ಐಪಿಎಲ್ 2023 | ಆರ್‌ಸಿಬಿ vs ಸಿಎಸ್‌ಕೆ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೈ ವೋಲ್ಟೇಜ್ ಪಂದ್ಯ

Date:

ಐಪಿಎಲ್ 16ನೇ ಆವೃತ್ತಿಯಲ್ಲಿ ಅತ್ಯಂತ ಕುತೂಹಲ ಕೆರಳಿಸಿರುವ ಪಂದ್ಯ ಸೋಮವಾರ [ ಏಪ್ರಿಲ್ 17] ನಡೆಯಲಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈ ವೋಲ್ಟೇಜ್ ಕದನದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು- ಆರ್‌ಸಿಬಿ ಮತ್ತು ಎಂಎಸ್ ಧೋನಿ ಸಾರಥ್ಯದ ಬಲಿಷ್ಠ ಚೆನೈ ಸೂಪರ್ ಕಿಂಗ್ಸ್ – ಸಿಎಸ್‌ಕೆ ತಂಡಗಳು ಮುಖಾಮುಖಿಯಾಗಲಿವೆ.

ಘಟಾನುಘಟಿ ಬ್ಯಾಟಿಂಗ್ ಲೈನ್ ಅಪ್ ಹೊಂದಿರುವ ಚೆನ್ನೈ ತಂಡ ಮೇಲ್ನೋಟಕ್ಕೆ ಪಂದ್ಯ ಗೆಲ್ಲುವ ನೆಚ್ಚಿನ ತಂಡವಾಗಿ ಕಾಣಿಸುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆದರೆ, ಶನಿವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿರುವ ಡುಪ್ಲೆಸಿಸ್ ತಂಡ ಸಿಎಸ್‌ಕೆ ವಿರುದ್ಧವೂ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ.

ಮಾಜಿ‌ ನಾಯಕ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಕಳೆದ ನಾಲ್ಕು ಪಂದ್ಯಗಳಲ್ಲಿ 3 ಅರ್ಧ ಶತಕ ಗಳಿಸಿ ಉತ್ತಮ ಫಾರ್ಮ್‌ನಲ್ಲಿರುವುದು ಆರ್‌ಸಿಬಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ನಾಯಕ ಫಾಫ್ ಡುಪ್ಲೆಸಿಸ್ ಮತ್ತು ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ನಿರ್ಣಾಯಕ ರನ್‌ಗಳಿಸುವ ಮೂಲಕ ತಂಡಕ್ಕೆ ನೆರವಾಗುತ್ತಿದ್ದಾರೆ.

ಆದರೆ ಕಳೆದ ಋತುವಿನಲ್ಲಿ ಅದ್ಭುತ ಪ್ರದರ್ಶನದ ಮೂಲಕ ಮಿಂಚು ಹರಿಸಿದ್ದ ವಿಕೆಟ್‌ ಕೀಪರ್‌ ಹಾಗೂ ಫಿನಿಶರ್‌ ದಿನೇಶ್‌ ಕಾರ್ತಿಕ್‌, ಈ ಆವೃತ್ತಿಯಲ್ಲಿ ಇದುವರೆಗೂ ಆಡಿದ ನಾಲ್ಕು ಪಂದ್ಯಗಳಲ್ಲಿ ಒಟ್ಟು 10 ರನ್ [0, 9, 1, 0] ಗಳಿಸಲಷ್ಟೇ ಶಕ್ತರಾಗಿದ್ದಾರೆ. ಹಿನ್ನೆಲೆಯಲ್ಲಿ

ಈ ಹಿನ್ನೆಲೆಯಲ್ಲಿ ಇಂದಿನ ಮಹತ್ವದ ಪಂದ್ಯದಲ್ಲಿ ಫಾರ್ಮ್ ಕಂಡುಕೊಳ್ಳುವುದು ಕಾರ್ತಿಕ್ ಪಾಲಿಗೆ ಅನಿವಾರ್ಯವಾಗಿದೆ‌.

ಉಭಯ ತಂಡಗಳು ಪ್ರಸಕ್ತ ಟೂರ್ನಿಯಲ್ಲಿ ತಲಾ ನಾಲ್ಕು ಪಂದ್ಯಗಳನ್ನಾಡಿವೆ. ಇದರಲ್ಲಿ ತಲಾ 2 ಸೋಲು ಮತ್ತು ಗೆಲುವು ಕಂಡಿವೆ. ಸೋಮವಾರ ತವರಿನ ಅಂಗಣದಲ್ಲಿ ಆರ್‌ಸಿಬಿ ಸತತ 2ನೇ ಗೆಲುವನ್ನು ಎದುರು ನೋಡುತ್ತಿದೆ.

ರಾಜಸ್ಥಾನ ರಾಯಲ್ಸ್‌ ವಿರುದ್ಧದ ಕೊನೆಯ ಪಂದ್ಯದಲ್ಲಿ ಚೆನೈ ನಾಯಕ ಎಂಎಸ್ ಧೋನಿ ಅಂತಿಮ ಎಸೆತದವರೆಗೂ ಗೆಲುವಿಗಾಗಿ ಹೋರಾಟ ನಡೆಸಿದ್ದರು. ಆದಾಗ್ಯೂ ತಂಡದ 2ನೇ ಸೋಲು ತಪ್ಪಿಸಲು ಸಾಧ್ಯವಾಗಲಿಲ್ಲ.

ಆದರೆ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸೋಮವಾರ ಧೋನಿ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ. ಡೆವೊನ್‌ ಕಾನ್ವೆ , ಋತುರಾಜ್‌ ಗಾಯಕ್ವಾಡ್‌ ಮತ್ತು ಅಜಿಂಕ್ಯ ರಹಾನೆ ಉತ್ತಮ ಫಾರ್ಮ್‌ನಲ್ಲಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೆಲುವಿಗೆ ಕಾರಣವಾದ 20 ರನ್ ಸಿಡಿಸಿದ ಧೋನಿ; ಐಪಿಎಲ್‌ನಲ್ಲಿ ವಿಶೇಷ ದಾಖಲೆ

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್‌...

ಐಪಿಎಲ್ 2024 | ಸಾಲ್ಟ್ ಅಮೋಘ ಆಟ: 4ನೇ ಗೆಲುವು ದಾಖಲಿಸಿದ ಕೆಕೆಆರ್

ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅಮೋಘ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್...

ಐಪಿಎಲ್ 2024 | ಕೆಕೆಆರ್‌ಗೆ ಸಾಧಾರಣ ಗುರಿ ನೀಡಿದ ಲಖನೌ

ಸ್ಫೋಟಕ ಆಟಗಾರ ನಿಕಲೋಸ್‌ ಪೂರನ್‌ ಹಾಗೂ ನಾಯಕ ಕೆ ಎಲ್‌ ರಾಹುಲ್‌...