ಐಪಿಎಲ್ 2025: ಬಿಸಿಸಿಐನಿಂದ ತುರ್ತು ಸಭೆ; ಉಳಿದ ಪಂದ್ಯಗಳು ತಾತ್ಕಾಲಿಕ ಸ್ಥಗಿತ?

Date:

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದಂತಹ ಪರಿಸ್ಥಿತಿ ಉದ್ಭವಿಸಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲಿ ನಡೆಯುತ್ತಿರುವ ಐಪಿಎಲ್ 2025 ರ ಉಳಿದ ಪಂದ್ಯಗಳನ್ನು ಮರು ನಿಗದಿಪಡಿಸುವ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ. ಮೇ 8 ರಂದು ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ರದ್ದಾದ ನಂತರ, ಬಿಸಿಸಿಐ ಮತ್ತು ಐಪಿಎಲ್ ಆಡಳಿತ ಮಂಡಳಿಯ ತುರ್ತು ಸಭೆ ನಡೆಸಿದ್ದು ಈ ಬಗ್ಗೆ ಚರ್ಚಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ವರದಿಯ ಪ್ರಕಾರ, ಬಿಸಿಸಿಐ ಇಂದು(ಮೇ 9) ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.

- Advertisement -

ಪಂದ್ಯದ ಸಮಯದಲ್ಲಿ ಹಾಜರಿದ್ದ ಐಪಿಎಲ್ ಅಧ್ಯಕ್ಷ ಅರುಣ್ ಸಿಂಗ್ ಧುಮಾಲ್ ಕ್ರೀಡಾಂಗಣಕ್ಕೆ ಪ್ರವೇಶಿಸಿ ಪ್ರೇಕ್ಷಕರನ್ನು ಮನೆಗೆ ತೆರಳುವಂತೆ ಮನವಿ ಮಾಡಿದರು. ಹೀಗಾಗಿ ಎಲ್ಲಾ ಪ್ರೇಕ್ಷಕರು ಎಚ್‌ಪಿಸಿಎ ಕ್ರೀಡಾಂಗಣದಿಂದ ಹೊರನಡೆದರು. ಇದಾದ ಸ್ವಲ್ಪ ಸಮಯದ ನಂತರ ಬಿಸಿಸಿಐ ಮತ್ತು ಐಪಿಎಲ್ ಆಡಳಿತ ಮಂಡಳಿಯ ಸಭೆ ನಡೆದಿದ್ದು, ಐಪಿಎಲ್‌ನ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಮತ್ತು ಪಂದ್ಯಾವಳಿಯನ್ನು ಮುಂದೆ ನಡೆಸಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ. ವರದಿಗಳ ಪ್ರಕಾರ, ಈ ವಿಷಯದ ಬಗ್ಗೆ ಶುಕ್ರವಾರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಂದು ಭಗತ್ ಸಿಂಗ್ ಹೆಸರು ಬಳಸುವ ಆರ್‌ಎಸ್‌ಎಸ್ ನಾಯಕರಿಗೆ...

ಜಾತ್ಯತೀತತೆ ಮತ್ತು ಸಮಾಜವಾದದ ಬಗ್ಗೆ ಗಟ್ಟಿಯಾಗಿ ಮಾತನಾಡುತ್ತಿದ್ದ, ಕೋಮುವಾದಿ ಧೋರಣೆಗಳನ್ನು ಕಟುವಾಗಿ ವಿಮರ್ಶಿಸುತ್ತಿದ್ದ ಭಗತ್ ಸಿಂಗ್ ಅವರನ್ನು ಇಂದು ಅದೇ ಸಿದ್ಧಾಂತಗಳ ವಿರುದ್ಧ ನಿಂತಿರುವ ಬಿಜೆಪಿ, ಆರ್‌ಎಸ್‌ಎಸ್, ಎಬಿವಿಪಿ ನಾಯಕರು ತಮ್ಮ 'ಸ್ವಂತ...

ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ...

ಒಂದು ಆನೆಗೆ ದಿನಕ್ಕೆ ನೂರಾರು ಲೀಟರ್ ನೀರು ಮತ್ತು ನೂರಾರು ಕೆ.ಜಿ. ಆಹಾರ ಬೇಕಾಗುತ್ತದೆ. ಇನ್ನು ಕಾಡಿನಲ್ಲಿರುವ ಸಾವಿರಾರು ಆನೆಗಳು, ಹುಲಿಗಳು, ಚಿರತೆಗಳು, ಜಿಂಕೆಗಳು, ಕಾಡೆಮ್ಮೆಗಳು ಸೇರಿದಂತೆ ವಿವಿಧ ವನ್ಯಜೀವಿಗಳ ಅಗತ್ಯವನ್ನು ಲೆಕ್ಕಹಾಕಿದರೆ...

ಬಾಗಲಕೋಟೆ | ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತರಗತಿ ಆರಂಭ;...

ಬಾಗಲಕೋಟೆ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಕಾಲ ಕೂಡಿಬಂದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ದಶಕಗಳ ಬೇಡಿಕೆಗೆ ಸಾಕಾರ ರೂಪ ಸಿಕ್ಕಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನಗರದ ಬಹುನಿರೀಕ್ಷಿತ...

ಇದನ್ನು ಓದಿದ್ದೀರಾ? ಐಪಿಎಲ್ 2025 | 2 ಪಂದ್ಯ ಸೋತ ಡೆಲ್ಲಿಗೆ ಬೇಕಿದೆ ಗೆಲುವು; ಮಹತ್ವದ ದಾಖಲೆಯ ಹೊಸ್ತಿಲಲ್ಲಿ ರಾಹುಲ್

ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತ ಮೇ 6-7ರ ರಾತ್ರಿ ನಡೆಸಿದ ಆಪರೇಷನ್ ಸಿಂಧೂರ್ ನಂತರ ಎರಡೂ ದೇಶಗಳ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ನಂತರ, ಗುರುವಾರ ಸಂಜೆ, ಪಾಕಿಸ್ತಾನ ಕೂಡ ಇದ್ದಕ್ಕಿದ್ದಂತೆ ಭಾರತದ ಮೇಲೆ ಡ್ರೋನ್‌ ಮತ್ತು ಕ್ಷಿಪಣಿ ದಾಳಿ ಮಾಡಿತು, ಆದರೆ ಭಾರತೀಯ ಭದ್ರತಾ ಪಡೆಗಳು ಅವುಗಳನ್ನು ಸಂಪೂರ್ಣವಾಗಿ ವಿಫಲಗೊಳಿಸಿವೆ. ಅಲ್ಲದೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಐಪಿಎಲ್ 2025 ರಲ್ಲಿ ಒಟ್ಟು 74 ಪಂದ್ಯಗಳು ನಡೆಯಲಿದ್ದು, ಈ ಪೈಕಿ ಇಲ್ಲಿಯವರೆಗೆ 58 ಪಂದ್ಯಗಳು ಪೂರ್ಣಗೊಂಡಿವೆ. ಟೂರ್ನಿಯಲ್ಲಿ ಲೀಗ್ ಹಂತದ ಕೆಲವು ಪಂದ್ಯಗಳು ಮಾತ್ರ ಉಳಿದಿವೆ, ಅದರ ನಂತರ ಫೈನಲ್ ಸೇರಿದಂತೆ 4 ಪ್ಲೇಆಫ್ ಪಂದ್ಯಗಳು ಇನ್ನೂ ನಡೆಯಬೇಕಿದೆ. ಅಂತಹ ಪರಿಸ್ಥಿತಿಯಲ್ಲಿ, ಪಂದ್ಯಾವಳಿಯನ್ನು ಮುಂದೂಡಲಾಗುತ್ತದೆಯೇ ಅಥವಾ ಈ ಆವೃತ್ತಿ ರದ್ದಾಗುತ್ತದೆಯೇ ಎಂದು ಕಾದು ನೋಡಬೇಕಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸಿದ ಮೋಹಿತ್ ಉಲ್ವಾ; ಪಾಕ್ ಮಣಿಸಿ 9ನೇ ಬಾರಿ ಅಂಡರ್-19 ಏಷ್ಯಾ ಕಪ್ ಗೆದ್ದ ಭಾರತ

ಕೊನೆಯ ಎಸೆತದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ 'ಎಸಿಸಿ ಪುರುಷರ ಅಂಡರ್-19 ಏಷ್ಯಾ...

ನ್ಯೂಜಿಲೆಂಡ್ ಟೆಸ್ಟ್ ಸರಣಿ: ಕುಲದೀಪ್ ಯಾದವ್‌ಗೆ ಕೊಕ್, ಗುರ್ನೂರ್ ಬ್ರಾರ್‌ಗೆ ಮಣೆ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ...

ಐಒಎ ಚುನಾವಣೆ ವಿವಾದ: ಭಾರತದ ಒಲಿಂಪಿಕ್ ಪ್ರತಿಷ್ಠೆಗೆ ಧಕ್ಕೆ, ಐಒಸಿ ತೀವ್ರ ಕಳವಳ

ಭಾರತೀಯ ಒಲಿಂಪಿಕ್ ಸಂಸ್ಥೆಯ (ಐಒಎ) ಚುನಾವಣಾ ಪ್ರಕ್ರಿಯೆಯಲ್ಲಿ ಮತ್ತೆ ಭುಗಿಲೆದ್ದಿರುವ ಆಂತರಿಕ...

ಅಂಡರ್-19 ಏಷ್ಯಾಕಪ್ ಫೈನಲ್: ಪ್ರಶಸ್ತಿಗಾಗಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕ್‌ ಮುಖಾಮುಖಿ

ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವೆಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ...