ಐಪಿಎಲ್ 2023 | ರೋಚಕ ಪಂದ್ಯದಲ್ಲಿ ಮುಗ್ಗರಿಸಿದ ರಾಜಸ್ಥಾನ; ನಾಲ್ಕನೇ ಗೆಲುವು ದಾಖಲಿಸಿದ ಆರ್‌ಸಿಬಿ

Date:

ಅಂತಿಮ ಓವರ್‌ವರೆಗೂ ಸಾಗಿದ ರೋಚಕ ಪಂದ್ಯದಲ್ಲಿ ಆರ್‌ಸಿಬಿ ತಂಡ, ರಾಜಸ್ಥಾನ ರಾಯಲ್ಸ್ ವಿರುದ್ಧ 7 ರನ್‌ಗಳ ಅಂತರದ ಜಯ ಸಾಧಿಸಿತು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 16ನೇ ಆವೃತ್ತಿಯ 32ನೇ ಪಂದ್ಯದಲ್ಲಿ, ಆರ್‌ಸಿಬಿ ನೀಡಿದ್ದ 189 ರನ್‌ಗಳ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ ನಿಗದಿತ 20 ಓವರ್‌ಗಳಲ್ಲಿ 182 ರನ್‌ಗಳಷ್ಟೇ ಗಳಿಸಿ ಸೋಲಿಗೆ ಶರಣಾಯಿತು.

ಯಶಸ್ವಿ ಜೈಸ್ವಾಲ್ (47), ದೇವದತ್‌ ಪಡೀಕಲ್ (52) ಹಾಗೂ ಕೊನೆಯವರೆಗೂ ಆಟವಾಡಿದ ದೃವ್‌ ಜುರುಲ್‌ ಅಜೇಯ 34 ರನ್‌ ಹೊಡೆದರೂ ಫಲ ನೀಡಲಿಲ್ಲ. ಹರ್ಷಲ್‌ ಪಟೇಲ್‌ 32/3, ಸಿರಾಜ್‌ 39/1 ಹಾಗೂ ಡೇವಿಡ್‌ ವಿಲ್ಲೇ 26/1 ವಿಕೆಟ್ ಪಡೆದು ಯಶಸ್ವಿ ಬೌಲರ್‌ಗಳೆನಿಸಿ ಆರ್‌ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದಕ್ಕೂ ಮುನ್ನ ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಆರ್‌ಸಿಬಿ ಮೊದಲ ಎರಡು ಓವರ್‌ಗಳಲ್ಲಿಯೇ ನಾಯಕ ವಿರಾಟ್‌ ಕೊಹ್ಲಿ(0) ಹಾಗೂ ಅಗ್ರಕ್ರಮಾಂಕಕ್ಕೆ ಬಡ್ತಿ ಪಡೆದು ಕಣಕ್ಕಿಳಿದ ಶಹಬಾಜ್ ಅಹಮ್ಮದ್ (2) ಅವರ ವಿಕೆಟ್ ಕಳೆದುಕೊಂಡಿತು. ಇವರಿಬ್ಬರು ವೇಗದ ಬೌಲರ್‌ ಟ್ರೆಂಟ್‌ ಬೌಲ್ಟ್‌ ದಾಳಿಗೆ ಪೆವಿಲಿಯನ್‌ಗೆ ತೆರಳಿದರು.

ನಂತರ ಶುರುವಾದದ್ದು ಫಾಫ್ ಡು ಪ್ಲೆಸಿಸ್‌ ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್‌ ಜುಗಲ್‌ಬಂದಿ. ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್‌ ನಡೆಸಿದ ಈ ಜೋಡಿ, ರಾಜಸ್ಥಾನದ ಬೌಲರ್‌ಗಳಿಗೆ ಚುರುಕು ಮುಟ್ಟಿಸಿದರು. 3ನೇ ವಿಕೆಟ್‌ಗೆ ಫಾಫ್ ಹಾಗೂ ಮ್ಯಾಕ್ಸ್‌ವೆಲ್ ಜೋಡಿ ಕೇವಲ 66 ಎಸೆತಗಳಲ್ಲಿ 127 ರನ್‌ಗಳ ಜತೆಯಾಟವಾಡುವ ತಂಡಕ್ಕೆ ಆಸರೆಯಾದರು.

ಈ ಬಾರಿಯೂ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಫಾಫ್ ಡು ಪ್ಲೆಸಿಸ್‌ 39 ಎಸೆತಗಳಲ್ಲಿ 8 ಆಕರ್ಷಕ ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್ ಒಳಗೊಂಡು 62 ರನ್‌ ಬಾರಿಸಿ ರನೌಟ್ ಮೂಲಕ ಔಟಾದರು. ಇನ್ನೊಂದೆಡೆ ಫಾಫ್‌ಗೆ ಜೊತೆಯಾಗಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಗ್ಲೆನ್‌ ಮ್ಯಾಕ್ಸ್‌ವೆಲ್ ಕೇವಲ 44 ಚೆಂಡುಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್‌ನೊಂದಿಗೆ 77 ರನ್‌ ಸಿಡಿಸಿ ಆರ್‌ ಅಶ್ವಿನ್ ಬೌಲಿಂಗ್‌ನಲ್ಲಿ ಹೋಲ್ಡರ್‌ಗೆ ಕ್ಯಾಚಿತ್ತು, ಪೆವಿಲಿಯನ್‌ಗೆ ನಿರ್ಗಮಿಸಿದರು.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಟಾಸ್‌ ಗೆದ್ದ ರಾಜಸ್ಥಾನ; ವಿಶೇಷತೆ ಮೆರೆದ ಆರ್‌ಸಿಬಿ

15 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 156 ರನ್‌ ಬಾರಿಸಿದ್ದ ಅರ್‌ಸಿಬಿ ತಂಡಕ್ಕೆ ಮತ್ತೊಮ್ಮೆ ಮಧ್ಯಮ ಕ್ರಮಾಂಕ ಕೈಕೊಟ್ಟಿತು. ಕೊನೆಯ 5 ಓವರ್‌ನಲ್ಲಿ 43 ರನ್‌ ಗಳಿಸಿ 5 ವಿಕೆಟ್ ಕಳೆದುಕೊಂಡಿತು.

ಮಹಿಪಾಲ್ ಲೋಮ್ರರ್(8), ಸುಯಾಶ್ ಪ್ರಭುದೇಸಾಯಿ(0), ಹಸರಂಗ (6) ಹಾಗೂ ದಿನೇಶ್ ಕಾರ್ತಿಕ್‌ (16) ಒಬ್ಬರ ಹಿಂದೆ ಒಬ್ಬರಂತೆ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 189 ರನ್ ಕಲೆ ಹಾಕಿತು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಪೈರ್ ಜೊತೆ ವಾಗ್ವಾದ: ಕೊಹ್ಲಿಗೆ ಶೇ.50 ರಷ್ಟು ದಂಡ

ಐಪಿಎಲ್‌ ಟೂರ್ನಿಯಲ್ಲಿ ಕೆಕೆಆರ್‌ ತಂಡದ ವಿರುದ್ಧದ ಪಂದ್ಯದಲ್ಲಿ ಅಂಪೈರ್‌ ವಿರುದ್ಧ ವಾಗ್ವಾದ...

ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿ ಗೆದ್ದು ಇತಿಹಾಸ ನಿರ್ಮಿಸಿದ 17ರ ಹರೆಯದ ಭಾರತೀಯ ಡಿ ಗುಕೇಶ್

ಭಾರತದ 17 ವರ್ಷದ ಗ್ರ್ಯಾಂಡ್‌ ಮಾಸ್ಟರ್ ಡಿ ಗುಕೇಶ್ ಟೊರೊಂಟೊದಲ್ಲಿ ನಡೆದ...

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...