IPL 2026 | ಡಿಸಿ vs ಜಿಟಿ: ಶುಭ್‌ಮನ್ ಗಿಲ್‌ಗೆ 12 ಲಕ್ಷ ರೂ. ದಂಡ

Date:

ಐಪಿಎಲ್ 2026ರ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ವಿರುದ್ಧದ ಗುಜರಾತ್ ಟೈಟಾನ್ಸ್ (ಜಿಟಿ) ತಂಡವು 1 ರನ್‌ಗಳ ರೋಚಕ ಜಯ ಸಾಧಿಸಿದೆ. ಆದಾಗ್ಯೂ, ಜಿಟಿ ನಾಯಕ ಶುಭ್‌ಮನ್ ಗಿಲ್‌ಗೆ ಅವರಿಗೆ 12 ಲಕ್ಷ ರೂ. ದಂಡ ವಿಧಿಸಿಲಾಗಿದೆ. ನಿಧಾನಗತಿಯ ಓವರ್‌ಗಳ ಬೌಲಿಂಗ್ ರೇಟ್‌ ಕಾರಣದಿಂದಾಗಿ ದಂಡ ವಿಧಿಸಲಾಗಿದೆ ಎಂದು ವರದಿಯಾಗಿದೆ.

- Advertisement -

ಬುಧವಾರ ನಡೆದ ಪಂದ್ಯದಲ್ಲಿ, ಆರಂಭಿಕ ಬ್ಯಾಟಿಂಗ್‌ ಮಾಡಿದ ಜಿಟಿ ತಂಡವು 210 ರನ್ ಗಳಿಸಿತ್ತು. ಬೃಹತ್ ಮೊತ್ತವನ್ನು ಡಿಸಿ ಬೆನ್ನಟ್ಟಿತ್ತು. ಪಂದ್ಯವು ಅಂತಿಮ ಹಂತದಲ್ಲಿ ಅತ್ಯಂತ ಕುತೂಹಲಕಾರಿಯಾಗಿತ್ತು. ಆದಾಗ್ಯೂ, ಡೆಲ್ಲಿ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿ ಸೋಲುಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪಂದ್ಯದ ಡೆತ್ ಓವರ್‌ಗಳ ಸಮಯದಲ್ಲಿ ಗುಜರಾತ್ ತಂಡವು ಪದೇ ಪದೇ ಮೈದಾನದ ಮಧ್ಯದಲ್ಲಿ ಸುದೀರ್ಘ ಚರ್ಚೆಗಳಲ್ಲಿ ತೊಡಗಿದ್ದರಿಂದ, ನಿಗದಿತ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ, ಈ ಸೀಸನ್‌ನಲ್ಲಿ ಮೊದಲ ಬಾರಿಗೆ ತಪ್ಪೆಸಗಿದ ಕಾರಣ ಗುಜರಾತ್ ತಂಡದ ನಾಯಕ ಗಿಲ್‌ಗೆ ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಕನಿಷ್ಠ ದಂಡ ವಿಧಿಸಲಾಗಿದೆ.

ಈ ಲೇಖನ ಓದಿದ್ದೀರಾ?: ಕದನ ವಿರಾಮ ಘೋಷಿಸಿದ್ದರೂ, ಹಾರ್ಮುಜ್ ‘ಸುಂಕ’ ಮುಂದುವರಿಯಲಿವೆ!

ಪಂದ್ಯದ ಕಡೆಯವರೆಗೂ ಸೋಲು-ಗೆಲುವಿನ ತೂಗುಗತ್ತಿಗೆ ಗುಜರಾತ್‌ ತಂಡ ಸಿಲುಕಿತ್ತಾದರೂ, ತಂಡವು ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿತ್ತು. ಕುತ್ತಿಗೆ ನೋವಿನಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದ ನಾಯಕ ಗಿಲ್, 45 ಎಸೆತಗಳಲ್ಲಿ 70 ರನ್ ಗಳಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು. ಅಂತೆಯೇ, ಜೋಸ್ ಬಟ್ಲರ್ ಕೇವಲ 27 ಎಸೆತಗಳಲ್ಲಿ 52 ರನ್ ಸಿಡಿಸಿದರೆ, ವಾಷಿಂಗ್ಟನ್ ಸುಂದರ್ ತಮ್ಮ ಚೊಚ್ಚಲ ಐಪಿಎಲ್ ಅರ್ಧಶತಕ (55 ರನ್) ದಾಖಲಿಸಿದರು.

ಡೆಲ್ಲಿ ಪರ ಕೆ.ಎಲ್. ರಾಹುಲ್ 92 ರನ್ ಸಿಡಿಸಿ ತಂಡವನ್ನು ಗೆಲುವಿನ ಹತ್ತಿರ ತಂದಿದ್ದರು. ಕೊನೆಯ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಸಿಕ್ಸರ್ ಮತ್ತು ಬೌಂಡರಿ ಬಾರಿಸಿ ಗೆಲುವಿನ ಆಸೆ ಚಿಗುರಿಸಿದರೂ, ಅಂತಿಮ ಎಸೆತದಲ್ಲಿ ಕುಲದೀಪ್ ಯಾದವ್ ರನ್ ಔಟ್ ಆಗುವುದರೊಂದಿಗೆ ಗುಜರಾತ್ ಜಯಭೇರಿ ಬಾರಿಸಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...