ಐಪಿಎಲ್‌ 2023 | ಆರ್‌ಸಿಬಿ ತಂಡಕ್ಕೆ ಕನ್ನಡಿಗ ರಾಹುಲ್‌ ಪಡೆ ಸವಾಲು

Date:

ಐಪಿಎಲ್‌ ಪ್ರಸಕ್ತ ಆವೃತ್ತಿಯಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ ತಂಡವನ್ನು ಮಣಿಸುವ ಮೂಲಕ ಭರ್ಜರಿ ಆರಂಭಪಡೆದ ಆರ್‌ಸಿಬಿ ಕೆಕೆಆರ್‌ಗೆ ಹೀನಾಯವಾಗಿ ಸೋತಿತ್ತು.

ಐಪಿಎಲ್​ 16ನೇ ಆವೃತ್ತಿಯ 15ನೇ ಪಂದ್ಯದಲ್ಲಿ ಸೋಮವಾರ (ಏಪ್ರಿಲ್‌ 10) ಆರ್‌ಸಿಬಿ ಕಣಕ್ಕಿಳಿಯಲಿದೆ. ತವರು ಮೈದಾನದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಲಕ್ನೋ ಸೂಪರ್ ಜೈಂಟ್ಸ್‌ ಸವಾಲನ್ನು ಎದುರಿಸಲಿದೆ.

- Advertisement -

ಐಪಿಎಲ್‌ ಪ್ರಸಕ್ತ ಆವೃತ್ತಿಯಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ ತಂಡವನ್ನು ಮಣಿಸುವ ಮೂಲಕ ಆರ್‌ಸಿಬಿ ಭರ್ಜರಿ ಆರಂಭ ಪಡೆದಿತ್ತು. ಆದರೆ ಈಡನ್​ ಗಾರ್ಡನ್​ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಹೀನಾಯ ಸೋಲನುಭವಿಸಿತ್ತು. ಇಂದು ಮತ್ತೆ ತವರು ಮೈದಾನದಲ್ಲಿ ಫಾಫ್​ ನೇತೃತ್ವದ ಹುಡುಗರು, ಕನ್ನಡಿಗ ಕೆಎಲ್​ ರಾಹುಲ್​ ಸಾರಥ್ಯದ ಎಲ್‌ಎಸ್‌ಜಿ  ಪಾಳಯವನ್ನು ಎದುರಿಸಲು ಸಜ್ಜಾಗಿದ್ದಾರೆ. ಈ ಪಂದ್ಯದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದ್ದು, ಅಮೋಘ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ಶತಕ ನಿರೀಕ್ಷೆಯಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಕಳೆದ ಎರಡೂ ಪಂದ್ಯಗಳಲ್ಲಿ ಆರ್​ಸಿಬಿ ಅಂತಿಮ 5  ಓವರ್​ಗಳಲ್ಲಿ ಧಾರಾಳವಾಗಿ ರನ್​ಗಳನ್ನು ಬಿಟ್ಟುಕೊಟ್ಟಿದೆ. ಮೊದಲ ಪಂದ್ಯದಲ್ಲಿ ತಿಲಕ್​ ವರ್ಮ ಡೆತ್​ ಓವರ್​ಗಳಲ್ಲಿ ಸವಾರಿ ಮಾಡಿದರೆ, ಕೋಲ್ಕತ್ತಾ ಪಂದ್ಯದಲ್ಲಿ ಶಾರ್ದೂಲ್​ ಠಾಕೂರ್​ ಮನ ಬಂದಂತೆ ಆರ್‌ಸಿಬಿ ಬೌಲರ್‌ಗಳನ್ನು ದಂಡಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ರಿಂಕು ಸಿಂಗ್‌ ಸಿಕ್ಸರ್‌ಗಳ ಸುರಿಮಳೆ; ಗುಜರಾತ್‌ಗೆ ಮೊದಲ ಸೋಲು   

ಆರ್‌ಸಿಬಿಗೆ ಮೇಯರ್ಸ್ ಚಿಂತೆ

ಆರಂಭಿಕ ಕೈಲ್ ಮೇಯರ್ಸ್ ಅಬ್ಬರದ ಆಟ ಎಲ್​ಎಸ್​ಜಿಯ ಬ್ಯಾಟಿಂಗ್​ಗೆ ಬಲವಾಗಿದೆ. ಅವರು ಎರಡು ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ್ದಾರೆ. ನಿಕೋಲಸ್ ಪೂರನ್, ಮಾರ್ಕಸ್ ಸ್ಟೋಯ್ನಿಸ್‌, ಕ್ವಿಂಟನ್ ಡಿ ಕಾಕ್ ತಂಡದ ಪ್ರಮುಖ ಬ್ಯಾಟರ್‌ಗಳಾಗಿದ್ದಾರೆ.

ಆರ್​ಸಿಬಿ ವಿರುದ್ಧದ ಪಂದ್ಯಗಳಲ್ಲಿ ತವರು ಮೈದಾನದ ಲಾಭ ಪಡೆದು ಕೆ ಎಲ್‌ ರಾಹುಲ್‌ ಉತ್ತಮವಾಗಿ ಬ್ಯಾಟ್‌ ಬೀಸಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧ ಮತ್ತೆ ರಾಹುಲ್​ ಅಬ್ಬರಿಸುವ ಸಾಧ್ಯತೆ ಇದೆ.

ಸಂಭಾವ್ಯ ತಂಡಗಳು

ರಾಯಲ್​ ಚಾಲೆಂಜರ್ಸ್​ ಬೆಂಗಳೂರು: ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಮೈಕೆಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಮುಹಮ್ಮದ್ ಸಿರಾಜ್

ಲಕ್ನೋ ಸೂಪರ್​ ಜೈಂಟ್ಸ್​​: ಕೆಎಲ್ ರಾಹುಲ್, ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೋಯ್ನಿಸ್/ ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ಕೆ ಗೌತಮ್/ ಅಮಿತ್ ಮಿಶ್ರಾ, ಯಶ್ ಠಾಕೂರ್, ಅವೇಶ್ ಖಾನ್/ ಜಯದೇವ್ ಉನಾದ್ಕತ್, ಮಾರ್ಕ್ ವುಡ್, ರವಿ ಬಿಷ್ಣೋಯ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...