ಐಪಿಎಲ್ | ಲಕ್ನೋ ವಿರುದ್ಧ ಗೆದ್ದದ್ದು ಡೆಲ್ಲಿ ಕ್ಯಾಪಿಟಲ್ಸ್; ಲಾಭ ಆರ್‌ಸಿಬಿಗೆ!

Date:

ಐಪಿಎಲ್‌ನ ಇಂದಿನ ಪಂದ್ಯ ನಡೆದದ್ದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ. ಪಂದ್ಯದಲ್ಲಿ ಜಯಗಳಿಸಿದ್ದು ಡೆಲ್ಲಿ ಕ್ಯಾಪಿಟಲ್ಸ್. ಲಾಭವಾದದ್ದು ಮಾತ್ರ ಆರ್‌ಸಿಬಿಗೆ. ಜೊತೆಗೆ, ಲಕ್ನೋ ಸೋಲುವುದರೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇ-ಆಫ್ ಪ್ರವೇಶಿಸಿದೆ.

ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ 64ನೇ ಪಂದ್ಯದಲ್ಲಿ ಲಕ್ನೋ ವಿರುದ್ಧ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ರನ್‌ಗಳ ಅಂತರದಿಂದ ರೋಚಕ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಡೆಲ್ಲಿ, ಅಭಿಷೇಕ್ ಪೊರೆಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿ, ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 209 ರನ್‌ಗಳ ಸವಾಲಿನ ಗುರಿ ನೀಡಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ಈ ಪಂದ್ಯವನ್ನು ಕೆ ಎಲ್ ರಾಹುಲ್‌ ನೇತೃತ್ವದ ಲಕ್ನೋ ತಂಡ ಗೆಲ್ಲಲೇಬೇಕಿತ್ತು. ಆದರೆ ಈ ಬೃಹತ್ ಗುರಿಯನ್ನು ತಲುಪಲು ವಿಫಲವಾಯಿತಲ್ಲದೇ, 189 ರನ್ ಗಳಿಸುವಷ್ಟರಲ್ಲಿ 9 ವಿಕೆಟ್ ಕಳೆದುಕೊಂಡಿತು. ಆ ಮೂಲಕ 19 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ಲಕ್ನೋ ಪರವಾಗಿ ನಿಕೊಲಸ್ ಪೂರನ್ 27 ಎಸೆತಗಳಲ್ಲಿ 61 ರನ್ (4 ಸಿಕ್ಸ್, 6 ಬೌಂಡರಿ) ಬಾರಿಸಿ ಅರ್ಧಶತಕ ಗಳಿಸಿದರು. ಆದರೆ ಮುಖೇಶ್ ಕುಮಾರ್ ಎಸೆತದಲ್ಲಿ ಅಕ್ಸರ್ ಪಟೇಲ್‌ಗೆ ಕ್ಯಾಚ್ ನೀಡಿ, ನಿರ್ಗಮಿಸಿದರು. ಕೊನೆಯಲ್ಲಿ ಅರ್ಷದ್ ಖಾನ್ ಸ್ಫೋಟಕ ಬ್ಯಾಟಿಂಗ್ ನಡೆಸಿ, ಅರ್ಧಶತಕ ಗಳಿಸಿದರು. ಯಾರೂ ನಿರೀಕ್ಷಿಸದ ರೀತಿಯಲ್ಲಿ ಬ್ಯಾಟಿಂಗ್ ನಡೆಸಿದ ಅವರು, 33 ಎಸೆತದಲ್ಲಿ 58 ರನ್ ಗಳಿಸಿದರು. ಇದು ಇವರ ಚೊಚ್ಚಲ ಅರ್ಧಶತಕವಾಗಿತ್ತು.

ಉಳಿದಂತೆ ಲಕ್ನೋ ಪರ ಕೃನಾಲ್ ಪಾಂಡ್ಯಾ 18, ಕ್ಲಿಂಟನ್ ಡಿಕಾಕ್ 12 ರನ್ ಗಳಿಸಿದರು. ನಾಯಕ ಕೆ ಎಲ್ ರಾಹುಲ್‌ ಹಾಗೂ ಸ್ಟೋಯ್ನಿಸ್ ಕೇವಲ 5 ರನ್ ಗಳಿಸಲಷ್ಟೇ ಶಕ್ತವಾದರು.

ಡೆಲ್ಲಿ ಪರವಾಗಿ ಬೌಲಿಂಗ್‌ನಲ್ಲಿ ಇಶಾಂತ್ ಶರ್ಮಾ 34ಕ್ಕೆ ಮೂರು ವಿಕೆಟ್ ಪಡೆದು ಮಿಂಚಿದರೆ, ಮುಖೇಶ್ ಕುಮಾರ್, ಕು‌ಲ್‌ದೀಪ್ ಯಾದವ್, ಅಕ್ಸರ್ ಪಟೇಲ್, ಖಲೀಲ್ ಅಹ್ಮದ್, ಸ್ಟಬ್ಸ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

ಲಕ್ನೋ ಈ ಸೋಲಿನೊಂದಿಗೆ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿರುವುದರಿಂದ, ಆರ್‌ಸಿಬಿಯ ಪ್ಲೇ ಆಫ್ ಕನಸಿಗೆ ಮತ್ತಷ್ಟು ರೆಕ್ಕೆ ಬಂದಿದೆ. ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಉತ್ತಮ ರನ್‌ರೇಟ್‌ನೊಂದಿಗೆ ಗೆಲ್ಲಬೇಕಿದೆ.

ರನ್‌ರೇಟ್‌ನಲ್ಲಿ ಚೆನ್ನೈಯನ್ನು ಮೀರಿಸಬೇಕಾದರೆ ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಗೆಲ್ಲಬೇಕಿದೆ. ಉದಾಹರಣೆಗೆ, ಆರ್‌ಸಿಬಿ ಮೊದಲು ಬ್ಯಾಟಿಂಗ್ ನಡೆಸಿ 200 ರನ್ ಗಳಿಸಿದರೆ, ಚೆನ್ನೈಯನ್ನು 182ಕ್ಕೆ ನಿಯಂತ್ರಿಸಬೇಕು. ಚೇಸಿಂಗ್ ಲೆಕ್ಕಾಚಾರ ಬೇರೆ ಇದೆ. ಆರ್‌ಸಿಬಿಗೆ 201 ರನ್ ಟಾರ್ಗೆಟ್ ಲಭಿಸಿದರೆ ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು.

ಚೆನ್ನೈ ಪ್ಲೇ ಆಫ್ ಪ್ರವೇಶಿಸಬೇಕಾದರೆ ಆರ್‌ಸಿಬಿ ವಿರುದ್ಧ ಗೆದ್ದು ಬಂದರೆ ಸಾಕು, ಇಲ್ಲಿ ಯಾವುದೇ ಲೆಕ್ಕಾಚಾರದ ಹಂಗಿಲ್ಲ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2025ರ ಐಪಿಎಲ್‌ನಲ್ಲೂ ಎಂಎಸ್ ಧೋನಿ ಆಡುವುದು ಅವರಿಗೆ ಬಿಟ್ಟ ವಿಚಾರ: ಚೆನ್ನೈ ಸಿಇಓ ಕಾಸಿ ವಿಶ್ವನಾಥನ್

ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಮಾಜಿ...

ಭಾರತ – ಪಾಕ್ ಟಿ20 ವಿಶ್ವಕಪ್ ಪಂದ್ಯದ ಪ್ರತಿ ಟಿಕೆಟ್ ಬೆಲೆ ಬರೋಬ್ಬರಿ 17 ಲಕ್ಷ ರೂ!

ಐಪಿಎಲ್ ಮುಗಿಯುತ್ತಾ ಬಂತು, ಇನ್ನೇನಿದ್ದರೂ ಕ್ರಿಕೆಟ್ ಅಭಿಮಾನಿಗಳಲ್ಲಿ ಟಿ20 ವಿಶ್ವಕಪ್ ಹುಚ್ಚು...

ಈ ಬಾರಿಯ ಐಪಿಎಲ್‌ನಲ್ಲಿ ಸದ್ದೇ ಮಾಡದ ಮ್ಯಾಕ್ಸ್‌ವೆಲ್ ಬ್ಯಾಟ್‌: ಗಳಿಸಿದ್ದು ಕೇವಲ 52 ರನ್!

ಬುಧವಾರ ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಎಲಿಮಿನೇಟರ್...

ಸೋಲಿನೊಂದಿಗೆ ಐಪಿಎಲ್‌ಗೆ ವಿದಾಯ ಹೇಳಿದ ‘ಮ್ಯಾಚ್ ಫಿನಿಶರ್ ದಿನೇಶ್ ಕಾರ್ತಿಕ್’

17ನೇ ಆವೃತ್ತಿಯ ಫೈನಲ್ ತಲುಪುವ ಭರವಸೆ ಮೂಡಿಸಿದ್ದ ಅಭಿಮಾನಿಗಳ ಫೇವರೀಟ್ ತಂಡ...