ಐಪಿಎಲ್ 2026: LSG-DC ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಮಾರಾಮಾರಿ

Date:

ಲಖನೌ ಸೂಪರ್ ಜೈಂಟ್ಸ್ (LSG) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ‘ಐಪಿಎಲ್ 2026’ರ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ನಡುವೆ ತೀವ್ರ ಸ್ವರೂಪದ ಮಾರಾಮಾರಿ ನಡೆದಿದ್ದು, ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

- Advertisement -

​ಕ್ರೀಡಾಂಗಣದ ಸ್ಟ್ಯಾಂಡ್‌ನಲ್ಲಿ ಅಭಿಮಾನಿಗಳ ನಡುವಿನ ಮಾತಿನ ಚಕಮಕಿ ತೀವ್ರಗೊಂಡು ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದನ್ನು ವೈರಲ್ ದೃಶ್ಯಗಳಲ್ಲಿ ಸ್ಪಷ್ಟವಾಗಿ ಕಾಣಬಹುದು. ಜಗಳಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಪರಿಸ್ಥಿತಿ ವಿಕೋಪಕ್ಕೆ ಹೋದ ತಕ್ಷಣವೇ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಮಧ್ಯಪ್ರವೇಶಿಸಿ, ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಮೈದಾನದ ಹೊರಗೆ ಈ ಹೈಡ್ರಾಮಾ ನಡೆದರೆ, ಮೈದಾನದೊಳಗೆ ಪಂದ್ಯ ಸಂಪೂರ್ಣವಾಗಿ ಏಕಪಕ್ಷೀಯವಾಗಿತ್ತು. ಮೊದಲು ಬ್ಯಾಟ್ ಮಾಡಿದ ಎಲ್ಎಸ್‌ಜಿ ತಂಡ ತೀವ್ರ ಬ್ಯಾಟಿಂಗ್ ವೈಫಲ್ಯ ಅನುಭವಿಸಿ 18.4 ಓವರ್‌ಗಳಲ್ಲಿ ಕೇವಲ 141 ರನ್‌ಗಳಿಗೆ ಆಲೌಟ್ ಆಯಿತು.

​ನಾಯಕ ರಿಷಭ್ ಪಂತ್ ಕೇವಲ 7 ರನ್ ಗಳಿಸಿದರೆ, ಏಡೆನ್ ಮಾರ್ಕ್ರಮ್ 11 ಹಾಗೂ ನಿಕೋಲಸ್ ಪೂರನ್ ಕೇವಲ 8 ರನ್ ಗಳಿಸಿ ನಿರಾಸೆ ಮೂಡಿಸಿದರು. ಬ್ಯಾಟಿಂಗ್ ಪಡೆಯ ಈ ಕಳಪೆ ಪ್ರದರ್ಶನದಿಂದಾಗಿ ಲಕ್ನೊ ಬೃಹತ್ ಮೊತ್ತ ಕಲೆಹಾಕುವಲ್ಲಿ ವಿಫಲವಾಯಿತು.

​ಟಿ. ನಟರಾಜನ್, ಕುಲದೀಪ್ ಯಾದವ್ ಮತ್ತು ಲುಂಗಿ ಎನ್‌ಗಿಡಿ ನೇತೃತ್ವದ ಡೆಲ್ಲಿ ಬೌಲಿಂಗ್ ಪಡೆಯು ಎಲ್ಎಸ್‌ಜಿ ಬ್ಯಾಟರ್‌ಗಳನ್ನು ಕಟ್ಟಿಹಾಕುವಲ್ಲಿ ಸಂಪೂರ್ಣ ಯಶಸ್ವಿಯಾಯಿತು.

ಇದನ್ನು ಓದಿದ್ದೀರಾ? ‘ಮೈಬಣ್ಣದ ಕಾರಣಕ್ಕೆ ನನ್ನನ್ನು ಕಡೆಗಣಿಸಿದರು’- ಕಹಿ ನೆನಪುಗಳನ್ನು ಬಿಚ್ಚಿಟ್ಟ ಮಾಜಿ ಲೆಗ್ ಸ್ಪಿನ್ನರ್ ಶಿವರಾಮಕೃಷ್ಣನ್

​ರಿಜ್ವಿ-ಸ್ಟಬ್ಸ್ ಆಕರ್ಷಕ ಆಟ: ಡೆಲ್ಲಿಗೆ ಭರ್ಜರಿ ಜಯ
142 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಆರಂಭಿಕ ಆಘಾತ ಅನುಭವಿಸಿತು. ಮೊಹಮ್ಮದ್ ಶಮಿ ಅವರು ಕೆ.ಎಲ್. ರಾಹುಲ್ ಅವರನ್ನು ‘ಗೋಲ್ಡನ್ ಡಕ್’ಗೆ (0) ಬಲಿಪಡೆದರು. ಒಂದು ಹಂತದಲ್ಲಿ ಕೇವಲ 26 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಡೆಲ್ಲಿ ಸಂಕಷ್ಟಕ್ಕೆ ಸಿಲುಕಿತ್ತು.

​ಆದರೆ, ಈ ಹಂತದಲ್ಲಿ ಜೊತೆಯಾದ ಸಮೀರ್ ರಿಜ್ವಿ ಮತ್ತು ಟ್ರಿಸ್ಟನ್ ಸ್ಟಬ್ಸ್ ಪಂದ್ಯದ ಗತಿಯನ್ನೇ ಬದಲಾಯಿಸಿದರು. ಅತ್ಯಂತ ಜವಾಬ್ದಾರಿಯುತ ಆಟವಾಡಿದ ಸಮೀರ್ ರಿಜ್ವಿ ಅಜೇಯ 70 ರನ್ ಸಿಡಿಸಿದರೆ, ಅವರಿಗೆ ಉತ್ತಮ ಜೊತೆ ನೀಡಿದ ಟ್ರಿಸ್ಟನ್ ಸ್ಟಬ್ಸ್ ಅಜೇಯ 39 ರನ್ ಗಳಿಸಿದರು. ಈ ಜೋಡಿ ಮುರಿಯದ 5ನೇ ವಿಕೆಟ್‌ಗೆ 119 ರನ್‌ಗಳ ‘ಗೆಲುವಿನ ಜೊತೆಯಾಟ’ವಾಡಿದರು.

​ಈ ಅದ್ಭುತ ಜೊತೆಯಾಟದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಇನ್ನು 2.5 ಓವರ್‌ಗಳು ಬಾಕಿ ಇರುವಂತೆಯೇ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಮೈದಾನದಲ್ಲಿ ಡೆಲ್ಲಿ ತಂಡ ಅಧಿಕಾರಯುತ ಗೆಲುವು ಸಾಧಿಸಿದರೂ, ಗ್ಯಾಲರಿಯಲ್ಲಿ ಅಭಿಮಾನಿಗಳ ನಡುವೆ ನಡೆದ ಗಲಾಟೆ ಹಾಗೂ ಪೊಲೀಸರ ಮಧ್ಯಪ್ರವೇಶದ ದೃಶ್ಯಗಳು ಈ ಪಂದ್ಯದ ಪ್ರಮುಖ ಚರ್ಚಾ ವಿಷಯವಾಗಿ ಮಾರ್ಪಟ್ಟಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು ಸಾಧ್ಯವೇ?

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ ಪಯಣ?

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ...

ಶಿರಹಟ್ಟಿ | ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಐಇಸಿ ಸಂಯೋಜಕರ ಭೇಟಿ, ಪರಿಶೀಲನೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೋಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಮಡುವು...

ನೀವು ಆ ಕುರ್ಚಿಗೆ ಅರ್ಹರಲ್ಲ: ಸಿಜೆಐ ವಿರುದ್ಧ ಆಕ್ರೋಶಗೊಂಡ ವಕೀಲನಿಗೆ ಸುಪ್ರೀಂ ನ್ಯಾಯಾಂಗ ನಿಂದನೆ ನೋಟಿಸ್

ತೆರೆದ ನ್ಯಾಯಾಲಯದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...