ಐಪಿಎಲ್‌ 2023 | ಪಂಜಾಬ್‌ vs ಮುಂಬೈ; ಇಶಾನ್‌-ಸೂರ್ಯಕುಮಾರ್‌ ಹೋರಾಟಕ್ಕೆ ಒಲಿದ ಗೆಲುವು

Date:

ಆರಂಭಿಕ ಇಶಾನ್‌ ಕಿಶನ್‌ ಮತ್ತು ʻಇಂಪ್ಯಾಕ್ಟ್‌ ಪ್ಲೇಯರ್‌ʼ ಸೂರ್ಯಕುಮಾರ್‌ ಗಳಿಸಿದ ಅರ್ಧಶತಕ ನೆರವಿನಿಂದ ಮುಂಬೈ ಇಂಡಿಯನ್ಸ್‌, ಪಂಜಾಬ್‌ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ.

- Advertisement -

ಮೊಹಾಲಿಯಲ್ಲಿ ಬುಧವಾರ ನಡೆದ ಐಪಿಎಲ್‌ 16ನೇ ಆವೃತ್ತಿಯ 46ನೇ ಪಂದ್ಯದಲ್ಲಿ ಪಂಜಾಬ್‌ ಬೃಹತ್‌ ಮೊತ್ತ ಕಲೆಹಾಕಿತ್ತಾದರೂ, ಚೇಸಿಂಗ್‌ ವೇಳೆ ಇನ್ನೂ 7 ಎಸೆತಗಳನ್ನು ಬಾಕಿ ಇರಿಸಿ ಮುಂಬೈ ಗೆಲುವಿನ ನಗೆ ಬೀರಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

214 ರನ್‌ ಗುರಿ ಬೆನ್ನಟ್ಟುವ ವೇಳೆ ಮುಂಬೈ ನಾಯಕ ರೋಹಿತ್‌ ಶರ್ಮಾ ಖಾತೆ ತೆರೆಯುವ ಮುನ್ನವೇ ವಿಕೆಟ್‌ ಒಪ್ಪಿಸಿದ್ದರು. ಆದರೆ ಭರ್ಜರಿ ಹೊಡೆತಗಳ ಮೂಲಕ ಪಂಜಾಬ್‌ ಬೌಲರ್‌ಗಳ ಬೆವರಿಳಿಸಿದ ಇಶಾನ್‌ ಕಿಶಾನ್‌,  ಮೂರನೇ ವಿಕೆಟ್‌ಗೆ ಶತಕದ ಜೊತೆಯಾಟದಲ್ಲಿ ಭಾಗಿಯಾದರು.

ಇಶಾನ್‌ 75 ರನ್‌ಗಳಿಸಿದರೆ, (41 ಎಸೆತ 4×7, 6×4) ಸೂರ್ಯಕುಮಾರ್‌ ಯಾದವ್‌ 31 ಎಸೆತಗಳಲ್ಲಿ 66 ರನ್‌ (4×8, 6×2) ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಕೊನೆಯಲ್ಲಿ ತಿಲಕ್‌ ವರ್ಮಾ 10 ಎಸೆತಗಳಲ್ಲಿ 3 ಸಿಕ್ಸರ್‌ ಮತ್ತು ಒಂದು ಬೌಂಡರಿಯನ್ನೊಳಗೊಂಡ 26 ರನ್‌ಗಳಿಸಿ ಅಜೇಯರಾಗುಳಿದರು.

ಇದಕ್ಕೂ ಮೊದಲು ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ್ದ ಪಂಜಾಬ್‌ ಪರವಾಗಿ ಲಿವಿಂಗ್‌ಸ್ಟನ್‌ ಮತ್ತು ಜಿತೇಶ್‌ ಶರ್ಮಾ ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿದ್ದರು. 42 ಎಸೆತಗಳಲ್ಲಿ ಲಿವಿಂಗ್‌ಸ್ಟನ್‌ 82 ರನ್‌ ಮತ್ತು ಶರ್ಮಾ 49 ರನ್‌ಗಳಿಸಿ ಅಜೇಯರಾಗುಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...