ಐಪಿಎಲ್ 2025 | 2 ಪಂದ್ಯ ಸೋತ ಡೆಲ್ಲಿಗೆ ಬೇಕಿದೆ ಗೆಲುವು; ಮಹತ್ವದ ದಾಖಲೆಯ ಹೊಸ್ತಿಲಲ್ಲಿ ರಾಹುಲ್

Date:

Advertisements

ಕರ್ನಾಟಕದ ಆಟಗಾರ ಕೆ ಎಲ್ ರಾಹುಲ್ ಇಂಡಿಯನ್ ಪ್ರೀಮಿಯರ್ ಲೀಗ್‌ನ 18ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡುತ್ತಿದ್ದಾರೆ. ಇಂದು (ಮೇ 5) ಹೈದರಾಬಾದ್‌ನ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಎದುರಿಸಲಿದೆ. ಈ ವೇಳೆ ಕೆ ಎಲ್ ರಾಹುಲ್‌ ದೊಡ್ಡ ದಾಖಲೆಯನ್ನು ಬರೆಯುವ ಹೊಸ್ತಿಲಲ್ಲಿ ನಿಂತಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಬ್ಯಾಟ್ ಮಾಡುತ್ತಿರುವ ಕೆ ಎಲ್ ರಾಹುಲ್ ಅಮೋಘ ಬ್ಯಾಟಿಂಗ್ ನಡೆಸುತ್ತಿದ್ದು, ಪ್ರಸಕ್ತ ಐಪಿಎಲ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇದೇ ಫಾರ್ಮ್‌ಅನ್ನು ಇವರು ಹೈದರಾಬಾದ್‌ ತಂಡದ ವಿರುದ್ಧವೂ ಮುಂದುವರೆಸಿದರೆ ದೊಡ್ಡ ದಾಖಲೆಯನ್ನು ತನ್ನದಾಗಿಸಿಕೊಳ್ಳಬಹುದು. ಈ ಪಂದ್ಯದಲ್ಲಿ ರಾಹುಲ್ 43 ರನ್‌ ಬಾರಿಸಿದರೆ, ಮತ್ತೊಬ್ಬ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಅಳಿಸಬಹುದು.

ಈಗಾಗಲೇ ಐಪಿಎಲ್‌ನಲ್ಲಿ ಕೆ ಎಲ್ ರಾಹುಲ್‌ ಹಲವು ದಾಖಲೆಗಳನ್ನು ಹೊಂದಿದ್ದಾರೆ. ಸದ್ಯ ಐಪಿಎಲ್‌ನಲ್ಲಿ ಕೆ ಎಲ್ ರಾಹುಲ್ ಇದುವರೆಗೆ 132 ಇನಿಂಗ್ಸ್‌ಗಳಲ್ಲಿ 5054 ರನ್ ಗಳಿಸಿದ್ದಾರೆ. ಇವರು ಇಲ್ಲಿಯವರೆಗೂ ಡೆಲ್ಲಿ ಕ್ಯಾಪಿಟಲ್ಸ್, ಎಲ್‌ಎಸ್‌ಜಿ, ಪಂಜಾಬ್ ಕಿಂಗ್ಸ್, ಆರ್‌ಸಿಬಿ ಮತ್ತು ಹೈದರಾಬಾದ್ ತಂಡಗಳ ಪರ ಆಡಿದ್ದಾರೆ. ರಾಹುಲ್‌ ಟಿ20 ಕ್ರಿಕೆಟ್‌ನಲ್ಲಿ 8 ಸಾವಿರ ರನ್‌ಗಳನ್ನು ಪೂರ್ಣಗೊಳಿಸುವ ಸನಿಹದಲ್ಲಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ರಾಹುಲ್ ಇದುವರೆಗೆ 222 ಇನಿಂಗ್ಸ್‌ಗಳಲ್ಲಿ 7957 ರನ್ ಪೇರಿಸಿದ್ದು, 43 ರನ್‌ ಸಿಡಿಸಿದರೆ ದೊಡ್ಡ ದಾಖಲೆ ನಿರ್ಮಾಣವಾಗಲಿದೆ.

Advertisements

ಕೆ ಎಲ್ ರಾಹುಲ್ ಈ ದಾಖಲೆಯನ್ನು ಎಸ್‌ಆರ್‌ಎಚ್‌ ವಿರುದ್ಧದ ಪಂದ್ಯದಲ್ಲಿ ನಿರ್ಮಿಸಿದರೆ ಟಿ20 ಕ್ರಿಕೆಟ್‌ನಲ್ಲಿ 8 ಸಾವಿರ ರನ್‌ಗಳನ್ನು ವೇಗವಾಗಿ ಕಲೆ ಹಾಕಿದ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ದಾಖಲೆಯನ್ನು ವಿಶ್ವ ಕ್ರಿಕೆಟ್‌ನಲ್ಲಿ ವಿಂಡೀಸ್‌ ಆಟಗಾರ ಕ್ರಿಸ್‌ ಗೇಲ್‌ ಪೂರೈಸಿದ್ದರು. ಇವರು 213 ಇನಿಂಗ್ಸ್‌ಗಳಲ್ಲಿ ಈ ದಾಖಲೆ ನಿರ್ಮಿಸಿದ್ದರು. ನಂತರದ ಸ್ಥಾನದಲ್ಲಿ ಪಾಕ್‌ ತಂಡದ ಬಾಬರ್‌ ಅಜಮ್‌ ಇದ್ದಾರೆ. ಇವರು 218 ಇನಿಂಗ್ಸ್‌ಗಳಲ್ಲಿ 8 ಸಾವಿರ ಪೇರಿಸಿದ್ದಾರೆ. ವಿರಾಟ್‌ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ವಿರಾಟ್‌ 243 ಇನಿಂಗ್ಸ್‌ಗಳಲ್ಲಿ 8 ಸಾವಿರ ರನ್‌ ಕಲೆ ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿವಾದಿತ ಹೇಳಿಕೆ: ಹರ್ಷ ಭೋಗ್ಲೆ, ಸೈಮನ್ ಡೌಲ್ ಐಪಿಎಲ್ ವೀಕ್ಷಕ ವಿವರಣೆಕಾರ ಹುದ್ದೆಯಿಂದ ನಿಷೇಧ!

ಲಖನೌ ಸೂಪರ್ ಜೈಂಟ್ಸ್ ತಂಡದ ಪರ ಕಳೆದ ಆವೃತ್ತಿಯಲ್ಲಿ ಆಡಿದ್ದ ಕೆ ಎಲ್ ರಾಹುಲ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದಾರೆ. ಇವರು ಆಡಿದ 9 ಪಂದ್ಯಗಳಲ್ಲಿ 53ರ ಸರಾಸರಿಯಲ್ಲಿ 254 ರನ್‌ ಸಿಡಿಸಿದ್ದಾರೆ. ಇದರಲ್ಲಿ 3 ಅರ್ಧಶತಕಗಳು ಸಹ ಸೇರಿವೆ.

ಡೆಲ್ಲಿ – ಹೈದರಾಬಾದ್‌ಗೆ ಮಹತ್ವದ ಪಂದ್ಯ

ಹೈದರಾಬಾದ್‌ ಕ್ರೀಡಾಂಗಣದಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಕಾದಾಟ 18ನೇ ಆವೃತ್ತಿಯಲ್ಲಿ ಮತ್ತಷ್ಟು ರೋಚಕತೆ ಹೆಚ್ಚಿಸಲಿದೆ. ಈ ಪಂದ್ಯದಲ್ಲಿ ಡೆಲ್ಲಿ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯಲು ಸ್ಪರ್ಧೆ ನಡೆಸಿದರೆ, ಎಸ್‌ಆರ್‌ಎಚ್‌ ಲೆಕ್ಕಾಚಾರದ ಮೂಲಕ ಪ್ಲೇ ಆಫ್‌ ತಲುಪುವ ಕನಸಿನಲ್ಲಿದೆ. ಈ ಪಂದ್ಯದಲ್ಲಿ ಆತಿಥೇಯ ತಂಡ ಸೋತರೆ ಪ್ಲೇ ಆಫ್‌ ಆಸೆ ಕಮರಿ ಹೋಗಲಿದೆ. ಟೂರ್ನಿಯ ಆರಂಭದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಡೆಲ್ಲಿ ಲೀಗ್ ಹಂತದ ಕೊನೆಯಲ್ಲಿ ಗೆಲುವಿನ ಹಾದಿಗೆ ಮರಳಬೇಕಿದೆ. ಅಲ್ಲದೆ ಡೆಲ್ಲಿ ಹ್ಯಾಟ್ರಿಕ್‌ ಸೋಲಿನ ಭೀತಿಯನ್ನು ಅನುಭವಿಸುತ್ತಿದೆ. ಕಳೆದ ಎರಡು ಪಂದ್ಯಗಳಲ್ಲಿ ಡೆಲ್ಲಿ ತಂಡ ಆರ್‌ಸಿಬಿ ಹಾಗೂ ಕೆಕೆಆರ್‌ ವಿರುದ್ಧ ಸೋತು ನಿರಾಸೆ ಅನುಭವಿಸಿತ್ತು.

ಅತಿಥೇಯ ಸನ್‌ ರೈಸರ್ಸ್ ತಂಡ ಸಂಘಟಿತ ಆಟದ ಪ್ರದರ್ಶನ ನೀಡಿ ನಾಲ್ಕನೇ ಗೆಲುವಿನ ಹುಡುಕಾಟದಲ್ಲಿದೆ. ಹೈದರಾಬಾದ್ ತಂಡದ ಆರಂಭಿಕರಾದ ಅಭಿಷೇಕ್‌ ಶರ್ಮಾ, ಟ್ರಾವಿಸ್ ಹೆಡ್‌ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡುವ ಅವಶ್ಯಕತೆ ಇದೆ. ಮಧ್ಯಮ ಕ್ರಮಾಂಕದಲ್ಲಿ ಇಶಾನ್‌ ಕಿಶನ್‌, ಹೆನ್ರಿಕ್ ಕ್ಲಾಸೇನ್‌, ಅನಿಕೇತ್ ವರ್ಮಾ ದೊಡ್ಡ ಇನಿಂಗ್ಸ್‌ಗೆ ನೆರವಾಗುವ ಬ್ಯಾಟಿಂಗ್ ನಡೆಸಬೇಕಿದೆ. ಇವೆಲ್ಲವೂ ನೆರವೇರಿದರೆ ತವರಿನಲ್ಲಿ ಮತ್ತೊಂದು ಗೆಲುವು ಸಾಧಿಸಲು ಸಾಧ್ಯ. ಕಳೆದ ಐಪಿಎಲ್‌ನಲ್ಲಿ ಅಬ್ಬರಿಸಿದ್ದ ನಿತೀಶ್‌ ಕುಮಾರ್ ರೆಡ್ಡಿ ಲಯಕ್ಕೆ ಮರಳುವ ಅನಿವಾರ್ಯತೆ ಇದೆ.

blank profile picture 973460 640
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X