ಐಪಿಎಲ್ 2023 | ಕೆಕೆಆರ್‌ ಬೌಲಿಂಗ್‌ ದಾಳಿಗೆ ಆರ್‌ಸಿಬಿ ಧೂಳೀಪಟ; ಮೊದಲ ಗೆಲುವು ದಾಖಲಿಸಿದ ಕೋಲ್ಕತ್ತಾ

Date:

ತವರಿನಲ್ಲಿ ಮೊದಲ ಗೆಲುವು ದಾಖಲಿಸಿ ಹುಮ್ಮಸ್ಸಿನಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 81 ರನ್‌ಗಳ ಮುಖಭಂಗ ಅನುಭವಿಸಿತು.

- Advertisement -

ಕೋಲ್ಕತ್ತಾದ ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್‌ ನೀಡಿದ 205 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ವರುಣ್ ಚಕ್ರವರ್ತಿ,ಸುನಿಲ್ ನರೈನ್ ಹಾಗೂ ಸುಯಶ್ ಶರ್ಮಾ ಅವರ ಅಮೋಘ ಬೌಲಿಂಗ್‌ ದಾಳಿಗೆ ಕುಸಿದು 17.4 ಓವರ್‌ಗಳಲ್ಲಿ 123 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ನಿತೀಶ್‌ ರಾಣಾ ಪಡೆಗೆ ಮೊದಲ ಗೆಲುವಿನ ಉಡುಗೊರೆ ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆರಂಭದಲ್ಲಿ ಉತ್ಸಾಹದೊಂದಿಗೆ ಬ್ಯಾಟಿಂಗ್‌ ಆರಂಭಿಸಿದ ನಾಯಕ ಫಾಫ್ ಡುಪ್ಲೆಸಿಸ್ 12 ಎಸೆತಗಳಲ್ಲಿ 2 ಸಿಕ್ಸರ್‌ ಹಾಗೂ 2 ಬೌಂಡರಿಯೊಂದಿಗೆ 22 ಬಾರಿಸಿದರೂ ವರುಣ್ ಚಕ್ರವರ್ತಿ ಆಘಾತ ನೀಡಿದರು. ಇತ್ತ 21 ರನ್‌ ಗಳಿಸಿದ್ದ ವಿರಾಟ್‌ ಕೊಹ್ಲಿ ಕೂಡ ಸುನೀಲ್‌ ನರೈನ್‌ ಬೌಲಿಂಗ್‌ನಲ್ಲಿ ಬೌಲ್ಡ್‌ ಆದರು.

ಪ್ರಮುಖ ಬ್ಯಾಟರ್‌ಗಳಾದ ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ ಅವರು ಕೆಕೆಆರ್‌ ಬೌಲರ್‌ಗಳ ದಾಳಿಗೆ ಒಬ್ಬರ ಹಿಂದೆ ಒಬ್ಬರು ಪೆಲಿಯನ್‌ ಕಡೆ ಹೆಜ್ಜೆ ಹಾಕಿದರು.

ವರುಣ್‌ ಚಕ್ರವರ್ತಿ 15/4, ಸುಯೇಶ್ ಶರ್ಮಾ 30/3, ಸುನಿಲ್ ನರೈನ್ 16/2 ಹಾಗೂ ಶಾರ್ಧೂಲ್‌ ಠಾಕೂರ್ 15/1 ವಿಕೆಟ್ ಕಬಳಿಸಿ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು.

ಈ ಮೊದಲು ಟಾಸ್‌ ಸೋತ ಕೆಕೆಆರ್‌ ನಾಲ್ಕು ಓವರ್‌ಗಳಾಗುವಷ್ಟರಲ್ಲೇ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು.ಆರಂಭಿಕ ಆಟಗಾರ ರಹ್ಮಾಮಾನುಲ್ಲಾ ಮಾತ್ರ ಬ್ಯಾಟ್‌ ಬೀಸುತ್ತಿದ್ದರೆ, ನಾಯಕ ನಿತೀಶ್ ರಾಣಾ,ಆಂಡ್ರೆ ರಸೆಲ್ ಸೇರಿ ಪ್ರಮುಖ ಬ್ಯಾಟರ್‌ಗಳು ಪೆವಿಲಿಯನ್‌ ಸೇರುತ್ತಿದ್ದರು.

ಹನ್ನೆರಡನೇ ಓವರ್‌ನಲ್ಲಿ 44 ಎಸೆತಗಳಲ್ಲಿ 57 ರನ್‌ ಗಳಿಸಿ ರಹ್ಮಾಮಾನುಲ್ಲಾ ಔಟಾದ ನಂತರ ಸ್ಫೋಟಕ ಆಟವನ್ನು ಆರಂಭಿಸಿದವರು ಆಲ್‌ರೌಂಡರ್‌ ಶಾರ್ದೂಲ್ ಠಾಕೂರ್. ಶಾರ್ದೂಲ್‌ಗೆ ತಾಳ್ಮೆಯ ಆಟವಾಡಿ ರಿಂಕು ಸಿಂಗ್‌ ಜೊತೆಯಾದರು.

ಕೇವಲ 29 ಚಂಡುಗಳಲ್ಲಿ 3 ಭರ್ಜರಿ ಸಿಕ್ಸರ್ ಹಾಗೂ 9 ಆಕರ್ಷಕ ಬೌಂಡರಿಗಳ ಮೂಲಕ 69 ರನ್‌ ಸ್ಫೋಟಿಸಿದರು. ಇವರಿಬ್ಬರು 45 ಚಂಡುಗಳಲ್ಲಿ 103 ರನ್‌ ಜೊತೆಯಾಟವಾಡಿ ತಂಡದ ಮೊತ್ತವನ್ನು 20 ಓವರ್‌ಗಳಲ್ಲಿ 204 ರನ್‌ಗೆ ಕೊಂಡೊಯ್ದರು.

ರಿಂಕು ಸಿಂಗ್‌ ಕೂಡ 33 ಎಸೆತಗಳಲ್ಲಿ 2 ಬಾಂಡರಿ ಹಾಗೂ 3 ಸಿಕ್ಸರ್‌ನೊಂದಿಗೆ 46 ರನ್‌ ಗಳಿಸಿದರು. ಆರ್‌ಸಿಬಿ ಪರ ಕರಣ್‌ ಶರ್ಮಾ , ಡೇವಿಡ್‌ ವಿಲ್ಲಿ ತಲಾ 2 ವಿಕೆಟ್‌ ಪಡೆದರೆ, ಮೈಕಲ್ ಬ್ರೇಸ್‌ವೆಲ್, ಹರ್ಷಲ್‌ ಪಟೇಲ್‌ ತಲಾ ಒಂದೊಂದು ವಿಕೆಟ್ ಕಬಳಿಸಿದರು.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...