ಐಪಿಎಲ್ 2024 | ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿದ ಗುಜರಾತ್

Date:

ಸನ್‌ ರೈಸರ್ಸ್‌ ಹೈದರಾಬಾದ್‌ ನೀಡಿದ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಗುಜರಾತ್‌ ಟೈಟಾನ್ಸ್‌ ,ತಂಡದ ಬೌಲರ್‌ಗಳು ಹಾಗೂ ಬ್ಯಾಟ್ಸ್‌ಮನ್‌ಗಳ ಸಾಂಘಿಕ ಪ್ರಯತ್ನದಿಂದ ಗೆಲುವು ಸಾಧಿಸಿತು. ಈ ಮೂಲಕ ಶುಭಮನ್‌ ಗಿಲ್‌ ನೇತೃತ್ವದ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಸತತ ಎರಡನೇ ಜಯ ಪಡೆಯಿತು.

- Advertisement -

ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಎಸ್‌ಆರ್‌ಹೆಚ್‌ ನೀಡಿದ 163 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್‌ ಟೈಟಾನ್ಸ್‌ ತಂಡ 19.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗೆಲುವು ಸಾಧಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗುಜರಾತ್‌ ಪರ ನಾಯಕ ಶುಭಮನ್‌ ಗಿಲ್ 36 (28 ಎಸೆತ, 2 ಬೌಂಡರಿ, 1 ಸಿಕ್ಸ್), ವೃದ್ಧಿಮಾನ್‌ ಶಾ 25 (13 ಚೆಂಡು, 1 ಬೌಂಡರಿ, ಎರಡು ಸಿಕ್ಸ್), ಸಾಯಿ ಸುದರ್ಶನ್ 45( 36 ಎಸೆತ, 4 ಬೌಂಡರಿ, 1 ಸಿಕ್ಸರ್) ಹಾಗೂ ಡೇವಿಡ್ ಮಿಲ್ಲರ್ ಅಜೇಯ 44 (27 ಚೆಂಡು, 4 ಬೌಂಡರಿ, 2 ಸಿಕ್ಸ್) ರನ್‌ ಗಳಿಸಿ ಗೆಲುವಿನ ರೂವಾರಿಗಳಾದರು.

ಎಸ್ಆರ್‌ಹೆಚ್‌ ಪರ ಶಹಬಾಜ್‌, ಪ್ಯಾಟ್ ಕಮ್ಮಿನ್ಸ್ ಹಾಗೂ ಮಾಯಾಂಕ್‌ ಮಾರ್ಕಾಂಡೆ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣೆ – ಐಪಿಎಲ್‌ ಕ್ರಿಕೆಟ್‌ನಲ್ಲಿ ಅಪ್ಪ-ಮಗನ ಆಟ

ಇದಕ್ಕೂ ಮೊದಲು ಟಾಸ್‌ ಗೆದ್ದು ಬ್ಯಾಟ್ ಮಾಡಿದ ಎಸ್‌ಆರ್‌ಹೆಚ್‌ ತಂಡ ಟಾಸ್‌ ಗೆದ್ದ ಹೈದರಾಬಾದ್‌ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಬ್ಯಾಟಿಂಗ್‌ ಆಯ್ದುಕೊಂಡರು.

ಎರಡು ಬೌಂಡರಿಗಳೊಂದಿಗೆ 16 ರನ್‌ ಬಾರಿಸಿದ್ದ ಮಾಯಾಂಕ್ ಅಗರವಾಲ್ 5ನೇ ಓವರ್‌ನಲ್ಲಿ ಒಮರ್‌ಜಾಯಿ ಬೌಲಿಂಗ್‌ನಲ್ಲಿ ಔಟಾದರು. ಹಿಂದಿನ ಪಂದ್ಯದಲ್ಲಿ ಭರ್ಜರಿ ಆಟವಾಡಿದ ಟ್ರಾವಿಸ್ ಹೆಡ್ 7ನೇ ಓವರ್‌ನಲ್ಲಿ 3 ರನ್‌ ಗಳಿಸಿ 19 ರನ್‌ ಗಳಿಸಿ ಪೆವಿಲಿಯನ್‌ಗೆ ತೆರಳಿದರು.

ಕಳೆದ ಪಂದ್ಯದಲ್ಲಿ ಸ್ಪೋಟಕ ಆಟವಾಡಿದ್ದ ಅಭಿಷೇಕ್‌ ಶರ್ಮಾ ಇಂದು ಕೂಡ ಬ್ಯಾಟ್ ಬೀಸುತ್ತಾ ಲಯ ಕಂಡುಕೊಳ್ಳಲು ಶುರು ಮಾಡಿದರು. ಆದರೆ 10ನೇ ಓವರ್‌ನ ಕಡೆಯ ಚೆಂಡಿನಲ್ಲಿ ಮೋಹಿತ್‌ ಶರ್ಮಾ ಮಾಡಿದ ಬೌಲಿಂಗ್‌ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡದ ನಾಯಕ ಶುಭಮನ್‌ ಗಿಲ್‌ಗೆ ಕ್ಯಾಚ್‌ ನೀಡಿ ಔಟಾದರು. ಅಭಿಷೇಕ್‌ನ 20 ಎಸೆತಗಳ 29 ರನ್‌ಗಳ ಆಟದಲ್ಲಿ 2 ಬೌಂಡರಿ ಎರಡು ಸಿಕ್ಸರ್‌ಗಳಿದ್ದವು.

ಮುಂಬೈ ತಂಡದ ವಿರುದ್ಧ ಸಿಕ್ಸರ್‌ಗಳ ಸುರಿಮಳೆ ಸುರಿದಿದ್ದ ಹೆನ್‌ರಿಚ್‌ ಕ್ಲಾಸೆನ್ ಸ್ಪೋಟಕವಾಗಿ ಆಟವಾಡಲು ಶುರು ಮಾಡಿದರು. ಆದರೆ 14 ನೇ ಓವರ್‌ನಲ್ಲಿ ರಶೀದ್‌ ಖಾನ್‌ ಬೌಲಿಂಗ್‌ ದಾಳಿಗೆ ಸಿಲುಕಿ 24(13 ಎಸೆತ, 2 ಸಿಕ್ಸರ್, 1 ಬೌಂಡರಿ) ರನ್‌ಗಳಿಗೆ ಬೌಲ್ಡ್‌ ಆದರು.

ಮಾರ್ಕಾಮ್‌ 17 ರನ್‌ ಗಳಿಸಿ ಉಮೇಶ್ ಯಾದವ್‌ ಬೌಲಿಂಗ್‌ನಲ್ಲಿ ಔಟಾದರು. ಅಂತಿಮವಾಗಿ ಕೊನೆಯಲ್ಲಿ ಬ್ಯಾಟ್‌ ಬೀಸಿದ ಅಬ್ದುಲ್‌ ಸಮದ್(29) ಹಾಗೂ ಶಹಬಾಜ್‌ ಅಹಮದ್‌(22) ಅವರ ಆಟದೊಂದಿಗೆ ಎಸ್‌ಆರ್‌ಹೆಚ್‌ ತಂಡ 20 ಓವರ್‌ಗಳಲ್ಲಿ  8 ವಿಕೆಟ್ ನಷ್ಟಕ್ಕೆ 162 ರನ್‌ ಗಳಿಸಿತು.

ಗುಜರಾತ್‌ ಪರ ಒಮರ್ಜಾಯ್,ಉಮೇಶ್ ಯಾದವ್,ರಶೀದ್ ಖಾನ್, ನೂರ್‌ ಅಹ್ಮದ್ ಹಾಗೂ ಮೋಹಿತ್ ಶರ್ಮಾ ತಲಾ ಒಂದೊಂದು ವಿಕೆಟ್ ಕಬಳಿಸಿದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...