ಐಪಿಎಲ್ | ರೋಚಕ ಹಣಾಹಣಿಯಲ್ಲಿ ಗುಜರಾತ್ ವಿರುದ್ಧ ಡೆಲ್ಲಿಗೆ 4 ರನ್‌ಗಳ ಜಯ

Date:

ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 40ನೇ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟನ್ಸ್ ತಂಡದ ವಿರುದ್ಧ 4 ರನ್‌ಗಳ ರೋಚಕ ಜಯ ದಾಖಲಿಸಿದೆ.

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಕ್ಷರ್ ಪಟೇಲ್ ಮತ್ತು ನಾಯಕ ರಿಷಭ್ ಪಂತ್ ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 224 ರನ್ ಗಳಿಸಿ, ಗುಜರಾತ್ ಟೈಟನ್ಸ್ ತಂಡಕ್ಕೆ 225 ರನ್‌ಗಳ ಗುರಿ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಗುರಿಯನ್ನು ಬೆನ್ನತ್ತಿದ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಜೈಂಟ್ಸ್, ಕೊನೆಯ ಎಸೆತದವರೆಗೂ ಹೋರಾಟ ನಡೆಸಿದರೂ, ಕೇವಲ 4 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡರು.

ಗುಜರಾತ್‌ಗೆ ಕೊನೆಯ ಓವರ್‌‌ನಲ್ಲಿ ಗೆಲ್ಲಲು 19 ರನ್‌ಗಳ ಅವಶ್ಯಕತೆ ಇತ್ತು. ಈ ವೇಳೆ ಡೆಲ್ಲಿ ಪರ ಬೌಲಿಂಗ್‌ ಮಾಡಿದ ಮುಕೇಶ್ ಅವರ ಮೊದಲ ಎರಡು ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ 5ನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಬ್ಯಾಟರ್ ರಶೀದ್ ಖಾನ್ ಗುಜರಾತ್‌ಗೆ ಗೆಲುವಿನ ಆಸೆ ಚಿಗುರಿಸಿದರು. ಆದರೆ ಕೊನೆಯ ಎಸೆತದಲ್ಲಿ 5 ರನ್ ಬೇಕಿದ್ದಾಗ ರನ್ ಬಾರಿಸಲಾಗದೆ 4 ರನ್‌ನಿಂದ ಸೋಲೊಪ್ಪಿಕೊಂಡರು.

18.2 ನೇ ಓವರ್‌ ವೇಳೆ ರಶೀದ್ ಖಾನ್ ಬಾರಿಸಿದ ಸಿಕ್ಸರ್ ಹೊಡೆತವನ್ನು ಬೌಂಡರಿ ಲೈನ್‌ನಲ್ಲಿ ಟ್ರಿಸ್ಟನ್ ಸ್ಟಬ್ಸ್ ಅದ್ಬುತವಾಗಿ ಫೀಲ್ಡಿಂಗ್ ಮಾಡಿ, ತಡೆದಿದ್ದೇ, ಕೊನೆಯ ಓವರ್‌ನಲ್ಲಿ ಗುಜರಾತ್ ತಂಡಕ್ಕೆ ಮುಳುವಾಯಿತು.

225 ರನ್‌ಗಳ ಸ್ಕೋರ್‌ ಅನ್ನು ತಲುಪಲು ವಿಫಲವಾದ ಗುಜರಾತ್, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 220 ರನ್ ಗಳಿಸಿತು.

ಗುಜರಾತ್ ಪರವಾಗಿ ಡೇವಿಡ್ ಮಿಲ್ಲರ್ ಒಂದು ಹಂತದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದರಾದರೂ ಅನಿವಾರ್ಯವಾದ ಹೊಸ್ತಿಲಲ್ಲಿ ಕ್ಯಾಚ್ ನೀಡಿ, ಔಟಾದರು. ಮಿಲ್ಲರ್ 23 ಎಸೆತಗಳಲ್ಲಿ 55 ರನ್ ಗಳಿಸಿದರು.‌ ಉಳಿದಂತೆ ಎಡಗೈ ಬ್ಯಾಟರ್ ಸಾಯಿ ಸುದರ್ಶನ್ 39 ಎಸೆತಗಳಲ್ಲಿ 65 ರನ್ ಗಳಿಸಿದರು. ಉಳಿದಂತೆ ರಶೀದ್ ಖಾನ್ 21, ವೃದ್ಧಿಮಾನ್ ಸಹಾ‌ 39 ರನ್ ಗಳಿಸಿದರು.

ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಬೌಲಿಂಗ್‌ನಲ್ಲಿ ರಾಝಿಕ್ ಸಲಾಂ ಮೂರು ವಿಕೆಟ್ ಪಡೆದು ಮಿಂಚಿದರೆ, ಕುಲ್‌ದೀಪ್ ಯಾದವ್ ಎರಡು ವಿಕೆಟ್ ಗಳಿಸಿದರು. ಉಳಿದಂತೆ ಅಕ್ಷರ್ ಪಟೇಲ್, ನೋರ್ಜೆ ಹಾಗೂ ಮುಕೇಶ್ ಕುಮಾರ್ ತಲಾ ಒಂದೊಂದು ವಿಕೆಟ್ ಗಳಿಸಿದರು.

 

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...