ಐಪಿಎಲ್‌ 2023 | ತವರಿನಂಗಳದ ಕೊನೆಯ ಪಂದ್ಯದಲ್ಲಿ ಎಡವಿದ ಧೋನಿ ಪಡೆ

Date:

  • ಪ್ಲೇ ಆಫ್‌ ಪಯಣದಲ್ಲಿ ಧೋನಿ ಪಡೆಗೆ ಹಿನ್ನಡೆ
  • ಕೆಕೆಆರ್‌ ವಿರುದ್ಧ ಚೆನ್ನೈ ತಂಡಕ್ಕೆ ಸೋಲು

ಐಪಿಎಲ್‌ 16ನೇ ಆವೃತ್ತಿಯ ಪ್ಲೇ ಆಫ್‌ ಕುತೂಹಲ ಮತ್ತೆ ಮುಂದುವರಿದಿದೆ. ಭಾನುವಾರದ ಎರಡನೇ ಪಂದ್ಯದಲ್ಲಿ ತವರಿನಂಗಳದಲ್ಲಿಯೇ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಕೆಕೆಆರ್‌ ವಿರುದ್ಧ ಸೋಲು ಕಂಡಿದೆ. ಆ ಮೂಲಕ ಪ್ಲೇ ಆಫ್‌ ಪಯಣದಲ್ಲಿ ಧೋನಿ ಪಡೆ ಹಿನ್ನಡೆ ಕಂಡಿದೆ.

- Advertisement -

ಸಿಎಸ್‌ಕೆ ಮುಂದಿಟ್ಟಿದ್ದ 145 ರನ್‌ಗಳ ಸಾಮಾನ್ಯ ಸವಾಲನ್ನು ಕೋಲ್ಕತ್ತಾ ನೈಟ್‌ ರೈಡರ್ಸ್‌ 18.3 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟದಲ್ಲಿ ಸುಲಭವಾಗಿಯೇ ಚೇಸ್‌ ಮಾಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

15 ಅಂಕಗಳನ್ನು ಹೊಂದಿರುವ ಚೆನ್ನೈ, ಮೇ 20ರಂದು ನಡೆಯುವ ಲೀಗ್‌ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಎದುರಿಸಲಿದೆ. ಪ್ಲೇ ಆಫ್‌ ಪ್ರವೇಶಿಸಲು ಚೆನ್ನೈ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

13 ಪಂದ್ಯಗಳಿಂದ ಕೆಕೆಆರ್‌ 12 ಅಂಕಗಳನ್ನು ಹೊಂದಿದ್ದು, ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಅಂತಿಮ ಪಂದ್ಯವನ್ನಾಡಲಿದೆ.

ಕೈ ಕೊಟ್ಟ ಬ್ಯಾಟಿಂಗ್‌!   

ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡುವ ಧೋನಿ ನಿರ್ಧಾರ ತಂಡಕ್ಕೆ ನೆರವಾಗಲಿಲ್ಲ. ನಿಧಾನಗತಿಯಲ್ಲಿ ಬ್ಯಾಟಿಂಗ್‌ ನಡೆಸಿದ ಚೆನ್ನೈ ಮೊದಲ 10 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟದಲ್ಲಿ 68 ರನ್‌ಗಳಿಸಿತ್ತು. ನಂತರದ 10 ಓವರ್‌ಗಳಲ್ಲಿ ಗಳಿಸಿದ್ದು 76 ರನ್‌.

ಶಿವಂ ದುಬೆ ಅಜೇಯ 48 ಮತ್ತು ಆರಂಭಿಕ ಡೆವೋನ್‌ ಕಾನ್ವೆ 30 ರನ್‌ಗಳಿಸಿದ್ದು ಹೊರತು ಪಡಿಸಿದರೆ ಉಳಿದ ಬ್ಯಾಟರ್‌ಗಳು ತಂಡಕ್ಕೆ ನೆರವಾಗಲಿಲ್ಲ.

ರಾಣಾ-ರಿಂಕು ಶತಕದ ಜೊತೆಯಾಟ

ಚೇಸಿಂಗ್‌ ವೇಳೆ ಕೆಕೆರ್‌ 33 ರನ್‌ಗಳಿಸುವಷ್ಟರಲ್ಲಿ 3 ವಿಕೆಟ್‌ ಕಳೆದುಕೊಂಡಿತ್ತು. ಈ ವೇಳೆ ಜೊತೆಯಾದ ನಾಯಕ ನಿತೀಶ್‌ ರಾಣಾ ಮತ್ತು ಎಡಗೈ ಬ್ಯಾಟರ್‌ ರಿಂಕು ಸಿಂಗ್‌ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ರಿಂಕು ಸಿಂಗ್‌ 54 ರನ್‌ಗಳಿಸಿದ್ದ ವೇಳೆ ರನೌಟ್‌ಗೆ ಬಲಿಯಾದರು. ರಾಣಾ 57 ರನ್‌ಗಳಿಸಿ ಅಜೇಯರಾಗುಳಿದರು.   

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...