IPL 2026 | CSK ನಾಯಕ ಋತುರಾಜ್ ತೀವ್ರ ಒತ್ತಡದಲ್ಲಿದ್ದಾರೆ: ಆರ್ ಅಶ್ವಿನ್ ಕಳವಳ

Date:

IPL 2026ರ ಆವೃತ್ತಿಯಲ್ಲಿ ಸತತ ಸೋಲು ಅನುಭವಿಸುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ನಾಯಕ ಋತುರಾಜ್ ಗಾಯಕ್ವಾಡ್ ಅವರ ಬ್ಯಾಟಿಂಗ್ ಫಾರ್ಮ್ ಬಗ್ಗೆ ಭಾರತದ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ಕಳವಳ ವ್ಯಕ್ತಪಡಿಸಿದ್ದಾರೆ. ಸದ್ಯ ಋತುರಾಜ್ ತೀವ್ರ ಒತ್ತಡಕ್ಕೊಳಗಾಗಿದ್ದಾರೆ ಎಂದು ಹೇಳಿದ್ದಾರೆ.

- Advertisement -

ಶನಿವಾರ ಸನ್ ರೈಸರ್ಸ್ ಹೈದರಾಬಾದ್ (SRH) ವಿರುದ್ಧ ನಡೆದ ಪಂದ್ಯದಲ್ಲಿ CSK 10 ರನ್‌ಗಳ ಸೋಲು ಕಂಡ ಬೆನ್ನಲ್ಲೇ ಅಶ್ವಿನ್ ಈ ಅಭಿಪ್ರಾಯ ಹಂಚಿಕೊಂಡಿದ್ದು, “ಯುವ ಆಟಗಾರ ಆಯುಷ್ ಮ್ಹಾತ್ರೆ ಸ್ಫೋಟಕ ಬ್ಯಾಟಿಂಗ್ (13 ಎಸೆತಗಳಲ್ಲಿ 30 ರನ್) ಮೂಲಕ CSKಗೆ ಭರ್ಜರಿ ಆರಂಭ ನೀಡಿದ್ದರು. ಪವರ್‌ಪ್ಲೇನಲ್ಲಿ ರನ್ ವೇಗ ಚೆನ್ನಾಗಿದ್ದ ಕಾರಣ, ಋತುರಾಜ್ ಅವರಿಗೆ ಯಾವುದೇ ರಿಸ್ಕ್ ತೆಗೆದುಕೊಳ್ಳುವ ಅಗತ್ಯವಿರಲಿಲ್ಲ. ಸ್ವಲ್ಪ ಸಮಯ ತೆಗೆದುಕೊಂಡು ಫಾರ್ಮ್‌ಗೆ ಮರಳಲು ಇದು ಅವರಿಗೆ ಸಿಕ್ಕ ಅತ್ಯುತ್ತಮ ಅವಕಾಶವಾಗಿತ್ತು. ಆದರೆ ಅವರು ತೀವ್ರ ಒತ್ತಡದಲ್ಲಿದ್ದಂತೆ ಕಾಣುತ್ತಿದ್ದರು ಮತ್ತು ಅವರ ಮನಸ್ಸು ಗೊಂದಲಕ್ಕೀಡಾದಂತಿತ್ತು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನೂ ಓದಿ: IPL 2026 | ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 6 ವಿಕೆಟ್‌ಗಳ ಗೆಲುವು

SRH ಪರ ವೇಗಿ ಈಶನ್ ಮಾಲಿಂಗ 29 ರನ್ ನೀಡಿ 3 ವಿಕೆಟ್ ಪಡೆಯುವ ಮೂಲಕ CSK ಓಟಕ್ಕೆ ಬ್ರೇಕ್ ಹಾಕಿದರು. ಮಾಲಿಂಗ ಅವರ ಪ್ರದರ್ಶನವನ್ನು ಶ್ಲಾಘಿಸಿದ SRH ಬೌಲಿಂಗ್ ಕೋಚ್ ವರುಣ್ ಆರನ್, “ಮಾಲಿಂಗ ಒಬ್ಬ ಅಂಡರ್‌ರೇಟೆಡ್ ಬೌಲರ್. ಅವರು 145 ಕಿಮೀ ವೇಗದಲ್ಲಿ ಬೌಲಿಂಗ್ ಮಾಡಬಲ್ಲರು ಮತ್ತು ಡೆತ್ ಓವರ್‌ಗಳಲ್ಲಿ ಅತ್ಯಂತ ಪರಿಣಾಮಕಾರಿ” ಎಂದು ಗುಣಗಾಣ ಮಾಡಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ SRH, ಅಭಿಷೇಕ್ ಶರ್ಮಾ ಮತ್ತು ಹೆನ್ರಿಚ್ ಕ್ಲಾಸೆನ್ ಅವರ ಬಿರುಸಿನ ಅರ್ಧಶತಕಗಳ ನೆರವಿನಿಂದ 194/9 ರನ್ ಪೇರಿಸಿತು. ಪ್ರತಿಯಾಗಿ CSK 184/8 ರನ್‌ಗಳಿಗೆ ಸೀಮಿತಗೊಂಡು ಸೋಲೊಪ್ಪಿಕೊಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...