ಸಿಬಿ ತಂಡ ಭರ್ಜರಿ ಗೆಲುವಿನ ಆರಂಭ ಪಡೆದಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಆರ್ಸಿಬಿ ತಂಡ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 8 ವಿಕೆಟ್‌ಗಳ ಅಂತರದಲ್ಲಿ ಮಣಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ, ತಿಲಕ್ ವರ್ಮಾ ಅವರ ಏಕಾಂಗಿ ಹೋರಾಟದ [84*] ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 171 ರನ್ ಗಳಿಸಿತ್ತು.
ಆದರೆ ಚೇಸಿಂಗ್ ವೇಳೆ ಆರ್ಸಿಬಿಗೆ 171 ರನ್ ಸವಾಲಾಗಲೇ ಇಲ್ಲ. ಆರಂಭಿಕರಾದ ವಿರಾಟ್ ಕೊಹ್ಲಿ ಮತ್ತು ನಾಯಕ ಫಾಫ್ ಡುಪ್ಲೆಸ್ಸಿ ಮೊದಲ ವಿಕೆಟ್‌ಗೆ 15 ಓವರ್‌ಗಳಲ್ಲಿ 148 ರನ್‌ಗಳಿಸುವ ಮೂಲಕ ಮುಂಬೈ ಬೌಲಿಂಗ್ ದಾಳಿಯನ್ನು ಧೂಳಿಪಟ ಮಾಡಿದರು.
ಡುಪ್ಲೆಸ್ಸಿಸ್ [ 73 ರನ್, 43 ಎಸೆತ, 5 ಬೌಂಡರಿ, 6 ಸಿಕ್ಸ್] ಮತ್ತು ವಿರಾಟ್ ಕೊಹ್ಲಿ 49 ಎಸೆತಗಳಲ್ಲಿ 82 ರನ್‌ಗಳಿಸಿ ಅಜೇಯರಾಗುಳಿದರು. ಕೊಹ್ಲಿ ಅಮೋಘ ಇನ್ನಿಂಗ್ಸ್ 6 ಸಿಕ್ಸರ್ ಮತ್ತು 5 ಬೌಂಡರಿಗಳನ್ನು ಒಳಗೊಂಡಿತ್ತು.
ಮೂರನೇಯ ಕ್ರಮಾಂಕದಲ್ಲಿ ಬಂದ ದಿನೇಶ್ ಕಾರ್ತಿಕ್ ಮೂರು ಎಸೆತಗಳನ್ನು ಎದುರಿಸಿ ಖಾತೆ ತೆರೆಯುವ ಮುನ್ನವೇ ಗ್ರೀನ್ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು.