ಐಪಿಎಲ್ 2023 | ಟಾಸ್‌ ಗೆದ್ದ ಚೆನ್ನೈ; ಪ್ಲೇಆಫ್ ತಲುಪಲು ಧೋನಿ ಪಡೆಗೆ ಗೆಲುವು ಅನಿವಾರ್ಯ

Date:

ಐಪಿಎಲ್‌ 2023ರ ಟೂರ್ನಿಯ 67ನೇ ಪಂದ್ಯದಲ್ಲಿ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಚೆನ್ನೈ ಸೂಪರ್‌ ಕಿಂಗ್ಸ್ ಬ್ಯಾಟಿಂಗ್‌ ಆಯ್ದುಕೊಂಡಿದೆ.

ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಚೆನ್ನೈ 15 ಓವರ್‌ಗಳಲ್ಲಿ ಒಂದು ವಿಕೆಟ್ 148 ರನ್‌ ಗಳಿಸಿದೆ. ಋತುರಾಜ್ ಗಾಯಕ್ವಾಡ್ (79) ಹಾಗೂ ಡಿವೊನ್ ಕಾನ್ವೇ (65) ರನ್‌ಗಳಿಸಿದ್ದರು. ಪ್ಲೇಆಫ್​ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಗೆಲುವಿನ ಅನಿವಾರ್ಯತೆ ಹೊಂದಿರುವ ತಂಡವು ಚೆನ್ನೈ ಈಗಾಗಲೇ ಟೂರ್ನಿಯಿಂದ ಎಲಿಮನೇಟ್‌ ಆಗಿರುವ ಡೆಲ್ಲಿ ಪಡೆ ವಿರುದ್ಧ ಸುಲಭ ಜಯದ ನಿರೀಕ್ಷೆಯಲ್ಲಿದೆ.

ಉಭಯ ತಂಡಗಳು ಒಟ್ಟು 28 ಬಾರಿ ಮುಖಾಮುಖಿಯಾಗಿದ್ದು, ಅದರಲ್ಲಿ ಸಿಎಸ್​ಕೆ 18 ಪಂದ್ಯ, ಡೆಲ್ಲಿ 10 ಪಂದ್ಯಗಳಲ್ಲಿ ಗೆಲುವು ಗಳಿಸಿವೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಬೇಕಾದರೆ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​​​ ತಂಡದ ವಿರುದ್ಧ ಜಯಗಳಿಸಬೇಕಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮತ್ತೊಂದೆಡೆ ಟೂರ್ನಿಯನ್ನು ಗೆಲುವಿನೊಂದಿಗೆ ಮುಗಿಸಬೇಕೆಂದು ಯೋಜನೆ ಹಾಕಿಕೊಂಡಿರುವ ಡೆಲ್ಲಿ ತಂಡದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದ್ದು, ತಂಡಕ್ಕೆ ಲಲಿತ್‌ ಯಾದವ್‌ ಮರಳಿದ್ದಾರೆ. ‌

ಈ ಸುದ್ದಿ ಓದಿದ್ದೀರಾ? ಐಪಿಎಲ್ 2023 | ಪಂಜಾಬ್‌ ವಿರುದ್ಧ ಗೆದ್ದ ಆರ್‌ಆರ್‌ಗೆ ಪ್ಲೇಆಫ್‌ ಆಸೆ ಜೀವಂತ

ಚೆನ್ನೈ ಬ್ಯಾಟಿಂಗ್​ ಅತ್ಯಂತ ಬಲಿಷ್ಠವಾಗಿದ್ದು ಋತುರಾಜ್​ ಗಾಯಕ್ವಾಡ್​, ಡೆವೋನ್​ ಕಾನ್ವೆ, ಅಜಿಂಕ್ಯ ರಹಾನೆ, ಶಿವಂ ದುಬೆ ಉತ್ತಮ ಫಾರ್ಮ್​ನಲ್ಲಿದ್ದಾರೆ. ರವೀಂದ್ರ ಜಡೇಜಾ ಮತ್ತು ಮೊಯಿನ್​ ಅಲಿ ಆಲ್​ರೌಂಡ್​ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದಾರೆ. ಬೌಲಿಂಗ್​ನಲ್ಲಿ ತುಷಾರ್​​ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಾಣ ಎದುರಾಳಿಗಳಿಗೆ ಬೆವರಿಳಿಸುತ್ತಿದ್ದಾರೆ.

ಪಿಚ್​ ವರದಿ​

ದೆಹಲಿಯ ಅರುಣ್‌ ಜೇಟ್ಲಿ ಮೈದಾನದಲ್ಲಿ ದಾಖಲಾದ ಮೊದಲ ಇನ್ನಿಂಗ್ಸ್ ಸರಾಸರಿ ಮೊತ್ತ 167. ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಡೆಲ್ಲಿ ತಂಡವನ್ನು 136 ರನ್‌ಗಳಿಗೆ ಕಟ್ಟಿ ಹಾಕಿತ್ತು. ಮೈದಾನದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಕಳೆದುಕೊಂಡಿದ್ದ 15 ವಿಕೆಟ್‌ಗಳ ಪೈಕಿ 9 ವಿಕೆಟ್‌ಗಳನ್ನು ಸ್ಪಿನ್ನರ್​ಗಳೇ ಪಡೆದಿದ್ದರು.

ಹನ್ನೊಂದರ ಬಳಗದಲ್ಲಿ ಆಡುವ ತಂಡಗಳು

ಚೆನ್ನೈ ಸೂಪರ್ ಕಿಂಗ್ಸ್​:

ರುತುರಾಜ್ ಗಾಯಕ್ವಾಡ್, ಡಿವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯೀನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ ಮತ್ತು ವಿಕೆಟ್‌ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ.

ಡೆಲ್ಲಿ ಕ್ಯಾಪಿಟಲ್ಸ್:

ಡೇವಿಡ್ ವಾರ್ನರ್ (ನಾಯಕ), ಯಶ್ ಧುಲ್, ಫಿಲಿಪ್ ಸಾಲ್ಟ್ (ವಿಕೆಟ್‌ ಕೀಪರ್), ರಿಲೀ ರೊಸೊವ್, ಅಮನ್ ಹಕೀಮ್ ಖಾನ್, ಅಕ್ಸರ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಅನ್ರಿಚ್ ನಾರ್ಟ್ಜೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ | ಪಾಕ್ ವಿರುದ್ಧ ಹೀನಾಯ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಮ್ ಇಂಡಿಯಾ; 119ಕ್ಕೆ ಆಲೌಟ್!

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಟಿ20 ವಿಶ್ವಕಪ್‌ನ...

UFC ಫೈನಲ್ : ಚೊಚ್ಚಲ ಪ್ರಯತ್ನದಲ್ಲೇ ಫೈನಲ್‌ನಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಪೂಜಾ ತೋಮರ್

ಅಲ್ಟಿಮೇಟ್ ಫೈಟಿಂಗ್ ಚಾಂಪಿಯನ್‍ಶಿಪ್ (UFC)ನಲ್ಲಿ ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಫೈನಲ್ಸ್ ಗೆಲ್ಲುವ...

ಟಿ20 ಭಾರತ – ಪಾಕ್ ಟಿಕೆಟ್ ಬೆಲೆ 1.46 ಕೋಟಿ ರೂ.ಗೆ ಮಾರಾಟ?

ಭಾರತ – ಪಾಕ್‌ ಪಂದ್ಯವೆಂದರೆ ಎರಡೂ ದೇಶಗಳ ಅಭಿಮಾನಿಗಳಿಗೆ ಭರ್ಜರಿ ಮನರಂಜನೆಯ...