ಐಪಿಎಲ್ 2025 | ಪಾಕ್‌ನ ಬಾಬರ್‌ ಅಜಮ್‌ ದಾಖಲೆ ಅಳಿಸಿದ ವಿರಾಟ್ ಕೊಹ್ಲಿ

Date:

ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ತಮ್ಮ ಅಮೋಘ ಆಟವನ್ನು ಮುಂದುವರೆಸಿದ್ದಾರೆ. ಐಪಿಎಲ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಕೊಹ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧ ಅರ್ಧಶತಕವನ್ನು ಪೂರೈಸಿದರು. ಇವರ ಉತ್ತಮ ಇನಿಂಗ್ಸ್‌ ಬಲದಿಂದ ಆರ್‌ಸಿಬಿ ಉತ್ತಮ ಮೊತ್ತ ಪೇರಿಸಿತು. ವಿರಾಟ್‌ ಈ ಲೀಗ್‌ನಲ್ಲಿ ಸತತ ಅರ್ಧ ಶತಕಗಳನ್ನು ಪೂರೈಸಿ ನೆರೆದ ಅಭಿಮಾನಿಗಳಿಗೆ ಮನರಂಜನೆಯನ್ನು ನೀಡಿದರು.

- Advertisement -

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡದ ಆರಂಭಿಕರಾದ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಜೋಡಿ ತಂಡಕ್ಕೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೊಡಿಯ ಆಟಕ್ಕೆ ಬ್ರೇಕ್ ಹಾಕಲು ರಾಜಸ್ಥಾನ ಬೌಲರ್‌ಗಳು ವಿಫಲರಾದರು. ವಿರಾಟ್‌ ಕೊಹ್ಲಿ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ42 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್‌ ಸಹಾಯದಿಂದ 70 ರನ್‌ ಸಿಡಿಸಿದರು. ಈ ಇನಿಂಗ್ಸ್‌ನ ಮೂಲಕ ವಿರಾಟ್ ಕೊಹ್ಲಿ ದೊಡ್ಡ ದಾಖಲೆಯನ್ನು ನಿರ್ಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ವಿರಾಟ್ ಕೊಹ್ಲಿಅರ್ಧಶತಕ ಬಾರಿಸುತ್ತಿದ್ದಂತೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಅತಿ ಹೆಚ್ಚು 50 ಕ್ಕೂ ಹೆಚ್ಚು ರನ್ ಗಳಿಸಿದ ಬ್ಯಾಟರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದು ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಮೊದಲು ಬ್ಯಾಟ್‌ ಮಾಡಿ ಸಿಡಿಸಿದ 62 ಅರ್ಧಶತಕವಾಗಿದೆ. ಈ ಮೂಲಕ ವಿರಾಟ್‌ ಕೊಹ್ಲಿ ಪಾಕ್‌ ತಂಡದ ಬಾಬರ್ ಅಜಮ್‌ ಅವರ ದಾಖಲೆಯ್ನು ಅಳಿಸಿ ಹಾಕಿದರು. ಬಾಬರ್‌ ಮೊದಲು ಬ್ಯಾಟ್ ಮಾಡಿದಾಗ 61 ಅರ್ಧಶತಕ ಸಿಡಿಸಿದ ದಾಖಲೆಯನ್ನು ಹೊಂದಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಮೊದಲು ಬ್ಯಾಟ್ ಮಾಡಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರರು

ವಿರಾಟ್ ಕೊಹ್ಲಿ – 62, ಬಾಬರ್ ಅಜಮ್ – 61, ಕ್ರಿಸ್ ಗೇಲ್ – 57, ಡೇವಿಡ್ ವಾರ್ನರ್ – 55, ಜೋಸ್ ಬಟ್ಲರ್ – 52, ಫಾಫ್ ಡು ಪ್ಲೆಸಿಸ್ – 52

ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 8 ಬೌಂಡರಿ ಬಾರಿಸುವ ಮೂಲಕ ಮತ್ತೊಂದು ದಾಖಲೆ ಬರೆದರು. ಈ ಮೂಲಕ ಐಪಿಎಲ್‌ನಲ್ಲಿ ಒಂದೇ ತಂಡದ ವಿರುದ್ಧ ನೂರು ಅರ್ಧಶತಕ ಬಾರಿಸಿದ ಹಿರಿಮೆ ತನ್ನದಾಗಿಸಿಕೊಂಡಿದ್ದಾರೆ. ವಿರಾಟ್‌ ಕೊಹ್ಲಿ ಶತಕದ ಬೌಂಡರಿಗಳನ್ನು ಏಳನೇ ತಂಡದ ವಿರುದ್ಧ ಮಾಡಿದ ಹಿರಿಮೆಗೆ ಪಾತ್ರರಾದರು. ಈ ಮೂಲಕ ಐಪಿಎಲ್‌ನಲ್ಲಿ ಯಾವೊಬ್ಬ ಪ್ಲೇಯರ್ ಮಾಡದ ಸಾಧನೆ ಮಾಡಿದರು. ಇವರನ್ನು ಬಿಟ್ಟರೆ ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಮಾತ್ರ ಐದು ತಂಡಗಳ ವಿರುದ್ಧ ನೂರು ಬೌಂಡರಿ ಬಾರಿಸಿದ ದಾಖಲೆ ಹೊಂದಿದ್ದಾರೆ.

ಐಪಿಎಲ್‌ನಲ್ಲಿ ತಂಡಗಳ ವಿರುದ್ಧ ನೂರಕ್ಕು ಹೆಚ್ಚು ಬೌಂಡರಿ ಸಾಧನೆ

ಪಂಜಾಬ್‌ ಕಿಂಗ್ಸ್‌, 148, ಡೆಲ್ಲಿ ಕ್ಯಾಪಿಟಲ್ಸ್‌ 130, ಚೆನ್ನೈ ಸೂಪರ್‌ ಕಿಂಗ್ಸ್‌ 121, ಕೋಲ್ಕತ್ತಾ ನೈಟ್‌ ರೈಡರ್ಸ್‌ 119, ಮುಂಬೈ ಇಂಡಿಯನ್ಸ್‌ 112, ಸನ್‌ರೈಸರ್ಸ್‌ ಹೈದರಾಬಾದ್‌ 104, ರಾಜಸ್ಥಾನ ರಾಯಲ್ಸ್, 104

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...