ವಿಪರೀತ ಮಳೆ ಹಿನ್ನೆಲೆ : ಬೆಂಗಳೂರಿನಲ್ಲಿ ನಡೆಯಬೇಕಿದ್ದ ಮೇ 23ರ ಐಪಿಎಲ್ ಪಂದ್ಯ ಲಕ್ನೋಗೆ ಸ್ಥಳಾಂತರ

Date:

ಮೇ 23 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಆರ್‍‌ಸಿಬಿ ಹಾಗೂ ಸನ್‌ರೈಸರ್ಸ್‌ ನಡುವಿನ ಪಂದ್ಯವನ್ನು ಬೆಂಗಳೂರಿನಲ್ಲಿ ವಿಪರೀತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಲಕ್ನೋದ ಏಕಾನಾ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ.

- Advertisement -

ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ಐಪಿಎಲ್ ಸಮಿತಿಯು, “ಬೆಂಗಳೂರಿನಲ್ಲಿ ಕಳೆದ ಭಾನುವಾರದಿಂದ ವಿಪರೀತ ಮಳೆಯಾಗುತ್ತಿದೆ. ಹವಾಮಾನ ವೈಪರೀತ್ಯವು ಇನ್ನಷ್ಟು ಮುಂದುವರಿಯುವ ಬಗ್ಗೆ ಮಾಹಿತಿಯ ಹಿನ್ನೆಲೆಯಲ್ಲಿ ಮೇ 23ರಂದು ಚಿನ್ನಸ್ವಾಮಿಯಲ್ಲಿ ನಡೆಯಬೇಕಿದ್ದ ಆರ್‍‌ಸಿಬಿ ಹಾಗೂ ಸನ್‌ರೈಸರ್ಸ್‌ ನಡುವಿನ ಪಂದ್ಯವನ್ನು ಲಕ್ನೋಗೆ ಸ್ಥಳಾಂತರಿಸಲಾಗಿದೆ. ಪಂದ್ಯಕ್ಕಾಗಿ ಟಿಕೆಟ್ ಬುಕ್ ಮಾಡಿದ್ದ ಅಭಿಮಾನಿಗಳಿಗೆ ಹಣವನ್ನು ಮರುಪಾವತಿ ಮಾಡಲಾಗುವುದು” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸೋಮವಾರವಷ್ಟೇ ಲಕ್ನೋದಲ್ಲಿ ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್‌ ವಿರುದ್ಧದ ಪಂದ್ಯ ಆಡಿ ಗೆದ್ದಿರುವ ಹೈದರಾಬಾದ್, ಅದೇ ಮೈದಾನದಲ್ಲಿ ಮತ್ತೊಂದು ಪಂದ್ಯ ಆಡಲಿದೆ. ಅಲ್ಲದೇ, ಮೇ 23ರಂದು ಆರ್‌ಸಿಬಿ ಕೂಡ ಹೈದರಬಾದ್ ವಿರುದ್ಧ ಈ ಪಂದ್ಯ ಆಡಿದ ಬಳಿಕ ಮೇ 27 ರಂದು ತನ್ನ ಕೊನೆಯ ಲೀಗ್ ಪಂದ್ಯವನ್ನೂ ಲಕ್ನೋದಲ್ಲೇ ಆಡಲಿದೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಈ ಬಾರಿಯ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದು, ಈಗಾಗಲೇ ಪ್ಲೇ ಆಫ್​ಗೆ ಲಗ್ಗೆ ಇಟ್ಟಿದೆ. ಮೇ 17ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಆರ್​ಸಿಬಿ ಹಾಗೂ ಕೆಕೆಆರ್ ಪಂದ್ಯ ಮಳೆಯಿಂದ ರದ್ದಾಗಿತ್ತು. ಈಗ ಮಳೆಯ ಕಾರಣಕ್ಕೆ ಮೇ 23ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಹೈದರಾಬಾದ್ ಹಾಗೂ ಆರ್​ಸಿಬಿ ಪಂದ್ಯವನ್ನು ಲಕ್ನೋಗೆ ಶಿಫ್ಟ್ ಮಾಡಲಾಗಿದೆ.

ಈಗಾಗಲೇ ಆರ್​ಸಿಬಿ ಪ್ಲೇ ಆಫ್​ಗೆ ಪ್ರವೇಶಿಸಿದ್ದು, ಇನ್ನುಳಿದ ಈ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಥವಾ ಎರಡನೇ ಸ್ಥಾನ ಪಡೆದುಕೊಂಡರೆ ಪ್ಲೇ ಆಫ್​ನಲ್ಲಿ ಸೋತರೂ ಸಹ ಇನ್ನೊಂದು ಅವಕಾಶ ಸಿಗಲಿದೆ. ಹೀಗಾಗಿ ಆರ್​ಸಿಬಿ ಅಂಕಪಟ್ಟಿಯಲ್ಲಿ ಟಾಪ್ ಒನ್ ಅಥವಾ ಎರಡನೇ ಸ್ಥಾನವನ್ನು ಕಾಯ್ದುಕೊಳ್ಳಲು ಯೋಜನೆ ಹಾಕಿಕೊಂಡಿದೆ.

ಕ್ವಾಲಿಫೈಯ್ಯರ್ ಹಾಗೂ ಫೈನಲ್ ಪಂದ್ಯದ ಸ್ಥಳ ಪ್ರಕಟಿಸಿದ ಬಿಸಿಸಿಐ

ಇದೇ ವೇಳೆ ಬಿಸಿಸಿಐ ಕ್ವಾಲಿಫೈಯ್ಯರ್ ಹಾಗೂ ಫೈನಲ್ ಪಂದ್ಯದ ಸ್ಥಳವನ್ನು ಕೂಡ ಬಿಸಿಸಿಐ ಪ್ರಕಟಿಸಿದೆ. ಕ್ವಾಲಿಫೈಯ್ಯರ್ 1 ಹಾಗೂ ಎಲಿಮಿನೇಟರ್ ಪಂದ್ಯವು ಚಂಡೀಗಡದ ಮೈದಾನದಲ್ಲಿ ನಡೆಯಲಿದ್ದು, ಕ್ವಾಲಿಫೈಯ್ಯರ್ 2 ಹಾಗೂ ಫೈನಲ್ ಪಂದ್ಯವು ಗುಜರಾತ್‌ನ ಅಹ್ಮದಾಬಾದಿನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಇದನ್ನು ಓದಿದ್ದೀರಾ? ವಿಚಾರ ಹಂಚಿದರೆ ವಿಚಾರಣೆ, ಜೈಲು; ಇದು ನವಭಾರತದ ನವ ನಿಯಮವೆ?

ಮೇ 29 ರಿಂದ ಪ್ಲೇ-ಆಫ್ ಪಂದ್ಯಗಳು ನಡೆಯಲಿದ್ದು, ಜೂನ್ 3 ರಂದು ಫೈನಲ್ ಪಂದ್ಯ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...