ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್‌ಸಿಬಿ ತಂಡದ ನಾಯಕನ ಜವಾಬ್ದಾರಿ ಮತ್ತೊಮ್ಮೆ ವಿರಾಟ್ ಕೊಹ್ಲಿಯ ಹೆಗಲೇರಿದೆ.
ಐಪಿಎಲ್ 16ನೇ ಆವೃತ್ತಿಯಲ್ಲಿ ಗುರುವಾರ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸುತ್ತಿದ್ದಾರೆ. ತಂಡದ ಖಾಯಂ ನಾಯಕ ಫಾಪ್ ಡುಪ್ಲೆಸ್ಸಿಸ್, ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಲಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡುಪ್ಲೆಸ್ಸಿಸ್ ಪಕ್ಕೆಲುಬಿನ ಗಾಯಕ್ಕೆ ತುತ್ತಾಗಿದ್ದರು. ಈ ಹಿನ್ನಲೆಯಲ್ಲಿ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಅವರು ಕ್ಷೇತ್ರರಕ್ಷಣೆಗೆ ಇಳಿಯುವುದಿಲ್ಲ ಎಂದು ಆರ್‌ಸಿಬಿ ಮೂಲಗಳು ತಿಳಿಸಿವೆ.
2021, ಅಕ್ಟೋಬರ್ 11ರಂದು ಕೊನೆಯದಾಗಿ ವಿರಾಟ್ ಕೊಹ್ಲಿ ಆರ್‌ಸಿಬಿ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. ಇದೀಗ ಸುಮಾರು 556 ದಿನಗಳ ಬಳಿಕ ಮತ್ತೊಮ್ಮೆ ತಂಡದ ಸಾರಥ್ಯ ವಹಿಸುತ್ತಿದ್ದಾರೆ.
ಆರ್‌ಸಿಬಿ 174/4
ಐಪಿಎಲ್ 16ನೇ ಆವೃತ್ತಿಯ ಗುರುವಾರದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಗೆಲುವಿಗೆ ಆರ್‌ಸಿಬಿ 175 ರನ್‌ಗಳ ಗುರು ನೀಡಿದೆ. ಮೊಹಾಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟ್ ಮಾಡಿದ ಆರ್‌ಸಿಬಿ, ಆರಂಭಿಕರಾದ ವಿರಾಟ್ ಕೊಹ್ಲಿ ಮತ್ತು ಡುಪ್ಲೆಸ್ಸಿಸ್ ಗಳಿಸಿದ ಭರ್ಜರಿ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟದಲ್ಲಿ 174 ರನ್‌ಗಳಿಸಿದೆ.