ಐಪಿಎಲ್ | ಮುಂಬೈ ವಿರುದ್ಧ ರಾಜಸ್ಥಾನಕ್ಕೆ ಭರ್ಜರಿ ಜಯ: ಹಾರ್ದಿಕ್ ಪಾಂಡ್ಯಾ ಬಳಗಕ್ಕೆ ‘ಹ್ಯಾಟ್ರಿಕ್’ ಸೋಲು

Date:

ಇಂದು ಮುಂಬೈನ ವಾಂಖೆಡೆ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಐಪಿಎಲ್‌ನ  ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಭರ್ಜರಿ ಜಯ ದಾಖಲಿಸಿದೆ. ಗೆಲ್ಲಲು ಕೇವಲ 126 ರನ್‌ಗಳ ಗುರಿ ಪಡೆದಿದ್ದ ರಾಜಸ್ಥಾನ, 15.3 ಓವರ್‌ಗಳಲ್ಲಿ ಗುರಿಯನ್ನು ತಲುಪಿತು.

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ನೂತನ ನಾಯಕ ಹಾರ್ದಿಕ್ ಪಾಂಡ್ಯಾ ನೇತೃತ್ವ ಮುಂಬೈ ಇಂಡಿಯನ್ಸ್‌​ ನಿಗದಿತ 20 ಓವರ್​​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ ಕೇವಲ 125 ರನ್​ ಗಳಿಸಿತ್ತು. ಇಂದಿನ ಸೋಲಿನೊಂದಿಗೆ ಈವರೆಗೆ ಆಡಿರುವ ಮೂರೂ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್‌ ಸೋತಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಸತತ ಮೂರು ಪಂದ್ಯಗಳನ್ನು ಗೆದ್ದಿರುವ ರಾಜಸ್ಥಾನ ರಾಯಲ್ಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸತತ ಮೊದಲ ಎರಡು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ಮುಂಬೈ ಇಂಡಿಯನ್ಸ್​​​, ಇಂದು ತವರಲ್ಲಿ ಹೇಗಾದ್ರೂ ಮಾಡಿ ಗೆಲ್ಲಲೇಬೇಕು ಎಂದು ಜಿದ್ದಿಗೆ ಬಿದ್ದಿತ್ತು. ಆದರೆ, ಟಾಸ್​ ಸೋತು ಮೊದಲು  ಬ್ಯಾಟಿಂಗ್​ ಮಾಡಿದ ಮುಂಬೈ ಇಂಡಿಯನ್ಸ್​ ದೊಡ್ಡ ಸ್ಕೋರ್​ ಕಲೆ ಹಾಕುವ ಭರದಲ್ಲಿ ಬ್ಯಾಕ್​ ಟು ಬ್ಯಾಕ್​ ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಮುಂಬೈ ಇಂಡಿಯನ್ಸ್​ ಪರ ಓಪನರ್​ ಆಗಿ ಬಂದ ರೋಹಿತ್​ ಶರ್ಮಾ ಟ್ರೆಂಟ್​ ಬೌಲ್ಟ್​​ ಮೊದಲನೇ ಓವರ್​ನಲ್ಲೇ ಫಸ್ಟ್​ ಬಾಲ್​ಗೆ ಕ್ಯಾಚ್​​ ನೀಡಿ ಡಕೌಟ್​​ ಆದರು. ನಮನ್​​, ಬ್ರೆವೀಸ್​ ಕೂಡ ಡಕೌಟ್​ ಆಗಿ, ಔಟಾದರು. ಇಶಾನ್​ ಕಿಶನ್​ 1 ಸಿಕ್ಸರ್​​, 2 ಫೋರ್​ ಸಮೇತ 16 ರನ್​ ಸಿಡಿಸಿ ಕ್ಯಾಚ್​​ ಕೊಟ್ಟರು.

ಒಂದಷ್ಟು ಓವರ್​ಗಳು ಕ್ರೀಸ್​ನಲ್ಲಿ ನಿಂತು ಆಡಿದ ತಿಲಕ್​ ವರ್ಮಾ 2 ಫೋರ್​ ಸಮೇತ 32 ರನ್​ ಗಳಿಸಿದ್ದರು. ಬಳಿಕ ನಾಯಕ ಹಾರ್ದಿಕ್​ ಪಾಂಡ್ಯ 6 ಫೋರ್​ ಸಮೇತ 34 ರನ್​ ಬಾರಿಸಿದ್ದರು. ಟೀಮ್​ ಡೇವಿಡ್​​ 17 ರನ್ ಗಳಿಸಲಷ್ಟೇ ಶಕ್ತವಾದರು.

ರಾಜಸ್ಥಾನದ ಸಂಘಟಿತ ಬೌಲಿಂಗ್‌ ನಡುವೆ ವಿಫಲರಾದ ಮುಂಬೈ ಬ್ಯಾಟರ್‌ಗಳು, 20 ಓವರ್​​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ ಕೇವಲ 125 ರನ್​ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ, ರಿಯಾನ್ ಪರಾಗ್ ಅವರ ಭರ್ಜರಿ ಅರ್ಧಶಕದ ನೆರವಿನಿಂದ 15.3 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿಯನ್ನು ತಲುಪಿತು.

ರಿಯಾನ್ ಪರಾಗ್ 39 ಎಸೆತಗಳಲ್ಲಿ 54 ರನ್ ಗಳಿಸಿ ಮಿಂಚಿದರು. ಜೈಸ್ವಾಲ್ 10, ಸಂಜು ಸ್ಯಾಮ್ಸನ್ 12, ಜೋಸ್ ಬಟ್ಲರ್ 13 ರನ್, ರವಿಚಂದ್ರನ್ ಅಶ್ವಿನ್ 16 ರನ್ ಗಳಿಸಿದರು.

ಮುಂಬೈ ಪರ ಆಕಾಶ್ ಮದ್ವಾಲ್ 3 ವಿಕೆಟ್ ಪಡೆದರೆ, ಮಪಾಕಾ 1 ವಿಕೆಟ್ ಪಡೆದರು. ರಾಜಸ್ಥಾನ ಪರ ಬೌಲಿಂಗ್‌ನಲ್ಲಿ ಚಾಹಲ್ ಹಾಗೂ ಟ್ರೆಂಟ್ ಬೌಲ್ಟ್ 3 ವಿಕೆಟ್ ಪಡೆದರೆ, ಬರ್ಗರ್ 2 ಹಾಗೂ ಆವೇಶ್ ಖಾನ್ 1 ವಿಕೆಟ್ ಪಡೆದಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳಾ ಟಿ20 ಇತಿಹಾಸದಲ್ಲೇ ಮೊದಲು: ಏಷ್ಯಾಕಪ್‌ನಲ್ಲಿ ಲಂಕಾ, ಪಾಕ್ ಸ್ಪಿನ್ನರ್‌ಗಳ ವಿಕ್ರಮ

ಮಹಿಳಾ ಟಿ20 ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟರ್‌ಗಳಿಗಿಂತ ಸ್ಪಿನ್ ಬೌಲರ್‌ಗಳು ಸಂಪೂರ್ಣ...

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...