ಐಪಿಎಲ್‌ 2023 | ಲಕ್ನೋ vs ಮುಂಬೈ; ಗೆದ್ದರಷ್ಟೇ ಉಳಿಗಾಲ!

Date:

  • ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ಇಂದು ಹೈ ವೋಲ್ಟೇಜ್‌ ಪಂದ್ಯ
  • ಪ್ಲೇ ಆಫ್‌ ಹಂತಕ್ಕೇರಲು ಉಭಯ ತಂಡಗಳಿಗೂ ಗೆಲುವು ಅನಿವಾರ್ಯ

ಐಪಿಎಲ್‌ 16ನೇ ಆವೃತ್ತಿಯ 63ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ತಂಡಗಳು ಮಂಗಳವಾರ (ಮೇ 16) ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ.  

ಪ್ಲೇ ಆಫ್‌ ಹಂತಕ್ಕೇರಲು ಉಭಯ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಲಿದೆ. ಸೋಲುವ ತಂಡ ಕ್ವಾಲಿಫೈಯರ್‌ ರೇಸ್‌ನಿಂದ ಹೊರಬೀಳಲಿದೆ.

ಲೀಗ್‌ ಹಂತದ  14 ಪಂದ್ಯಗಳ ಪೈಕಿ ಉಭಯ ತಂಡಗಳು ಈಗಾಗಲೇ 12 ಪಂದ್ಯಗಳನ್ನಾಡಿವೆ. ಮುಂಬೈ 14 ಮತ್ತು ಲಕ್ನೋ 13 ಅಂಕಗಳನ್ನು ಹೊಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇಂದಿನ ಪಂದ್ಯದ ಫಲಿತಾಂಶ ಇತ್ತಂಡಗಳನ್ನು ಹೊರತುಪಡಿಸಿ ಆರ್‌ಸಿಬಿ ಪಾಲಿಗೂ ಮಹತ್ವದ್ದಾಗಿದೆ. ಮುಂಬೈ ವಿರುದ್ಧ ಲಕ್ನೋ ತಂಡದ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ ಆರ್‌ಸಿಬಿ ಅಭಿಮಾನಿಗಳು.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಹೀಗಿದೆ ಪ್ಲೇ ಆಫ್‌ ಲೆಕ್ಕಾಚಾರ

ಈ ಬಾರಿಯ ಐಪಿಎಲ್‌ ಟೂರ್ನಿಯ ಲೀಗ್‌ ಹಂತದ ಒಟ್ಟು 70 ಪಂದ್ಯಗಳಲ್ಲಿ62 ಪಂದ್ಯಗಳು ಮುಕ್ತಾಯ ಕಂಡಿದೆ. ಆದರೆ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡ ಮಾತ್ರವೇ ಪ್ಲೇ ಆಫ್‌ ಹಂತವನ್ನು ಪ್ರವೇಶಿಸಿದೆ. ಉಳಿದ ಮೂರು ಸ್ಥಾನಗಳಿಗಾಗಿ ನಾಲ್ಕು ತಂಡಗಳ ನಡುವೆ (ಸಿಎಸ್‌ಕೆ, ಮುಂಬೈ, ಲಕ್ನೋ, ಆರ್‌ಸಿಬಿ) ತೀವ್ರ ಪೈಪೋಟಿ ಎದುರಾಗಿದೆ.

ಸೋಮವಾರ ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್‌ ತಂಡ, ಹೈದರಾಬಾದ್‌ ಪಡೆಯನ್ನು 34 ರನ್‌ಗಳ ಅಂತರದಲ್ಲಿ ಭರ್ಜರಿಯಾಗಿ ಮಣಿಸಿತ್ತು. ಹೀಗಾಗಿ 18 ಅಂಕಗಳನ್ನು ಹೊಂದುವುದರ ಮೂಲಕ ಮೊದಲ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ.

ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲಿರುವ ಚೆನ್ನೈ ಬಳಿ 15 ಅಂಕಗಳಿದ್ದು, ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಸವಾಲನ್ನು ಎದುರಿಸಲಿದೆ. ಕ್ವಾಲಿಫೈಯರ್‌ ಹಂತಕ್ಕೆ ತೇರ್ಗಡೆಯಾಗಲು ಧೋನಿ ಬಳಗಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...