ಐಪಿಎಲ್ 2026: ಬಾಂಗ್ಲಾ ವೇಗಿ ಮುಸ್ತಫಿಜುರ್ ರೆಹಮಾನ್‌ ಕೈಬಿಡುವಂತೆ ಕೆಕೆಆರ್‌ಗೆ ಬಿಸಿಸಿಐ ಸೂಚನೆ

Date:

2026ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಗೆ ಸಜ್ಜಾಗುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಹತ್ವದ ಸೂಚನೆಯೊಂದನ್ನು ನೀಡಿದೆ. ಇತ್ತೀಚಿನ ರಾಜಕೀಯ ಮತ್ತು ಸಾಮಾಜಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ತಂಡಕ್ಕೆ ಆಯ್ಕೆಯಾಗಿದ್ದ ಬಾಂಗ್ಲಾದೇಶದ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ತಂಡದಿಂದ ಬಿಡುಗಡೆ ಮಾಡುವಂತೆ ಸೂಚಿಸಲಾಗಿದೆ.

- Advertisement -

ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ವಿಷಯವನ್ನು ದೃಢಪಡಿಸಿದ್ದು, ಬಿಸಿಸಿಐ ನಿರ್ಧಾರವನ್ನು ಕೆಕೆಆರ್ ಆಡಳಿತ ಮಂಡಳಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಸದ್ಯ ನಡೆಯುತ್ತಿರುವ ಬೆಳವಣಿಗೆಗಳ ಕಾರಣದಿಂದಾಗಿ, ತಮ್ಮ ತಂಡದಲ್ಲಿರುವ ಬಾಂಗ್ಲಾದೇಶದ ಆಟಗಾರ ಮುಸ್ತಫಿಜುರ್ ರೆಹಮಾನ್ ಅವರನ್ನು ಬಿಡುಗಡೆ ಮಾಡುವಂತೆ ಕೆಕೆಆರ್ ಫ್ರಾಂಚೈಸಿಗೆ ಸೂಚಿಸಲಾಗಿದೆ. ಒಂದು ವೇಳೆ ಫ್ರಾಂಚೈಸಿಯು ಅವರ ಸ್ಥಾನಕ್ಕೆ ಬದಲಿ ಆಟಗಾರನಿಗಾಗಿ ಮನವಿ ಮಾಡಿದರೆ, ಬಿಸಿಸಿಐ ಅದಕ್ಕೆ ಅನುಮತಿ ನೀಡಲಿದೆ” ಎಂದು ದೇವಜಿತ್ ಸೈಕಿಯಾ ತಿಳಿಸಿದ್ದಾರೆ.

2025ರ ಡಿಸೆಂಬರ್‌ನಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡವು ಮುಸ್ತಫಿಜುರ್ ರೆಹಮಾನ್ ಅವರನ್ನು ಬರೋಬ್ಬರಿ 9.20 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ, ಈ ಖರೀದಿಯ ಬೆನ್ನಲ್ಲೇ ವಿರೋಧಗಳು ವ್ಯಕ್ತವಾಗಿದ್ದವು.

ಇದನ್ನು ಓದಿದ್ದೀರಾ? ಮೈದಾನದಲ್ಲಿ ಮಿಂಚುವ ‘ಮಂಧಾನ-ಜೆಮಿಮಾ’ ಜೋಡಿ: ಭಾರತೀಯ ಮಹಿಳಾ ಕ್ರಿಕೆಟ್‌ನ ಭರವಸೆಯ ಬೆಳಕು

ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಹಿಂದೂ ವ್ಯಕ್ತಿಯ ಹತ್ಯೆ ಹಾಗೂ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿರುವ ಸಂದರ್ಭದಲ್ಲೇ, ಬಾಂಗ್ಲಾ ಆಟಗಾರನನ್ನು ಐಪಿಎಲ್‌ನಲ್ಲಿ ಆಡಸಬಾರದು ಎಂಬ ಒತ್ತಾಯ ಕೇಳಿಬಂದಿತ್ತು. ಅಲ್ಲದೆ ಹರಾಜಿನಲ್ಲಿ ಮುಸ್ತಫಿಜುರ್‌ ಅವರನ್ನು ಖರೀದಿಸಿದ್ದಕ್ಕಾಗಿ ಕೆಕೆಆರ್ ಸಹ ಮಾಲೀಕ ಹಾಗೂ ನಟ ಶಾರೂಖ್‌ ಖಾನ್‌ ವಿರುದ್ಧವೂ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿದ್ದವು.

ರಾಜಕೀಯ ವಲಯ ಹಾಗೂ ಧಾರ್ಮಿಕ ಗುಂಪುಗಳಿಂದ ವಿರೋಧ ಹೆಚ್ಚಾಗುತ್ತಿದ್ದಂತೆ ಬಿಸಿಸಿಐ ಈ ಮುಂಜಾಗ್ರತಾ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಕ್ರಿಕೆಟ್ ದೃಷ್ಟಿಕೋನದಿಂದ ನೋಡುವುದಾದರೆ, ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಪರಿಣಾಮಕಾರಿಯಾದ ಬೌಲಿಂಗ್‌ಗೆ ಹೆಸರಾಗಿರುವ ಮುಸ್ತಫಿಜುರ್‌ ಅವರ ನಿರ್ಗಮನ ಕೆಕೆಆರ್ ಬೌಲಿಂಗ್‌ ವಿಭಾಗಗಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಆದರೆ, ಬದಲಿ ಆಟಗಾರರನನ್ನು ಆಯ್ಕೆ ಮಾಡಲು ಬಿಸಿಸಿಐ ಅವಕಾಶ ನೀಡಿರುವುದು ಫ್ರಾಂಚೈಸಿಗೆ ಸಮಾಧಾನಕರ ವಿಷಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...