ಐಪಿಎಲ್ 2025 | ಮುಂಬೈ ಇಂಡಿಯನ್ಸ್‌ ತಂಡದಿಂದ ಸ್ಟಾರ್‌ ಆಟಗಾರ ಔಟ್

Date:

2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೀರ್ನಿಗೆ ಕೇವಲ ಒಂದು ತಿಂಗಳಷ್ಟೇ ಬಾಕಿ ಇದೆ. ಎಲ್ಲ ತಂಡಗಳು ಐಪಿಎಲ್‌ಗೆ ಸಿದ್ದತೆ ನಡೆಸುತ್ತಿವೆ. ಆಟಗಾರರು ಟೂರ್ನಿಗೆ ಸಜ್ಜಾಗುತ್ತಿದ್ದಾರೆ ಈ ನಡುವೆ, ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆದಿದ್ದು, ಸ್ಟಾರ್ ಆಟಗಾರ, ಸ್ಪಿನ್ನರ್ ಅಲ್ಲಾ ಗಝನ್‌ಫರ್ ಅವರು ತಂಡವನ್ನು ತೊರೆದಿದ್ದು, ಟೂರ್ನಿಯಿಂದಲೇ ಹೊರಗುಳಿದಿದ್ದಾರೆ.

- Advertisement -

ಅಫ್ಘಾನಿಸ್ತಾನ ಕ್ರಿಕೆಟ್ ತಂಡದಲ್ಲಿರುವ ಅಲ್ಲಾ ಗಝನ್‌ಫರ್ ಅವರನ್ನು 2024ರಲ್ಲಿ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್‌ ಖರೀದಿಸಿತ್ತು. ಅವರ ಮೇಲೆ 4.80 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಿತ್ತು. ಆದರೆ, ಅನಾರೋಗ್ಯಕ್ಕೆ ತುತ್ತಾಗಿರುವ ಕಾರಣ, ಅವರು ತಂಡದಿಂದ ಹೊರ ನಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇತ್ತೀಚೆಗೆ ನಡೆದ ಅಫ್ಘಾನ್ ಮತ್ತು ಝಿಂಬಾಬ್ವೆ ನಡುವಿನ ಕ್ರಿಕೆಟ್‌ ಟೂರ್ನಿಯಲ್ಲಿ ಅಲ್ಲಾ ಗಝನ್‌ಘರ್ ಅವರು ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದರು. ಆದಾಗ್ಯೂ, ಆಟದ ವೇಳೆ, ಅವರ ಮೂಳೆ ಮುರಿದಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ. ಹೀಗಾಗಿ, ಅವರು ಕನಿಷ್ಠ 4 ತಿಂಗಳ ಕಾಲ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.

ಅವರು ಈ ಅವಧಿಯಲ್ಲಿ ಯಾವುದೇ ಆಟದಲ್ಲಿಯೂ ಭಾಗಿಯಾಗುತ್ತಿಲ್ಲ. ಇದೇ ಸಮಯದಲ್ಲಿಯೇ ಐಪಿಎಲ್ ಟೂರ್ನಿಯೂ ನಡೆಯುವುದರಿಂದ, ಅವರು ಐಪಿಎಲ್‌ನಲ್ಲಿ ಆಡಲು ಸಾಧ್ಯವಾಗುತ್ತಿಲ್ಲ. ಅವರು ಐಪಿಎಲ್ ಮಾತ್ರವಲ್ಲದೆ, ಅಂತಾರಾಷ್ಟ್ರೀಯ ಚಂಪಿಯನ್ಸ್‌ ಟ್ರೋಫಿಯಲ್ಲಿ ಅಫ್ಘಾನ್‌ ತಂಡದಿಂದಲೂ ಹೊರ ಉಳಿಯಲಿದ್ದಾರೆ.

ಮುಂಬೈ ಇಂಡಿಯನ್ಸ್‌ ತಂಡವು ಈಗ ಗಝನ್‌ಫರ್ ಅವರ ಸ್ಥಾನಕ್ಕೆ ಮತ್ತೊಬ್ಬ ವಿದೇಶಿ ಆಟಗಾರರನ್ನು ಸೇರಿಸಿಕೊಳ್ಳಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಸದ್ಯ ಮುಂಬೈ ಇಂಡಿಯನ್ಸ್‌ ತಂಡದಲ್ಲಿರುವ ಆಟಗಾರರು;
ಹಾರ್ದಿಕ್ ಪಾಂಡ್ಯ (ನಾಯಕ),
ರೋಹಿತ್ ಶರ್ಮಾ,
ಸೂರ್ಯಕುಮಾರ್ ಯಾದವ್,
ಜಸ್​ಪ್ರೀತ್ ಬುಮ್ರಾ,
ತಿಲಕ್ ವರ್ಮಾ,
ಟ್ರೆಂಟ್ ಬೌಲ್ಟ್,
ನಮನ್ ಧೀರ್,
ರಾಬಿನ್ ಮಿಂಝ್,
ಕರ್ಣ್ ಶರ್ಮಾ,
ದೀಪಕ್ ಚಹರ್,
ರೀಸ್ ಟೋಪ್ಲಿ,
ರಿಯಾನ್ ರಿಕೆಲ್ಟನ್,
ವಿಲ್ ಜ್ಯಾಕ್ಸ್,
ಮಿಚೆಲ್ ಸ್ಯಾಂಟ್ನರ್,
ಕರ್ಣ್ ಶರ್ಮಾ,
ರಾಜ್ವ ಶರ್ಮಾ,
ಸತ್ಯನಾರಾಯಣ ರಾಜು,
ರಾಜ್​ ಬಾವ,
ಕೃಷ್ಣನ್ ಶ್ರೀಜಿತ್,
ಅಶ್ವಾಣಿ ಕುಮಾರ್,
ಬೆವನ್ ಜೇಕಬ್ಸ್,
ಅರ್ಜುನ್ ತೆಂಡೂಲ್ಕರ್,
ಲಿಝಾಡ್ ವಿಲಿಯಮ್ಸ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...