ಐಪಿಎಲ್‌ 2023 | ಈಡನ್​ ಗಾರ್ಡನ್‌ನಲ್ಲಿ ಆರ್​ಸಿಬಿ- ಕೆಕೆಆರ್​ ಮುಖಾಮುಖಿ​

Date:

ಐಪಿಎಲ್‌ 16ನೇ ಆವೃತ್ತಿಯ 9ನೇ ಪಂದ್ಯದಲ್ಲಿ ಗುರುವಾರ ಕೋಲ್ಕತ್ತಾ ನೈಟ್ ರೈಡರ್ಸ್‌ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಲಿವೆ. ಕೋಲ್ಕತ್ತಾದ ಈಡನ್​ ಗಾರ್ಡನ್​ ಮೈದಾನದಲ್ಲಿ ರಾತ್ರಿ 7.30ಕ್ಕೆ ಪಂದ್ಯ ಪ್ರಾರಂಭವಾಗಲಿದೆ.

ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್‌ ತಂಡವನ್ನು ತವರಿನಲ್ಲಿ ಮಣಿಸಿದ ಹುಮ್ಮಸ್ಸಿನಲ್ಲಿರುವ ಫಾಫ್ ಡು ಪ್ಲೆಸಿಸ್ ಸಾರಥ್ಯದ ಆರ್‌ಸಿಬಿ, ಕೆಕೆಆರ್ ಜೊತೆಗಿನ ಎರಡನೇ ಪಂದ್ಯದಲ್ಲೂ ಗೆಲ್ಲುವ ಫೆವರಿಟ್‌ ತಂಡವಾಗಿ ಕಣಕ್ಕಿಳಿಯಲಿದೆ.  

ಮತ್ತೊಂದೆಡೆ ತನ್ನ ಮೊದಲನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲು ಅನುಭವಿಸಿದ್ದ ನಿತೀಶ್ ರಾಣಾ ನೇತೃತ್ವದ ಕೋಲ್ಕತಾ ನೈಟ್‌ ರೈಡರ್ಸ್, ತವರು ಅಭಿಮಾನಿಗಳ ಬೆಂಬಲದೊಂದಿಗೆ ಆರ್‌ಸಿಬಿ ವಿರುದ್ಧ ಗೆದ್ದು ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸುವ ನಿರೀಕ್ಷೆಯಲ್ಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಐಪಿಎಲ್​ನಲ್ಲಿ ಈವರೆಗೂ ಒಟ್ಟು 30 ಬಾರಿ ಮುಖಾಮುಖಿ ಆಗಿವೆ. ಇದರಲ್ಲಿ ಕೆಕೆಆರ್​ ತಂಡವು 16 ಬಾರಿ ಮತ್ತು ಆರ್‌ಸಿಬಿ 14 ಗೆಲುವು ಕಂಡಿದೆ.

ಕೆಕೆಆರ್ ಸೇರಿದ ಜೇಸನ್ ರಾಯ್

ಬೆನ್ನು ನೋವಿನ ಸಮಸ್ಯೆಯಿಂದ ಕೆಕೆಆರ್ ನಾಯಕ ಶ್ರೇಯಸ್‌ ಅಯ್ಯರ್‌ ಈ ಬಾರಿಯ ಐಪಿಎಲ್‌ ಟೂರ್ನಿಯಿಂದಲೇ ಹೊರ ನಡೆದಿದ್ದಾರೆ. ಮತ್ತೋರ್ವ ಪ್ರಮುಖ ಆಲ್‌ರೌಂಡರ್‌ ಶಕಿಬ್‌ ಅಲ್ ಹಸನ್‌ ಅವರು ಈ ಟೂರ್ನಿಗೆ ಅಲಭ್ಯರಾಗಿದ್ದಾರೆ.

ಹೀಗಾಗಿ ಶಕಿಬ್ ಬದಲಿ ಆಟಗಾರನಾಗಿ ಇಂಗ್ಲೆಂಡ್​ನ ಸ್ಫೋಟಕ ಓಪನರ್​ ಜೇಸನ್ ರಾಯ್ ಜತೆ ಕೆಕೆಆರ್ ಒಪ್ಪಂದ ಮಾಡಿಕೊಂಡಿದೆ. ಜೇಸನ್ ರಾಯ್ ಅವರನ್ನು ₹2.8 ಕೋಟಿಗೆ ಖರೀದಿಸಿದೆ.

2017ರಲ್ಲಿ ಮೊದಲ ಬಾರಿಗೆ ಐಪಿಎಲ್​ ಅಖಾಡಕ್ಕೆ ಎಂಟ್ರಿಕೊಟ್ಟಿದ ರಾಯ್, ಇದುವರೆಗೆ 13 ಪಂದ್ಯಗಳನ್ನಾಡಿದ್ದಾರೆ. 29.90 ಸರಾಸರಿಯಲ್ಲಿ ಒಟ್ಟು 329 ರನ್ ಗಳಿಸಿದ್ದಾರೆ. ಕಳೆದ ಬಾರಿ ಜೇಸನ್‌ರನ್ನು ಗುಜರಾತ್ ಟೈಟಾನ್ಸ್ ₹2 ಕೋಟಿಗೆ ಖರೀದಿಸಿತ್ತು. ಆದರೆ ಟೂರ್ನಿಯಿಂದ ರಾಯ್​ ಹಿಂದೆ ಸರಿದಿದ್ದರು.‌

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 |ನಾಥನ್ ಎಲ್ಲಿಸ್ ಮಾರಕ ಬೌಲಿಂಗ್; ಪಂಜಾಬ್‌ಗೆ…

ಸಂಭಾವ್ಯ ತಂಡ:

ಕೋಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ (ನಾಯಕ), ಮನದೀಪ್ ಸಿಂಗ್, ರಹ್ಮಾಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಾರ್ದೂಲ್ ಠಾಕೂರ್, ಆಂಡ್ರೆ ರಸೆಲ್, ಟಿಮ್ ಸೌಥಿ, ಸುನಿಲ್ ನರೈನ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ, ಅನುಕುಲ್ ರಾಯ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಕರಣ್‌ ಶರ್ಮಾ, ಹರ್ಷಲ್ ಪಟೇಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಮುಹಮ್ಮದ್ ಸಿರಾಜ್.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳೆಯರ ವಿಂಬಲ್ಡನ್ ಫೈನಲ್: ಜಾಸ್ಮಿನ್ ಪಾವೊಲಿನಿ ಸೋಲಿಸಿ ಬಾರ್ಬೊರಾ ಕ್ರೆಚಿಕೋವಾ ಚಾಂಪಿಯನ್

ಲಂಡನ್‌ನಲ್ಲಿ ನಡೆದ 2024ರ ವಿಂಬಲ್ಡನ್ ಟೂರ್ನಿಯ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ಜಾಸ್ಮಿನ್...

ಇಂಗ್ಲೆಂಡ್ v/s ವೆಸ್ಟ್‌ ಇಂಡೀಸ್‌ | ಇಂಗ್ಲೆಂಡ್‌ಗೆ ಇನ್ನಿಂಗ್ಸ್‌ ಗೆಲುವು; ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ ಆ್ಯಂಡರ್ಸನ್‌

ಲಂಡನ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ಮತ್ತು ವೆಸ್ಟ್‌ ಇಂಡೀಸ್‌ ನಡುವಿನ...

ಯೂರೋ ಕಪ್ | ನೆದರ್‌ಲೆಂಡ್ಸ್ ಮಣಿಸಿ ಇಂಗ್ಲೆಂಡ್ ಫೈನಲ್‌ಗೆ; ಸ್ಪೇನ್ ವಿರುದ್ಧ ಪೈಪೋಟಿ

ನೆದರ್​ಲೆಂಡ್ಸ್ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಹೆಚ್ಚುವರಿ 91ನೇ ನಿಮಿಷದಲ್ಲಿ ಬದಲಿ ಆಟಗಾರ...

ಕೆಲವೇ ತಿಂಗಳ ಅಂತರದಲ್ಲಿ ಏಳು-ಬೀಳು ಎದುರಿಸಿ ಗೆದ್ದು ಬಂದ ಹಾರ್ದಿಕ್ ಪಾಂಡ್ಯ!

ಅಂದು ಡಿಸೆಂಬರ್ 19, 2023. ಐಪಿಎಲ್ 2024ರ ಪಂದ್ಯಾವಳಿಯ ಹರಾಜಿನ ಸಮಯ....