ಐಪಿಎಲ್ ಉದ್ಘಾಟನಾ ಪಂದ್ಯ | ಕೆಕೆಆರ್ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಶುಭಾರಂಭಗೈದ ಆರ್‌ಸಿಬಿ

Date:

Advertisements

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಆರ್‌ಸಿಬಿ ಶುಭಾರಂಭಗೈದಿದೆ‌.

ಗೆಲ್ಲಲು 175 ರನ್‌ಗಳ ಗುರಿಯನ್ನು ಪಡೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಫಿಲ್ ಸಾಲ್ಟ್ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯವರ ಭರ್ಜರಿ ಅರ್ಧಶತಕದ ನೆರವಿನಿಂದ 16.2 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಗುರಿಯನ್ನು ಸಾಧಿಸಿ, ಗೆಲುವು ಸಾಧಿಸಿತು.

ಆರ್‌ಸಿಬಿ ಪರವಾಗಿ ಆರಂಭಿಕ ಆಟಗಾರನಾಗಿ ಬ್ಯಾಟಿಂಗ್ ಇಳಿದಿದ್ದ ವಿರಾಟ್ ಕೊಹ್ಲಿ, 36 ಎಸೆತಗಳಲ್ಲಿ 59 ರನ್ ಸಿಡಿಸಿ, ಔಟಾಗದೆ ಉಳಿದರು. ಇನ್ನೋರ್ವ ಆರಂಭಿಕ ಆಟಗಾರ ಫಿಲ್ ಸಾಲ್ಟ್ 31 ಎಸೆತಗಳಲ್ಲಿ 56 ರನ್ ಗಳಿಸಿ, ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು.

Advertisements

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಅಜಿಂಕ್ಯಾ ರಹಾನೆ ನೇತೃತ್ವದ ಕೆಕೆಆರ್ ಒಂದು ಹಂತದಲ್ಲಿ 107 ರನ್ ಗಳಿಸಿ, ಕೇವಲ ಒಂದು ವಿಕೆಟ್ ಕಳೆದುಕೊಂಡು, ಭರ್ಜರಿ ಮೊತ್ತವನ್ನು ಕಲೆ ಹಾಕುವ ಸೂಚನೆ ನೀಡಿತ್ತು. ಆದರೆ, ಕೊನೆಯ ಓವರ್‌ಗಳಲ್ಲಿ ಉತ್ತಮ ಬೌಲಿಂಗ್ ನಡೆಸಿದ ಆರ್‌ಸಿಬಿಯ ಬೌಲರ್‌ಗಳು 174 ರನ್‌ ಗಳಿಸುವಷ್ಟರಲ್ಲಿ 8 ವಿಕೆಟ್‌ಗಳನ್ನು ಪಡೆಯುವ ಮೂಲಕ ನಿಯಂತ್ರಿಸುವಲ್ಲಿ ಸಫಲರಾಗಿದ್ದರು.

ಕೆಕೆಆರ್ ಪರ ನಾಯಕನ ಆಟವಾಡಿದ ಅಜಿಂಕ್ಯಾ ರಹಾನೆ, 31 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 56 ರನ್ ಗಳಿಸಿ, ಅರ್ಧಶತಕದ ಆಟವಾಡಿದರು. ‌ಇವರಿಗೆ ಸುನಿಲ್ ನರೇನ್ 44 ರನ್ (5 ಬೌಂಡರಿ, 3 ಸಿಕ್ಸ್) ಸಾಥ್ ನೀಡಿದರು.

ಆರ್‌ಸಿಬಿ ತಂಡದ ಪರ ಉತ್ತಮ ಬೌಲಿಂಗ್ ನಡೆಸಿದ ಕೃನಾಲ್ ಪಾಂಡ್ಯ, ನಿಗದಿತ 4 ಓವರ್‌ಗಳಲ್ಲಿ ಕೇವಲ 29 ರನ್ ನೀಡಿ, ಮೂರು ಪ್ರಮುಖ ವಿಕೆಟ್ ಕೀಳುವಲ್ಲಿ ಯಶಸ್ವಿಯಾದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

Download Eedina App Android / iOS

X