ಐಪಿಎಲ್‌ 2023 | ಹೈದರಾಬಾದ್ vs ಆರ್‌ಸಿಬಿ; ಗೆಲ್ಲಲೇಬೇಕಾದ ಒತ್ತಡದಲ್ಲಿ ಬೆಂಗಳೂರು

Date:

  • ರಾಜೀವ್‌ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಂದ್ಯ
    • ಪ್ಲೇ ಆಫ್ ಹಂತಕ್ಕೇರಲು ಆರ್‌ಸಿಬಿ ಪಾಲಿಗೆ ʻಡೂ ಆರ್‌ ಡೈʼ

ಐಪಿಎಲ್‌ 16ನೇ ಆವೃತ್ತಿಯ ಮಹತ್ವದ ಪಂದ್ಯದಲ್ಲಿ ಗುರುವಾರ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್‌ಸಿಬಿ ತಂಡಗಳು ಮುಖಾಮುಖಿಯಾಗಲಿವೆ

ಹೈದರಾಬಾದ್‌ನ ರಾಜೀವ್‌ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಂದ್ಯವು ಆರ್‌ಸಿಬಿ ಪಾಲಿಗೆ ʻಡೂ ಆರ್‌ ಡೈʼ ಎನಿಸಿದೆ. ಪ್ಲೇ ಆಫ್ ಸ್ಪರ್ಧೆಯಲ್ಲಿ ಮುಂದುವರಿಯಬೇಕಾದರೆ ಡುಪ್ಲೆಸಿಸ್‌ ಬಳಗ ಇಂದಿನ ಪಂದ್ಯವನ್ನು ಗೆಲ್ಲಲೇ ಬೇಕಾಗಿದೆ.

ಪ್ರಸಕ್ತ ಆವೃತ್ತಿಯ ಲೀಗ್‌ ಹಂತದ ಒಟ್ಟು 70 ಪಂದ್ಯಗಳಲ್ಲಿ 64 ಪಂದ್ಯಗಳು ಮುಕ್ತಾಯ ಕಂಡಿದೆ. ಅದಾಗಿಯೂ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡ ಮಾತ್ರವೇ ಕ್ವಾಲಿಫೈಯರ್‌ ಹಂತಕ್ಕೆ ತೇರ್ಗಡೆಯಾಗಿದೆ.

ಉಳಿದ ಮೂರು ಸ್ಥಾನಗಳಿಗಾಗಿ ನಾಲ್ಕು ತಂಡಗಳ ನಡುವೆ (ಸಿಎಸ್‌ಕೆ, ಮುಂಬೈ, ಲಕ್ನೋ, ಆರ್‌ಸಿಬಿ) ತೀವ್ರ ಪೈಪೋಟಿ ಎದುರಾಗಿದೆ. ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಸೋಲು ಕಂಡರೆ ಚೆನ್ನೈ ಮತ್ತು ಲಕ್ನೋ ತಂಡಗಳ ಪ್ಲೇ ಆಫ್‌ ಹಾದಿ ಸುಗಮವಾಗಲಿದೆ.

14 ಪಂದ್ಯಗಳ ಪೈಕಿ 12 ಪಂದ್ಯಗಳನ್ನಾಡಿರುವ ಆರ್‌ಸಿಬಿ, 6 ಗೆಲುವು ಹಾಗೂ 6 ಸೋಲು ಕಂಡಿದ್ದು, 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಸದ್ಯ ಐದನೇ ಸ್ಥಾನದಲ್ಲಿದೆ. ಅಗ್ರ ನಾಲ್ಕರೊಳಗೆ ಸ್ಥಾನ ಖಚಿತಪಡಿಸಿಕೊಳ್ಳಬೇಕಾದರೆ ಆರ್‌ಸಿಬಿ ಮುಂದಿನ ಎರಡೂ ಪಂದ್ಯಗಳನ್ನು (vs ಸನ್‌ರೈಸರ್ಸ್ ಹೈದರಾಬಾದ್, vs ಗುಜರಾತ್‌ ಟೈಟನ್ಸ್‌,  ) ಗೆಲ್ಲಲೇಬೇಕಿದೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ತವರಿನಂಗಳದ ಕೊನೆಯ ಪಂದ್ಯದಲ್ಲಿ ಎಡವಿದ ಧೋನಿ ಪಡೆ

ಆದರೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ. 12 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳನ್ನಷ್ಟೇ ಗೆದ್ದಿರುವ ಐಡೆನ್ ಮಾರ್ಕ್ರಮ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯ ಆತಿಥೇಯ ತಂಡಕ್ಕೆ ʻಆಟಕ್ಕುಂಟು ಲೆಕ್ಕಕ್ಕಿಲ್ಲʼ.

ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲಿರುವ ಚೆನ್ನೈ ಬಳಿ 15 ಅಂಕಗಳಿದ್ದು, ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಸವಾಲನ್ನು ಎದುರಿಸಲಿದೆ. ಕ್ವಾಲಿಫೈಯರ್‌ ಹಂತಕ್ಕೆ ತೇರ್ಗಡೆಯಾಗಲು ಧೋನಿ ಬಳಗಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ.

ಬಲಾಬಲ

ಐಪಿಎಲ್‌ ಟೂರ್ನಿಯಲ್ಲಿನ ಅಂಕಿ ಅಂಶಗಳನ್ನು ಗಮನಿಸಿದರೆ ಹೈದರಾಬಾದ್‌ ತಂಡ ಆರ್‌ಸಿಬಿ ವಿರುದ್ಧ ಸ್ಪಷ್ಟ ಮೇಲುಗೈ ಹೊಂದಿದೆ. ಉಭಯ ತಂಡಗಳು ಇದುವರೆಗೂ  ಒಟ್ಟು 22 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಹೈದರಾಬಾದ್ 12 ಮತ್ತು ಆರ್‌ಸಿಬಿ 9 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ.  ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಕಂಡಿದೆ.

ಹೈದರಾಬಾದ್‌ನಲ್ಲಿ ಇದುವರೆಗೂ ಉಭಯ ತಂಡಗಳು 7 ಬಾರಿ ಮುಖಾಮುಖಿಯಾಗಿದ್ದು, 2015ರಲ್ಲಿ ಒಮ್ಮೆ ಮಾತ್ರ ಆರ್‌ಸಿಬಿಗೆ ಗೆಲುವು ದಕ್ಕಿದೆ. ಉಳಿದ 6 ಪಂದ್ಯಗಳಲ್ಲೂ ಸೋಲು ಕಂಡಿದೆ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಸಿಸಿ ಏಕದಿನ ರ್‍ಯಾಂಕಿಂಗ್ | ವಿಶ್ವದ ನಂಬರ್ ಒನ್ ಬೌಲರ್ ಆಗಿ ವೇಗಿ ಮೊಹಮ್ಮದ್ ಸಿರಾಜ್

ಕಳೆದ ರವಿವಾರ ಶ್ರೀಲಂಕಾ ವಿರುದ್ಧ ನಡೆದ ಏಷ್ಯಾ ಕಪ್ ಫೈನಲ್‌ನಲ್ಲಿ ಟೀಮ್...

ಏಷ್ಯಾ ಕಪ್ ಫೈನಲ್ | ಪಂದ್ಯಶ್ರೇಷ್ಠ ಪ್ರಶಸ್ತಿಯ ಮೊತ್ತವನ್ನು ಮೈದಾನದ ಸಿಬ್ಬಂದಿಗಳಿಗೆ ಅರ್ಪಿಸಿದ ಸಿರಾಜ್

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2023ರ...

ಏಷ್ಯಾ ಕಪ್ ಫೈನಲ್ | ಸಿರಾಜ್ ಮ್ಯಾಜಿಕ್; 8ನೇ ಬಾರಿಗೆ ಟೀಮ್ ಇಂಡಿಯಾ ಚಾಂಪಿಯನ್

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2023ರ...

ಏಷ್ಯಾ ಕಪ್ ಫೈನಲ್ | 50 ರನ್‌ಗೆ ಆಲೌಟಾದ ಶ್ರೀಲಂಕಾ!

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023ರ...