ಆರ್‌ಸಿಬಿ ʻಅನ್‌ಬಾಕ್ಸ್‌ʼ; ಜೆರ್ಸಿ ಬಿಡುಗಡೆ, ಎಬಿಡಿ-ಗೇಲ್‌ ʻಹಾಲ್‌ ಆಫ್‌ ಫೇಮ್‌ʼ

Date:

ಐಪಿಎಲ್‌ನ 16ನೇ ಆವೃತ್ತಿಗೆ ಮುನ್ನುಡಿಯಾಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು, ಆರ್‌ಸಿಬಿ ಹೊಸ ಜೆರ್ಸಿ ಬಿಡುಗಡೆ ಮಾಡಿದೆ.

ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಟೀಮ್‌ ಕ್ಯಾಪ್ಟನ್‌ ಫಾಫ್‌ ಡುಪ್ಲೆಸ್ಸಿಸ್‌ ಮತ್ತು ವಿರಾಟ್‌ ಕೊಹ್ಲಿ ಹೊಸ ವಿನ್ಯಾಸದ ಜೆರ್ಸಿಯನ್ನು ಅನಾವರಣಗೊಳಿಸಿದರು. ಖ್ಯಾತ ವಾಯುಯಾನ ಸೇವಾ ಸಂಸ್ಥೆ ಕತಾರ್‌ ಏರ್‌ವೇಸ್‌ ಆರ್‌ಸಿಬಿಯ ನೂತನ ಟೈಟಲ್ ಪ್ರಾಯೋಜಕತ್ವ ವಹಿಸಿದೆ.

ʻಆರ್‌ಸಿಬಿ ಅನ್‌ಬಾಕ್ಸ್‌ʼ ಹೆಸರಿನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ತಂಡದ ಮಾಜಿ ದಿಗ್ಗಜ ಆಟಗಾರರಾದ ಎಬಿಡಿ ವಿಲಿಯರ್ಸ್‌ ಮತ್ತು ಕ್ರಿಸ್‌ ಗೇಲ್‌ ಅವರಿಗೆ ʻಹಾಲ್‌ ಆಫ್‌ ಫೇಮ್‌ʼ ಗೌರವ ಸಮರ್ಪಿಸಲಾಯಿತು. ಫಾಫ್‌ ಡುಪ್ಲೆಸ್ಸಿಸ್‌ ಮತ್ತು ವಿರಾಟ್‌ ಕೊಹ್ಲಿ ಜೊತೆಗೆ ಮ್ಯಾಕ್ಸ್‌ವೆಲ್‌, ಹರ್ಷಲ್‌ ಪಟೇಲ್‌ ಸೇರಿದಂತೆ ಆರ್‌ಸಿಬಿಯ ಪ್ರಮುಖ ಆಟಗಾರರೆಲ್ಲರೂ ʻಅನ್‌ಬಾಕ್ಸ್‌ʼನಲ್ಲಿ ಪಾಲ್ಗೊಂಡಿದ್ದರು ಈ ವೇಳೆ ಗ್ಯಾಲರಿಯಲ್ಲಿ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಖ್ಯಾತ ಗಾಯಕರಾದ ಸೋನು ನಿಗಮ್ ಮತ್ತು ಜೇಸನ್ ದೇರುಲೋ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಚಿನ್ನಸ್ವಾಮಿ ಮೈದಾನದಲ್ಲಿ ಮೂರು ವರ್ಷಗಳ ಬಳಿಕ  ಇದೇ ಮೊದಲ ಬಾರಿಗೆ ಐಪಿಎಲ್‌ ಪಂದ್ಯಗಳು ನಡೆಯುತ್ತಿವೆ. ಟಿಕೆಟ್‌ ಬೆಲೆ ದುಬಾರಿಯಾಗಿದ್ದರೂ ಸಹ ಅಭಿಮಾನಿಗಳು ಟಿಕೆಟ್‌ ಕೊಳ್ಳಲು ಮುಗಿ ಬೀಳುತ್ತಿದ್ದಾರೆ.

ಏಪ್ರಿಲ್ 2ರಂದು ತವರು ಮೈದಾನದಲ್ಲಿ ಮೊದಲ ಪಂದ್ಯವನ್ನಾಡಲಿರುವ ಆರ್‌ಸಿಬಿ, ಐದು ಬಾರಿಯ ಚಾಂಪಿಯನ್‌ ತಂಡ ಮುಂಬೈ ಇಂಡಿಯನ್ಸ್ ಸವಾಲನ್ನು ಎದುರಿಸಲಿದೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಈವರೆಗಿನ 15 ಆವೃತ್ತಿಗಳಲ್ಲಿ ಆರ್‌ಸಿಬಿ 3 ಬಾರಿ ಫೈನಲ್‌ ಪ್ರವೇಶಿಸಿದ್ದರೂ ಸಹ ಒಮ್ಮೆಯೂ ಚಾಂಪಿಯನ್‌ ಪಟ್ಟವನ್ನೇರಿಲ್ಲ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಟ್ಯಾಕ್ಸಿ ಚಾಲಕನ ಸಲಹೆಗೆ ಕೃತಜ್ಞತೆ ಸಲ್ಲಿಸಿದ ಕ್ರಿಕೆಟಿಗ ಜಾಂಟಿ ರೋಡ್ಸ್

1990 -2000ರ ದಶಕದಲ್ಲಿ ಅತ್ಯುತ್ತಮ ಕ್ಷೇತ್ರ ರಕ್ಷಣೆ ಮೂಲಕ ವಿಶ್ವ ಕ್ರಿಕೆಟ್...

ಆಸ್ಟ್ರೇಲಿಯಾ ವಿಶ್ವಕಪ್ ಗೆಲುವಿನ ಹಿಂದಿದೆ ಮಂಗಳೂರು ಯುವತಿಯ ಪಾತ್ರ

ಆರನೇ ಬಾರಿ ಏಕದಿನ ವಿಶ್ವಕಪ್‌ ಕ್ರಿಕೆಟ್ ಚಾಂಪಿಯನ್‌ ಆಗಿರುವ ಆಸ್ಟ್ರೇಲಿಯಾ ತಂಡದ...

ಕ್ರಿಕೆಟ್‌ನಲ್ಲಿ ಮೀಸಲಾತಿ ಪ್ರಶ್ನೆ ಮತ್ತೆ ಮುನ್ನೆಲೆಗೆ

ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ತಂಡ...