ಐಪಿಎಲ್‌ 2023 | ಟಾಸ್‌ ಗೆದ್ದ ಆರ್‌ಸಿಬಿ, ನಾಯಕನಾಗಿ ರೋಹಿತ್‌ಗೆ 200ನೇ ಟಿ20 ಪಂದ್ಯ

Date:

ಐಪಿಎಲ್​ನಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಆರ್‌ಸಿಬಿ-ಮುಂಬೈ ನಡುವಿನ ಪಂದ್ಯದ ಟಾಸ್‌ ಗೆದ್ದ ಡುಪ್ಲೆಸ್ಸಿಸ್‌, ರೋಹಿತ್‌ ಪಡೆಯನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನ ಪಿಚ್‌ ಪ್ರತಿ ಬಾರಿಯೂ ಬ್ಯಾಟರ್‌ಗಳಿಗೆ ಅನುಕೂಲಕರವಾಗಿರುವುದರಿಂದ ಭಾನುವಾರ ರನ್‌ ಹೊಳೆಯೇ ಹರಿಯುವ ನಿರೀಕ್ಷೆ ಇದೆ.  

ಐಪಿಎಲ್‌ನ 16ನೇ ಆವೃತ್ತಿಯ ತನ್ನ ಮೊದಲ ಪಂದ್ಯದಲ್ಲೇ ಆರ್‌ಸಿಬಿಗೆ ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಕಠಿಣ ಸವಾಲೊಡ್ಡುವ ಸಾಧ್ಯತೆಯಿದೆ.

ಮೂರು ವರ್ಷಗಳ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್‌ ಪಂದ್ಯ ನಡೆಯುತ್ತಿದೆ. ಆರ್‌ಸಿಬಿ ಪಂದ್ಯವನ್ನು ವೀಕ್ಷಿಸಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. 32 ಸಾವಿರ ಆಸನ ವ್ಯವಸ್ಥೆಯುಳ್ಳ ಮೈದಾನದ ಎಲ್ಲಾ ಟಿಕೆಟ್‌ಗಳು ಈಗಾಗಲೇ ಸೋಲ್ಡ್‌ ಔಟ್‌ ಆಗಿದೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಮಾರ್ಕ್‌ವುಡ್‌ ಮಾರಕ ದಾಳಿಗೆ ಡೆಲ್ಲಿ ತತ್ತರ; ಲಖನೌ ತಂಡಕ್ಕೆ ಗೆಲುವು

ಐಪಿಎಲ್‌ನಲ್ಲಿ ಈ ಬಾರಿ ಆರಂಭದಲ್ಲೇ ಆರ್‌ಸಿಬಿಗೆ ಆಘಾತ ಎದುರಾಗಿದೆ. ಪ್ರಮುಖ ಆಟಗಾರರಾದ ಜೋಶ್‌ ಹ್ಯಾಝಲ್‌ವುಡ್‌, ವಾನಿಂದು ಹಸರಂಗ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಗ್ಲೆನ್‌ ಮ್ಯಾಕ್ಸ್‌ವೆಲ್‌ ಅಭ್ಯಾಸದ ವೇಳೆ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ. ಭರ್ಜರಿ ಫಾರ್ಮ್​ನಲ್ಲಿರುವ ವಿರಾಟ್ ಕೊಹ್ಲಿ ಮೇಲೆ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ರೋಹಿತ್‌ ಶರ್ಮಾ ನಾಯಕನಾಗಿ 200 ಟಿ20 ಪಂದ್ಯವನ್ನಾಡಲಿದ್ದಾರೆ. ಜಸ್‌ಪ್ರೀತ್‌ ಬುಮ್ರಾ ಅನುಪಸ್ಥಿತಿ ತಂಡಕ್ಕೆ ತೀವ್ರ ಹಿನ್ನಡೆಯಾಗಿದೆ.

ಉಭಯ ತಂಡಗಳ ಆಡುವ ಬಳಗ

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್‌ ಕೀಪರ್), ಸೂರ್ಯಕುಮಾರ್ ಯಾದವ್, ಕ್ಯಾಮರೂನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೋಫ್ರಾ ಆರ್ಚರ್, ಅರ್ಷದ್ ಖಾನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಕರಣ್‌ ಶರ್ಮಾ, ಹರ್ಷಲ್ ಪಟೇಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಮುಹಮ್ಮದ್ ಸಿರಾಜ್

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೇವರು ಆತನಿಗೆ ಮರುಜನ್ಮ ನೀಡಿದ್ದಾನೆ’: ಪ್ರಾಣ ಉಳಿಸಿದ ನಂತರ ವಿಡಿಯೋ ಪೋಸ್ಟ್ ಮಾಡಿದ ಶಮಿ

ಇತ್ತೀಚಿಗೆ ನಡೆದ ಏಕದಿನ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಭಾರತ...

ಟಿ20 | ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ರೋಚಕ ಗೆಲುವು: ಜೋಶ್ ಇಂಗ್ಲಿಸ್ ಶತಕ ವ್ಯರ್ಥ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್...

ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ 18.7 ಲಕ್ಷ ರೂ. ವಂಚನೆ, ದೂರು ದಾಖಲು

ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ...

ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂತರ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ...