ಐಪಿಎಲ್ | ಹೈದ್ರಾಬಾದ್ ವಿರುದ್ಧ ಮುಂಬೈಗೆ ಭರ್ಜರಿ ಜಯ : ಪ್ಲೇ ಆಫ್ ಆಸೆ ಜೀವಂತ!

Date:

ಮುಂಬೈ : ಆಕಾಶ್ ಮಧ್ವಾಲ್ 4 ವಿಕೆಟ್, ಕ್ಯಾಮರೂನ್ ಗ್ರೀನ್ ಅವರ ಐಪಿಎಲ್‌ನ ಚೊಚ್ಚಲ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಮ್ಮ ಐಪಿಎಲ್‌ನ 16ನೇ ಆವೃತ್ತಿಯ ಅಂತಿಮ ಲೀಗ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದ್ರಾಬಾದ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಪ್ಲೇ ಆಫ್ ಆಸೆ ಇನ್ನೂ ಜೀವಂತವಾಗಿರಿಸಿದೆ.

ಐಪಿಎಲ್‌ನ ಪ್ಲೇ ಆಫ್‌ಗೆ ಏರುವ ಹಾವು ಏಣಿ ಆಟದಲ್ಲಿ ತುದಿಗಾಲಲ್ಲಿ ನಿಂತಿರುವ ಮೂರು ತಂಡಗಳ ಪೈಕಿ ಮುಂಬೈ ಕೂಡ ಒಂದಾಗಿತ್ತು. ನಿರ್ಣಾಯಕ ಪಂದ್ಯವನ್ನಾಡಿದ ಮುಂಬೈಗೆ, ಹೈದ್ರಾಬಾದ್ ತಂಡ 201 ರನ್‌ಗಳ ಬೃಹತ್ ಗುರಿ ನೀಡಿತ್ತು.

ಆದರೆ ಅದನ್ನು ಸುಲಭವಾಗಿ ಬೆನ್ನಟ್ಟಿದ ಮುಂಬೈ, ಇನ್ನೂ 12 ಎಸೆತಗಳು ಬಾಕಿ ಇರುವಂತೆಯೇ ಗೆದ್ದಿತು. ಇದರಿಂದ ರಾಜಸ್ಥಾನ್ ರಾಯಲ್ಸ್ ಪ್ಲೇ ಆಫ್ ಪೈಪೋಟಿಯಿಂದ ಅಧಿಕೃತವಾಗಿ ಹೊರಬಿದ್ದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದಿದ್ದ ಹೈದ್ರಾಬಾದ್, ವಿವ್ರಾಂತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ಅವರ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 200 ರನ್‌ಗಳ ಗುರಿ ನೀಡಿತ್ತು. ಈ ಆರಂಭಿಕ ಜೋಡಿ ಕೇವಲ 13.5 ಓವರ್‌ಗಳಲ್ಲಿ 140 ರನ್‌ಗಳನ್ನು ಕೂಡಿ ಹಾಕಿತ್ತು. ಆದರೆ, ಉಳಿದ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಬರಲಿಲ್ಲ. ನಿಗದಿತ 20 ಓವರ್‌ಗಳ ಅಂತ್ಯಕ್ಕೆ ಸನ್‌ರೈಸರ್ಸ್ ಹೈದ್ರಾಬಾದ್ ತಂಡ ಭರ್ತಿ 200 ರನ್‌ಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿತ್ತು.

ಮೊದಲ ಇನ್ನಿಂಗ್ಸ್ ಮುಗಿದಾಗ, ಮುಂಬೈ ಗೆಲುವು ಒಂದು ಹಂತದಲ್ಲಿ ದೂರದ ಸಂಗತಿ ಎನಿಸಿತ್ತು . ಆದರೆ ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಂಡ ಮುಂಬೈ, ಇನ್ನೂ 12 ಎಸೆತಗಳು ಬಾಕಿ ಇರುವಂತೆಯೇ ಗೆದ್ದಿತು.

ಕ್ಯಾಮರೂನ್ ಗ್ರೀನ್ ಅವರು 47 ಎಸೆತಗಳಲ್ಲಿ ಔಟಾಗದೆ 100 ರನ್ ಗಳಿಸುವ ಮೂಲಕ ಚೊಚ್ಚಲ ಶತಕ ಗಳಿಸಿದರು. ಮುಂಬೈ ಪರವಾಗಿ ಆರಂಭಿಕನಾಗಿ ಆಗಮಿಸಿದ್ದ ಇಶನ್ ಕಿಶನ್ ಕೇವಲ 12 ಎಸೆತಗಳಲ್ಲಿ 14 ರನ್‌ ಗಳಿಸಿ, 2.5 ಓವರ್‌ನಲ್ಲಿ ಭುವನೇಶ್ವರ್‌ಗೆ ವಿಕೆಟ್ ಒಪ್ಪಿಸಿದರು. ಬಳಿಕ, ನಾಯಕ ರೋಹಿತ್ ಶರ್ಮಾ ಹಾಗೂ ಕ್ಯಾಮರೂನ್ ಗ್ರೀನ್ 128 ರನ್‌ಗಳ ಅಮೋಘ ಜೊತೆಯಾಟ ನೀಡಿದರು. ಕಳೆದ ಕೆಲ ಪಂದ್ಯಗಳಲ್ಲಿ ರನ್‌ಗಳಿಸಲು ವಿಫಲವಾಗಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ 37 ಎಸೆತಗಳಲ್ಲಿ 56 ರನ್‌ ಬಾರಿಸಿ, ಮಯಾಂಕ್ ಡಗಾರ್‌ಗೆ ವಿಕೆಟ್ ಒಪ್ಪಿಸಿದರು.

ಅದಾದ ಬಳಿಕ ಸೂರ್ಯಕುಮಾರ್ ಯಾದವ್ ಕ್ಯಾಮರೂನ್ ಗ್ರೀನ್‌ಗೆ ಜೊತೆಯಾದರು. ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 25 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ಈ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 18 ಓವರ್‌ಗಳಲ್ಲಿ ಗೆಲುವು ಸಾಧಿಸಿತು. ಈ ಗೆಲುವಿನ ಹಿನ್ನೆಲೆಯಲ್ಲಿ ಮುಂಬೈ, ಪ್ಲೇ ಆಫ್ ಆಸೆ ಇನ್ನೂ ಜೀವಂತವಾಗಿರಿಸಿದೆ. ಆರ್‌ಸಿಬಿ ಹಾಗೂ ಗುಜರಾತ್‌ ನಡುವಿನ ಪಂದ್ಯದಲ್ಲಿ ಆರ್‌ಸಿಬಿ ಸೋತರೆ ಮಾತ್ರ, ಮುಂಬೈ ಪ್ಲೇ ಆಫ್‌ ಪ್ರವೇಶಿಸಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...