IPL 2025 | ಕೆ.ಎಲ್‌. ರಾಹುಲ್‌ರನ್ನು ಆರ್‌ಸಿಬಿ ಕೈಬಿಟ್ಟಿದ್ದೇಕೆ? ಸತ್ಯ ಬಹಿರಂಗ!

Date:

2025ರಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ (ಐಪಿಎಲ್‌) ಎಲ್ಲ ಪ್ರಾಂಚೈಸಿಗಳು ತಮ್ಮ ತಂಡಗಳಿಗೆ ಆಟಗಾರರನ್ನು ಖರೀದಿಸಿದ್ದು, ತಂಡ ರಚಿಸಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿ ಕೂಡ 22 ಆಟಗಾರರ ತಂಡವನ್ನು ಕಟ್ಟಿದೆ. ಈ ಬೆನ್ನಲ್ಲೇ, ಕನ್ನಡಿಗನೇ ಆದ ಕೆ.ಎಲ್‌ ರಾಹುಲ್‌ ಅವರನ್ನು ಆರ್‌ಸಿಬಿ ಕೈಬಿಟ್ಟಿದ್ದೇಕೆ ಎಂಬುದರ ಹಿಂದಿನ ಸತ್ಯವೂ ಬಹಿರಂಗವಾಗಿದೆ.

- Advertisement -

ನವೆಂಬರ್‌ನಲ್ಲಿ ನಡೆದ ಆಟಗಾರರ ಹರಾಜು ಪ್ರಕ್ರಿಯೆಯ ವೇಳೆ ಕೆ.ಎಲ್‌ ರಾಹುಲ್‌ರನ್ನು ತಂಡಕ್ಕೆ ತೆಗೆದುಕೊಳ್ಳಲು ಆರ್‌ಸಿಬಿ ಪ್ರಾಂಚೈಸಿ ಹೆಚ್ಚಿನ ಒಲವು ತೋರಿರಲಿಲ್ಲ. ಹೀಗಾಗಿ, ಆರ್‌ಸಿಬಿ ವಿರುದ್ಧ ಭಾರೀ ಆಕ್ರೋಶ, ಟೀಕೆ, ಟ್ರೋಲ್‌ಗಳು ವ್ಯಕ್ತವಾಗಿದ್ದವು. ಇದೀಗ, ಆರ್‌ಸಿಬಿಯ ಆದ್ಯತೆ ಪಟ್ಟಿ (ಪ್ರಯಾರಿಟಿ ಲಿಸ್ಟ್‌) ಬಹಿರಂಗವಾಗಿದೆ. ರಾಹುಲ್‌ರನ್ನು ಆರ್‌ಸಿಬಿ ಆದ್ಯತೆಯಾಗಿ ಇಟ್ಟುಕೊಂಡಿರಲಿಲ್ಲ ಎಂಬುದು ಸ್ಪಷ್ಟವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಹರಾಜು ಪ್ರಕ್ರಿಯೆಯನ್ನು ಆಟಗಾರರನ್ನು ಖರೀದಿಸಲು, ಮೂರು ಪಟ್ಟಿಯನ್ನು ಮಾಡಿಕೊಂಡಿತ್ತು. ಅದರಲ್ಲಿ, ರಾಹುಲ್‌ ‘ಎ’ ಪಟ್ಟಿಯಲ್ಲಿ ಇರಲಿಲ್ಲ. ಅವರನ್ನು ಆರ್‌ಸಿಬಿ ‘ಸಿ’ ಪಟ್ಟಿಯಲ್ಲಿ ಇಟ್ಟುಕೊಂಡಿತ್ತು. ಹೀಗಾಗಿಯೇ, ಕೆ ಎಲ್ ರಾಹುಲ್‌ ಅವರನ್ನು 7 ಕೋಟಿ ರೂ.ಗಿಂತ ಹೆಚ್ಚು ಹಣ ಕೊಟ್ಟು ಖರೀದಿಸಲು ಆರ್‌ಸಿಬಿಗೆ ಆಸಕ್ತಿ ತೋರಿಲ್ಲ ಎಂದು ಹೇಳಲಾಗಿದೆ.

ಹರಾಜಿನಲ್ಲಿ ಕೆ.ಎಲ್‌ ರಾಹುಲ್‌ ಮೇಲೆ 7 ಕೋಟಿ ರೂ.ವರೆಗೆ ಬಿಡ್‌ ಮಾಡಿದ ಆರ್‌ಬಿಸಿ, ಆ ನಂತರ ಹಿಂದೆ ಸರಿದಿತ್ತು. ಅದಕ್ಕೆ, ರಾಹುಲ್‌ ಅವರು ಆರ್‌ಸಿಬಿ ಫ್ರಾಂಚೈಸಿಯ ಆದ್ಯತೆಯಾಗಿರಲಿಲ್ಲ ಎಂಬುದೇ ಕಾರಣವೆಂದು ಸ್ಪಷ್ಟವಾಗಿದೆ. ಹೀಗಾಗಿ, ತವರ ತಂಡದಲ್ಲಿ ಆಡಬೇಕು ಎಂಬ ರಾಹುಲ್‌ ಅವರ ಬಹುಕಾಲದ ಕನಸು, ಕನಸಾಗಿಯೇ ಉಳಿದಿದೆ. ರಾಹುಲ್‌ ಅವರ ಅಭಿಮಾನಿಗಳು, ಕೈಬಿಟ್ಟಿರುವುದಕ್ಕೆ ಆರ್‌ಸಿಬಿ ಫ್ರಾಂಚೈಸಿ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಆರ್‌ಸಿಬಿ ಕೈಬಿಟ್ಟಿರುವುದರಿಂದ ಕೆ ಎಲ್ ರಾಹುಲ್ ಅವರನ್ನು ದಿಲ್ಲಿ ಕ್ಯಾಪಿಟಲ್ಸ್ ತಂಡವು 14 ಕೋಟಿ ನೀಡಿ, ಖರೀದಿಸಿದೆ. ಕನ್ನಡಿಗ ರಾಹುಲ್, ಕಳೆದ ಸಾಲಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ನಾಯಕರಾಗಿದ್ದರು.

ಇದನ್ನು ಓದಿದ್ದೀರಾ? ಮೊಬೈಲ್ ಲೋನ್ ‘ಆ್ಯಪ್’ ಸಾಲದ ಸುಳಿ: ಪತ್ನಿಯ ‘ಅಶ್ಲೀಲ’ ಫೋಟೋ ವೈರಲ್; ಪತಿ ಆತ್ಮಹತ್ಯೆ

ಸದ್ಯ, ಆರ್‌ಸಿಬಿ ಕಟ್ಟಿರುವ 22 ಆಟಗಾರರ ತಂಡದಲ್ಲಿ ಮೂವರು ರಿಟೈನ್ ಆಗಿದ್ದರೆ, 19 ಆಟಗಾರರನ್ನು ಮೆಗಾ ಹರಾಜಿನಲ್ಲಿ ಖರೀದಿಸಲಾಗಿದೆ. ಅವರಲ್ಲಿ, ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ಆರ್‌ಸಿಬಿ ಖರೀದಿಸಿದೆ. ಶರ್ಮಾ ಅವರು ಆರ್​ಸಿಬಿಯ ಮೊದಲ ಟಾರ್ಗೆಟ್‌ ಪಟ್ಟಿಯಲ್ಲಿದ್ದರು ಎಂಬುದು ಗೊತ್ತಾಗಿದೆ.

ಆರ್‌ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ ಇದ್ದಾರೆ. ವಿರಾಟ್‌ ಕೊಹ್ಲಿ ಮತ್ತೆ ಟೀಮ್‌ ಕ್ಯಾಪ್ಟನ್‌ ಆಗಲಿದ್ದಾರೆ ಎಂಬ ಮಾತುಗಳೂ ಇವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ಕ್ರೀಡಾಭಿಮಾನಿಗಳಿಗೆ ರೋಮಾಂಚನ, ಭಾರತದ ಮುಡಿಗೇರಿದ 13 ಚಿನ್ನದ ಪದಕಗಳು!

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ 13ನೇ ದಿನ ಭಾರತಕ್ಕೆ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...