IPL 2026: ಟೂರ್ನಿಗೂ ಮುನ್ನವೇ ಫ್ರಾಂಚೈಸಿಗಳಿಗೆ ಗಾಯದ ಬಿಸಿ; ಇಲ್ಲಿದೆ ಅಲಭ್ಯ ಆಟಗಾರರ ಸಂಪೂರ್ಣ ಪಟ್ಟಿ

Date:

ಐಪಿಎಲ್ 2026 ಟೂರ್ನಿಯು ಗಾಯದ ಸಮಸ್ಯೆಗಳ ಕರಿನೆರಳಿನಲ್ಲೇ ಆರಂಭವಾಗಲು ಸಜ್ಜಾಗಿದೆ. ಹಲವು ಪ್ರಮುಖ ಆಟಗಾರರು ಟೂರ್ನಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ, ಇನ್ನು ಕೆಲವರು ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಚೊಚ್ಚಲ ಎಸೆತಕ್ಕೂ ಮುನ್ನವೇ ಬಹುತೇಕ ತಂಡಗಳು ತಮ್ಮ ಆಡಗಾರರ ಸಂಯೋಜನೆಯನ್ನು ಮರುಪರಿಶೀಲಿಸುವ ಅನಿವಾರ್ಯತೆಗೆ ಸಿಲುಕಿವೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

- Advertisement -

​ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್‌ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ (ಎಸ್‌ಆರ್‌ಎಚ್‌) ತಂಡಗಳು ಮುಖಾಮುಖಿಯಾಗಲಿದ್ದು, ಈ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ದೊರಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಂಪೂರ್ಣ ಟೂರ್ನಿಯಿಂದ ಹೊರಗುಳಿದ ಆಟಗಾರರು:
​ಹರ್ಷಿತ್ ರಾಣಾ (ಕೋಲ್ಕತ್ತ ನೈಟ್ ರೈಡರ್ಸ್ – KKR):
ಫೆಬ್ರವರಿ 4ರಂದು ನವಿ ಮುಂಬೈನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಭಾರತದ ಟಿ20 ವಿಶ್ವಕಪ್ 2026ರ ಅಭ್ಯಾಸ ಪಂದ್ಯದ ವೇಳೆ ಯುವ ಭಾರತೀಯ ವೇಗಿ ಗಾಯಗೊಂಡಿದ್ದರು. ಹೀಗಾಗಿ ಅವರು ಇಡೀ ಆವೃತ್ತಿಯಿಂದ ಹೊರಗುಳಿಯಲಿದ್ದು, ಕೆಕೆಆರ್ ತಂಡದ ವೇಗದ ಬೌಲಿಂಗ್ ವಿಭಾಗಕ್ಕೆ ದೊಡ್ಡ ಪೆಟ್ಟು ಬಿದ್ದಿದೆ.

​ನಾಥನ್ ಎಲ್ಲಿಸ್ (ಚೆನ್ನೈ ಸೂಪರ್ ಕಿಂಗ್ಸ್ – CSK): ಮಂಡಿರಜ್ಜು (Hamstring) ಗಾಯದಿಂದಾಗಿ ಎಲ್ಲಿಸ್ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಅವರು ಮಾರ್ಚ್ 19ರಂದು ಖಚಿತಪಡಿಸಿದ್ದಾರೆ. ಅಂತಿಮ ಓವರ್‌ಗಳಲ್ಲಿ ತಂಡದ ಪ್ರಮುಖ ಅಸ್ತ್ರವಾಗಿದ್ದ ಇವರ ಗೈರು ತಂಡಕ್ಕೆ ಹಿನ್ನಡೆಯಾಗಿದೆ.

​ಸ್ಯಾಮ್ ಕರನ್ (ರಾಜಸ್ಥಾನ್ ರಾಯಲ್ಸ್ – RR): ಕಳೆದ ವರ್ಷ ಸಂಜು ಸ್ಯಾಮ್ಸನ್ ಬದಲಿಗೆ ರವೀಂದ್ರ ಜಡೇಜಾ ಅವರೊಂದಿಗೆ ಸಿಎಸ್‌ಕೆ ತಂಡದಿಂದ ಟ್ರೇಡ್ ಮೂಲಕ ರಾಜಸ್ಥಾನ್ ರಾಯಲ್ಸ್ ಸೇರಿದ್ದ ಇಂಗ್ಲೆಂಡ್ ಆಲ್ ರೌಂಡರ್ ತೊಡೆ ಭಾಗದಲ್ಲಿ ಆಗಿರುವ ಗಾಯದ ಸಮಸ್ಯೆಯಿಂದಾಗಿ ಈ ಬಾರಿಯ ಸಂಪೂರ್ಣ ಟೂರ್ನಿಗೆ ಅಲಭ್ಯರಾಗಿದ್ದಾರೆ.

ಇದನ್ನು ಓದಿದ್ದೀರಾ? ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

​ಜ್ಯಾಕ್ ಎಡ್ವರ್ಡ್ಸ್ (ಸನ್ ರೈಸರ್ಸ್ ಹೈದರಾಬಾದ್ – SRH): 2026ರ ಹರಾಜಿನಲ್ಲಿ ₹3 ಕೋಟಿಗೆ ಖರೀದಿಯಾಗಿದ್ದ ಹೊಸ ಆಟಗಾರ ಎಡ್ವರ್ಡ್ಸ್, ಪಾದದ ಗಾಯದ ಕಾರಣದಿಂದಾಗಿ ಈ ಬಾರಿಯ ಐಪಿಎಲ್‌ನಲ್ಲಿ ಆಡುವುದಿಲ್ಲ. ಹೀಗಾಗಿ ಅವರ ಬಹುನಿರೀಕ್ಷಿತ ಐಪಿಎಲ್ ಪದಾರ್ಪಣೆ ವಿಳಂಬವಾಗಿದೆ.

​ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿರುವ ಆಟಗಾರರು:
​ಪ್ಯಾಟ್ ಕಮಿನ್ಸ್ (ಸನ್ ರೈಸರ್ಸ್ ಹೈದರಾಬಾದ್ – SRH):
ಟಿ20 ವಿಶ್ವಕಪ್ 2026 ಟೂರ್ನಿಯಿಂದಲೂ ಹೊರಗುಳಿದಿದ್ದ ಕಮಿನ್ಸ್, ಇನ್ನೂ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರಂಭಿಕ ಪಂದ್ಯಗಳಿಗೆ ಗೈರಾಗಲಿದ್ದಾರೆ. ಇವರ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ತಂಡವನ್ನು ಮುನ್ನಡೆಸಲಿದ್ದು, ಅಭಿಷೇಕ್ ಶರ್ಮಾ ಉಪನಾಯಕರಾಗಿ ಜವಾಬ್ದಾರಿ ಹೊರಲಿದ್ದಾರೆ.

​ಜೋಶ್ ಹ್ಯಾಜಲ್‌ವುಡ್ (ರಾಯಲ್ ಚಾಲೆಂಜರ್ಸ್ ಬೆಂಗಳೂರು – RCB): ಕಳೆದ ವರ್ಷ ಆರ್ ಸಿಬಿಯ ಪ್ರಶಸ್ತಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹ್ಯಾಜಲ್‌ವುಡ್, ಕಳೆದ ನಾಲ್ಕು ತಿಂಗಳುಗಳಿಂದ ಗಾಯದಿಂದ ಬಳಲುತ್ತಿದ್ದು, ಚೇತರಿಕೆಯ ಹಾದಿಯಲ್ಲಿದ್ದಾರೆ. ಅವರು ಐಪಿಎಲ್ 2026 ರ ಆರಂಭಿಕ ಹಂತದ ಪಂದ್ಯಗಳಿಗೆ ಲಭ್ಯವಿರುವುದಿಲ್ಲ.

​ಲೊಕಿ ಫರ್ಗುಸನ್ (ಪಂಜಾಬ್ ಕಿಂಗ್ಸ್ – PBKS): ಇತ್ತೀಚೆಗಷ್ಟೇ ತಂದೆಯಾಗಿರುವ ನ್ಯೂಜಿಲೆಂಡ್ ವೇಗದ ಬೌಲರ್ ಫರ್ಗುಸನ್, ಕುಟುಂಬದೊಂದಿಗೆ ಸಮಯ ಕಳೆಯಲು ನಿರ್ಧರಿಸಿದ್ದಾರೆ. ಹೀಗಾಗಿ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದು, ಟೂರ್ನಿಯ ದ್ವಿತೀಯಾರ್ಧದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಯಿದೆ.

​ಮಿಚೆಲ್ ಸ್ಟಾರ್ಕ್ (ಡೆಲ್ಲಿ ಕ್ಯಾಪಿಟಲ್ಸ್ – DC): ಮುಂಬರುವ ಅಂತಾರಾಷ್ಟ್ರೀಯ ಪಂದ್ಯಗಳ ಒತ್ತಡವನ್ನು ನಿಭಾಯಿಸಲು ಕ್ರಿಕೆಟ್ ಆಸ್ಟ್ರೇಲಿಯಾ (CA) ಮುಂಜಾಗ್ರತಾ ಕ್ರಮವಾಗಿ ಸ್ಟಾರ್ಕ್ ಅವರಿಗೆ ಆರಂಭಿಕ ಪಂದ್ಯಗಳಿಂದ ವಿಶ್ರಾಂತಿ ನೀಡಿದೆ. ಮುಂಬರುವ ವಾರಗಳಲ್ಲಿ ಅವರ ಫಿಟ್ನೆಸ್ ಮೌಲ್ಯಮಾಪನದ ಬಳಿಕವಷ್ಟೇ ಅವರ ಲಭ್ಯತೆ ನಿರ್ಧಾರವಾಗಲಿದೆ.

​ಮತೀಶ ಪತಿರಣ (ಕೋಲ್ಕತ್ತ ನೈಟ್ ರೈಡರ್ಸ್ – KKR): 18 ಕೋಟಿ ರೂ. ನೀಡಿ ಖರೀದಿಸಲಾದ ಶ್ರೀಲಂಕಾದ ವೇಗಿ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಟೂರ್ನಿಯ ಮಧ್ಯದಲ್ಲಿ ಅವರು ತಂಡ ಸೇರಿಕೊಳ್ಳುವ ನಿರೀಕ್ಷೆಯಿದೆಯಾದರೂ, ಅವರ ಲಭ್ಯತೆಯ ಬಗ್ಗೆ ಇನ್ನೂ ಯಾವುದೇ ಸ್ಪಷ್ಟತೆ ಇಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾವಿನ ಕದ ತಟ್ಟಿ ಬಂದ ರೈತನ ಮಗನಿಗೆ 12 ಚಿನ್ನದ ಪದಕ

ಬದುಕು ಮುಗಿಯಿತು ಎಂದುಕೊಂಡಿದ್ದ ಕ್ಷಣದಿಂದಲೇ ಹೊಸ ಬದುಕಿನತ್ತ ಹೆಜ್ಜೆ ಇಟ್ಟರು. ಸಾವಿನ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ ʼನೀರೋʼ; ಭಾರತ ಉರಿಯುತ್ತಿರುವಾಗ ಭಜನೆ ಮಾಡಿದ ʼಮೋದಿʼ!

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ,...