ಐಪಿಎಲ್‌ 2023 | ಚೆನ್ನೈ ವಿರುದ್ಧ ಅಂತಿಮ ಎಸೆತದಲ್ಲಿ ಗೆದ್ದ ಪಂಜಾಬ್‌!

Date:

ಅಂತಿಮ ಎಸೆತದವರೆಗೂ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದ ಪಂದ್ಯದಲ್ಲಿ ಚೆನ್ನೈ ವಿರುದ್ಧ ಪಂಜಾಬ್‌ ಕಿಂಗ್ಸ್‌, 4 ವಿಕೆಟ್‌ಗಳ ವೀರೋಚಿತ ಜಯ ಸಾಧಿಸಿದೆ.  

- Advertisement -

ಚೆನ್ನೈನ ಚೆಪಾಕ್‌ ಮೈದಾನದಲ್ಲಿ ನಡೆದ ಐಪಿಎಲ್‌ನ 16ನೇ ಆವೃತ್ತಿಯ 41ನೇ ಪಂದ್ಯದ ಫಲಿತಾಂಶಕ್ಕಾಗಿ ಇನ್ನಿಂಗ್ಸ್‌ನ ಕೊನೆಯ ಎಸೆತದವರೆಗೂ ಕಾಯಬೇಕಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ್ದ ಆತಿಥೇಯ ಚೆನ್ನೈ ಸೂಪರ್‌ ಕಿಂಗ್ಸ್ ಡೆವೋನ್‌ ಕಾನ್ವೆ ಗಳಿಸಿದ ಅಜೇಯ 92 ರನ್‌ಗಳ ನೆರವಿನಿಂದ 4 ವಿಕೆಟ್‌ ನಷ್ಟದಲ್ಲಿ 200 ರನ್‌ ಗಳಿಸಿತ್ತು.

ಚೇಸಿಂಗ್‌ ವೇಳೆ ಪಂಜಾಬ್‌ ಕಿಂಗ್ಸ್‌ 19 ಓವರ್‌ಗಳಲ್ಲಿ 192 ರನ್‌ಗಳಿಸಿತ್ತು. ಉಳಿದ 6 ಎಸೆತಗಳಲ್ಲಿ 9 ರನ್‌ಗಳಿಸಬೇಕಾದ ಸುಲಭ ಗುರಿ ಪಂಜಾಬ್‌ ಮುಂದಿತ್ತು. ಆದರೆ ಅಂತಿಮ ಓವರ್‌ ಎಸೆದ ಯುವ ವೇಗಿ ಪತಿರಾನ ಮೊದಲ 5 ಎಸೆತಗಳಲ್ಲಿ 6 ರನ್‌ ಮಾತ್ರ ಬಿಟ್ಟು ಕೊಡುವ ಮೂಲಕ ಪಂದ್ಯವನ್ನು ರೋಚಕ ಘಟ್ಟಕ್ಕೆ ಕೊಂಡೊಯ್ದರು.  

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಕೋಪದಲ್ಲಿ ಕಿರುಚಾಡಿದ ಕೂಲ್ ಕ್ಯಾಪ್ಟನ್‌ ಧೋನಿ!

ಅಂತಿಮ ಎಸೆತದಲ್ಲಿ ಪಂಜಾಬ್‌ ಗೆಲುವಿಗೆ 3 ರನ್‌ಗಳ ಅಗತ್ಯವಿತ್ತು. ಪತಿರಾನ ಎಸೆದ ಶಾರ್ಟ್‌ ಲೆಂತ್‌ ಚೆಂಡನ್ನು ಸ್ಕ್ವಾರ್‌ ಲೆಗ್‌ ಕಡೆಗೆ ಬಾರಿಸುವಲ್ಲಿ ಸ್ಟ್ರೈಕ್‌ನಲ್ಲಿದ್ದ ಸಿಖಂದರ್‌ ರಝಾ ಯಶಸ್ವಿಯಾದರು. ಬೌಂಡರಿ ಲೈನ್‌ ಬಳಿ ರವೀಂದ್ರ ಜಡೇಜಾ ಚೆಂಡನ್ನು ತಡೆದರಾದರೂ ಸಹ, ಈ ನಡುವೆ ರಝಾ-ಶಾರೂಖ್‌ ಖಾನ್‌ ಜೋಡಿ ಮೂರು ರನ್‌ಗಳ ಓಟವನ್ನು ಪೂರ್ತಿಗೊಳಿಸಿ ತಂಡಕ್ಕೆ ಸ್ಮರಣೀಯ ಗೆಲುವು ತಂದಿತ್ತರು.  

 

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...