ಐಪಿಎಲ್‌ 2023 | ಗಿಲ್‌ ಶತಕದಬ್ಬರ; ಮಕಾಡೆ ಮಲಗಿದ ಮುಂಬೈ; ಫೈನಲ್‌ಗೆ ಗುಜರಾತ್‌

Date:

ಗುಜರಾತ್‌ ಟೈಟನ್ಸ್‌ ತಂಡ ಸತತ ಎರಡನೇ ಬಾರಿಗೆ ಐಪಿಎಲ್‌ ಟೂರ್ನಿಯ ಫೈನಲ್‌ ಪ್ರವೇಶಿಸಿದೆ. ಅಹಮದಾಬಾದ್‌ನಲ್ಲಿ ನಡೆದ ಕ್ವಾಲಿಫೈಯರ್​-2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 62 ರನ್‌ಗಳ ಅಂತರದಲ್ಲಿ ಮಣಿಸಿದ ಹಾಲಿ ಚಾಂಪಿಯನ್ ಹಾ‌ರ್ದಿಕ್‌ ಪಾಂಡ್ಯ ಪಡೆ ಪ್ರಶಸ್ತಿ ಸುತ್ತಿಗೆ ಪ್ರವೇಶ ಪಡೆದಿದೆ.

ಮೇ 29, ಭಾನುವಾರದಂದು ಇದೇ ಮೈದಾನದಲ್ಲಿ, ಐಪಿಎಲ್‌ 16ನೇ ಆವೃತ್ತಿಯ ಚಾಂಪಿಯನ್‌ ಪಟ್ಟಕ್ಕಾಗಿ ನಡೆಯುವ ಫೈನಲ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಸವಾಲನ್ನು ಗುಜರಾತ್ ಎದುರಿಸಬೇಕಿದೆ.‌

ಮಂಗಳವಾರ ನಡೆದ ಕ್ವಾಲಿಪೈಯರ್​-1 ಪಂದ್ಯದಲ್ಲಿ ಗುಜರಾತ್​ ಟೈಟನ್ಸ್ ತಂಡ, ಎಂಎಸ್‌ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್‌ ಎದುರು 15 ರನ್‌ಗಳ ಅಂತರದಲ್ಲಿ ಶರಣಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚೆನ್ನೈನಲ್ಲಿ ನಡೆದ ಕ್ವಾಲಿಪೈಯರ್​-1 ಪಂದ್ಯದ ಪುನರಾವರ್ತನೆ ಎಂಬಂತೆ ಮೇ 29ರಂದು ಅಹಮದಾಬಾದ್‌ನ ನರೇಂದ್ರವ ಮೋದಿ ಸ್ಟೇಡಿಯಂನಲ್ಲಿ ಫೈನಲ್‌ ನಡೆಯಲಿದೆ.

ಗಿಲ್‌ ಶತಕದಬ್ಬರದ ಎದುರು ಮಂಕಾದ ಮುಂಬೈ ಇಂಡಿಯನ್ಸ್‌

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಆತಿಥೇಯ ಗುಜರಾತ್‌ ಟೈಟನ್ಸ್‌, ಆರಂಭಿಕ ಬ್ಯಾಟರ್‌ ಶುಭಮನ್‌ ಗಳಿಸಿದ ಸ್ಪೋಟಕ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟದಲ್ಲಿ 233 ರನ್‌ ಗಳಿಸಿತ್ತು. ಆದರೆ ಕಠಿಣ ಗುರಿ ಬೆನ್ನಟ್ಟುವ ವೇಳೆ 18.2 ಓವರ್‌ಗಳಲ್ಲಿ 171 ರನ್‌ಗಳಿಗೆ ಆಲೌಟ್‌ ಆಯಿತು. ಆ ಮೂಲಕ 62 ರನ್‌ಗಳ ಅಂತರದಲ್ಲಿ ಮಣಿಸಿದ ಹಾಲಿ ಚಾಂಪಿಯನ್ನರಿಗೆ ಶರಣಾಯಿತು.

ಒಂದೇ ಆವೃತ್ತಿಯಲ್ಲಿ ಗಿಲ್ ಮೂರನೇ ಶತಕ; 49 ಎಸೆತಗಳಲ್ಲಿ ಶತಕ ಪೂರ್ತಿಗೊಳಿಸಿದ ಶುಭಮನ್‌ ಗಿಲ್‌, ಆ ಬಳಿಕವೂ ಬಿರುಸಿನ ಬ್ಯಾಟಿಂಗ್​ ಮುಂದುವರೆಸಿದರು. 60 ಎಸೆತಗಳಲ್ಲಿ 129 ರನ್​ ಗಳಿಸಿದ್ದ ವೇಳೆ ಆಕಾಶ್‌ ಮಧ್ವಾಲ್‌ ಬೌಲಿಂಗ್‌ನಲ್ಲಿ ಡೇವಿಡ್‌ಗೆ ಕ್ಯಾಚಿತ್ತು ವಿಕೆಟ್‌ ಒಪ್ಪಿಸಿದರು. ಗಿಲ್ಇ‌ ಇನ್ನ್ನಿಂನಿಂಗ್ಗ್ 10 ಸಿಕ್ಸರ್​ ಮತ್ತು 7 ಬೌಂಡರಿಗಳನ್ನು ಒಳಗೊಂಡಿತ್ತು. ಪ್ರಸಕ್ತ ಐಪಿಎಲ್‌ ಆವೃತ್ತಿಯಲ್ಲಿ ಗಿಲ್‌ ದಾಖಲಿಸಿದ ಮೂರನೇ ಶತಕ ಇದಾಗಿದೆ. 16ನೇ ಆವೃತ್ತಿಯಲ್ಲಿ 16 ಪಂದ್ಯಗಳಿಂದ 821 ರನ್​ ಒಟ್ಟುಗೂಡಿಸಿದ ಶುಭಮನ್‌, ಆರೆಂಜ್​ ಕ್ಯಾಪ್‌ಅನ್ನು ತನ್ನದಾಗಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...