ಐಪಿಎಲ್‌ 2023 | ಗುಜರಾತ್‌ vs ಚೆನ್ನೈ: ಉಭಯ ತಂಡಗಳ ಫೈನಲ್‌ವರೆಗಿನ ಪಯಣ

Date:

ಐಪಿಎಲ್‌ 16ನೇ ಆವೃತ್ತಿಯು ಫೈನಲ್‌ ಫೈಟ್‌ಗೆ ಸಜ್ಜಾಗಿದೆ. ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ಮತ್ತು ನಾಲ್ಕು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ʻಐಪಿಎಲ್ 2023ʼ ಚಾಂಪಿಯನ್‌ ಪಟ್ಟಕ್ಕಾಗಿ ಭಾನುವಾರ ಅಹಮದಾಬಾದ್‌ನಲ್ಲಿ ಅಖಾಡಕ್ಕಿಳಿಯಲಿದೆ.

ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಳ್ಳುವ ಹುಮ್ಮಸ್ಸಿನಲ್ಲಿರುವ ಟೈಟನ್ಸ್‌ ಒಂದು ಕಡೆಯಾದರೆ, ದಿಗ್ಗಜ ನಾಯಕ ಧೋನಿಗೆ ಚಾಂಪಿಯನ್‌ ಬೀಳ್ಕೊಡುಗೆ ನೀಡಲು ಸಿಎಸ್‌ಕೆ ಕಠಿಣ ತಾಲೀಮು ನಡೆಸಿದೆ. ಮಾರ್ಚ್‌ 31 ರಂದು 10 ತಂಡಗಳೊಂದಿಗೆ ಆರಂಭವಾಗಿದ್ದ ಟೂರ್ನಿಯಲ್ಲಿ ಇದೀಗ ಅಂತಿಮವಾಗಿ ಎರಡು ತಂಡಗಳು ಚಾಂಪಿಯನ್‌ ಪಟ್ಟದ ಹೋರಾಟಕ್ಕೆ  ಸಜ್ಜಾಗಿವೆ.

ಗುಜರಾತ್‌ ಟೈಟನ್ಸ್‌

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಸಕ್ತ ಆವೃತ್ತಿಯ ಟೂರ್ನಿಯ ಲೀಗ್‌ ಹಂತದ 14 ಪಂದ್ಯಗಳಲ್ಲಿ 10ರಲ್ಲಿ ಗೆಲುವು ಸಾಧಿಸಿ 20 ಅಂಕಗಳೊಂದಿಗೆ ಮೊದಲ ತಂಡವಾಗಿ ಗುಜರಾತ್‌ ಟೈಟನ್ಸ್‌ ಪ್ಲೇ ಆಫ್‌ ಪ್ರವೇಶಿಸಿತ್ತು. ಆದರೆ  ಚೆನ್ನೈನಲ್ಲಿ ನಡೆದ ಕ್ವಾಲಿಪೈಯರ್​-1 ಪಂದ್ಯದಲ್ಲಿ ಧೋನಿ ಬಳಗಕ್ಕೆ 15 ರನ್‌ಗಳ ಅಂತರದಲ್ಲಿ  ಶರಣಾಗಿತ್ತು.

ಅತಿಹೆಚ್ಚು ರನ್‌ ಗಳಿಸಿದ ಬ್ಯಾಟರ್‌ ಮತ್ತು ಅತಿಹೆಚ್ಚು ವಿಕೆಟ್‌ ಪಡೆದ ಬೌಲರ್‌ಗೆ ನೀಡಲ್ಪಡುವ ಆರೆಂಜ್‌ ಕ್ಯಾಪ್‌ ಮತ್ತು ಪರ್ಪಲ್‌ ಕ್ಯಾಪ್‌, ಟೈಟನ್ಸ್‌ ತಂಡದ ಆಟಗಾರರ ಬಳಿ ಇರುವುದು ವಿಶೇಷ.

4 ಪಂದ್ಯಗಳಲ್ಲಿ 3 ಶತಕ ಸೇರಿದಂತೆ ಒಟ್ಟಾರೆಯಾಗಿ 16ನೇ ಆವೃತ್ತಿಯಲ್ಲಿ 16 ಪಂದ್ಯಗಳಿಂದ 851 ರನ್​ ಒಟ್ಟುಗೂಡಿಸಿರುವ ಶುಭಮನ್‌ ಗಿಲ್‌ ಆರೆಂಜ್​ ಕ್ಯಾಪ್‌ ಹೊಂದಿದ್ದಾರೆ. ಫೈನಲ್‌ನಲ್ಲೂ ಗಿಲ್‌ ತಂಡದ ʻಟ್ರಂಪ್‌ ಕಾರ್ಡ್‌ʼ ಆಗಿದ್ದಾರೆ. ಬೌಲಿಂಗ್‌ನಲ್ಲಿ ಅನುಭವಿ ವೇಗಿ ಮುಹಮ್ಮದ್‌ ಶಮಿ 16 ಪಂದ್ಯಗಳಲ್ಲಿ 28 ವಿಕೆಟ್‌ ಪಡೆಯುವ ಮೂಲಕ ಅಗ್ರಸ್ಥಾನದಲ್ಲಿದ್ದರೆ, 27 ವಿಕೆಟ್‌ ಹೊಂದುವ ಮೂಲಕ ಅದೇ ತಂಡದ ರಶೀದ್‌ ಖಾನ್‌ ಎರಡನೇ ಸ್ಥಾನದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ?: ನಾಲ್ಕು ವರ್ಷಗಳ ಹಿಂದೆ ಟೆನಿಸ್‌ ಬಾಲ್‌ ಕ್ರಿಕೆಟ್‌ ಆಡುತ್ತಿದ್ದ ಆಕಾಶ್‌ ಮಧ್ವಾಲ್‌ ಈಗ ಐಪಿಎಲ್‌ ಹೀರೋ!

ಚೆನ್ನೈ ಸೂಪರ್‌ ಕಿಂಗ್ಸ್‌

ಬಲಿಷ್ಠ ಬ್ಯಾಟಿಂಗ್‌ ಪಡೆ ಹೊಂದಿದ್ದರೂ ಸಹ ಅನುನುಭವಿ ಬೌಲಿಂಗ್‌ ವಿಭಾಗ ಹೊಂದಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ, ಟೂರ್ನಿಯ ಇತಿಹಾಸದಲ್ಲೇ ದಾಖಲೆಯ 10ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ.

ಲೀಗ್‌ ಹಂತದಲ್ಲಿ 14 ಪಂದ್ಯಗಳ ಪೈಕಿ 8 ಗೆಲುವು 5 ಸೋಲು ಕಂಡಿದ್ದ ಚೆನ್ನೈ 17 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿತ್ತು. ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದಾದ ಕಾರಣ ಉಭಯ ತಂಡಗಳು ತಲಾ 1 ಅಂಕಗಳನ್ನು ಹಂಚಿಕೊಂಡಿದ್ದವು.

ಮಾರ್ಚ್‌ 31ರಂದು ಅಹಮದಾಬಾದ್‌ನಲ್ಲಿ ನಡೆದಿದ್ದ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಗುಜರಾತ್‌ ಟೈಟನ್ಸ್‌ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆತಿಥೇಯ ಟೈಟನ್ಸ್‌ 5 ವಿಕೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸಿತ್ತು. ಆದರೆ ಈ ಸೋಲಿಗೆ ಕ್ವಾಲಿಪೈಯರ್​-1 ಪಂದ್ಯದಲ್ಲಿ ಧೋನಿ ಬಳಗ  ತವರು ನೆಲದಲ್ಲೇ ಸೇಡು ತೀರಿಸಿಕೊಂಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ‘ಮ್ಯಾಚ್ ವಿನ್ನರ್’ ಆದ ದಿನೇಶ್ ಕಾರ್ತಿಕ್: ಆರ್‌ಸಿಬಿಗೆ ರೋಚಕ ಜಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ದಿನೇಶ್...

ಐಪಿಎಲ್ | ಅಲ್‌ಝಾರಿ ಜೋಸೆಫ್ ದುಬಾರಿ ಬೌಲಿಂಗ್; ಆರ್‌ಸಿಬಿಗೆ ಗೆಲ್ಲಲು 177 ರನ್‌ಗಳ ಗುರಿ ನೀಡಿದ ಪಂಜಾಬ್

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ನ 6ನೇ ಪಂದ್ಯವು ರಾಯಲ್ ಚಾಲೆಂಜರ್ಸ್‌...

ಐಪಿಎಲ್ ಸಂಪೂರ್ಣ ವೇಳಾಪಟ್ಟಿ ಪ್ರಕಟ: ಫೈನಲ್ ಪಂದ್ಯ ದಕ್ಷಿಣ ಭಾರತದಲ್ಲಿ ಆಯೋಜನೆ

ಬಿಸಿಸಿಐ ಇಂದು ಐಪಿಎಲ್‌ 2024ರ ಎರಡನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ....

ಐಪಿಎಲ್ | ಉಮೇಶ್ ಯಾದವ್ ಸಾಹಸ: ಮುಂಬೈ ವಿರುದ್ಧ ಗುಜರಾತ್‌ಗೆ 6 ರನ್‌ಗಳ ರೋಚಕ ಜಯ

ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 5ನೇ...