ಅತ್ಯಾಚಾರ ಪ್ರಕರಣ: ಐಪಿಎಲ್ ಆಟಗಾರ ಅಭಿಷೇಕ್ ಬಂಧನ

Date:

ಮದುವೆಯಾಗುವುದಾಗಿ ನಂಬಿಸಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ, ಹಲ್ಲೆ ಹಾಗೂ ಕ್ರಿಮಿನಲ್ ಬೆದರಿಕೆ ಒಡ್ಡಿದ ಗಂಭೀರ ಆರೋಪದ ಮೇಲೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ‘ಡೆಲ್ಲಿ ಕ್ಯಾಪಿಟಲ್ಸ್’ ಆಟಗಾರ ಹಾಗೂ ಬಂಗಾಳದ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

​ಕಲ್ಕತ್ತಾ ಹೈಕೋರ್ಟ್ ನೀಡಿದ ನಿರ್ದೇಶನದ ಮೇರೆಗೆ ಡಮ್ ಡಮ್ ಪೊಲೀಸ್ ಠಾಣಾ ವ್ಯಾಪ್ತಿಯ ಇಮಾಮಿ ಸಿಟಿಯಲ್ಲಿ ಕ್ರಿಕೆಟಿಗನನ್ನು ಬಂಧಿಸಲಾಗಿದೆ ಎಂದು ಹೂಗ್ಲಿ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕನ್ವರ್ ಭೂಷಣ್ ಸಿಂಗ್ ತಿಳಿಸಿದ್ದಾರೆ. ಸಂತ್ರಸ್ತೆ ಕಳೆದ ಜೂನ್ ತಿಂಗಳಿನಲ್ಲಿಯೇ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದರು ಮತ್ತು ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ತಮ್ಮ ದೂರಿನಲ್ಲಿ ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

​ಪೊಲೀಸ್ ಎಫ್‌ಐಆರ್‌ನ ಮಾಹಿತಿಯ ಪ್ರಕಾರ, ಸಂತ್ರಸ್ತೆ ಮತ್ತು ಅಭಿಷೇಕ್ ಪೊರೆಲ್ ಕಳೆದ ಮೂರು ವರ್ಷಗಳಿಂದ ಪ್ರೇಮ ಸಂಬಂಧದಲ್ಲಿದ್ದರು. ಕಳೆದ ವರ್ಷ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದ ನಂತರ ಕ್ರಿಕೆಟಿಗ ಆಕೆಯಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದರು. ಈ ಹಿಂದೆ ಮದುವೆಯಾಗುವುದಾಗಿ ಭರವಸೆ ನೀಡಿದ್ದ ಅವರು, ನಂತರ ಏಕಾಏಕಿ ನಿರಾಕರಿಸಿದ್ದರು.

​”ಅಭಿಷೇಕ್ ಪೊರೆಲ್ ನನ್ನನ್ನು ಅಕ್ರಮವಾಗಿ ಕೂಡಿಹಾಕಿದ್ದರು. ಆಹಾರ ನೀಡದೆ ಉದ್ದೇಶಪೂರ್ವಕವಾಗಿ ಪ್ರತ್ಯೇಕವಾಗಿರಿಸಿದ್ದರು. ಇದರ ಪರಿಣಾಮವಾಗಿ ನಾನು ದೈಹಿಕವಾಗಿ ತೀವ್ರ ದುರ್ಬಲಗೊಂಡು ಸರಿಯಾಗಿ ನಡೆಯಲು ಸಾಧ್ಯವಾಗದ ಸ್ಥಿತಿಗೆ ತಲುಪಿದ್ದೆ. ವಿಮಾನ ಪ್ರಯಾಣದ ಟಿಕೆಟ್ ಇದ್ದರೂ, ಹಲ್ಲೆಯಿಂದಾದ ಗಾಯಗಳ ಕಾರಣದಿಂದಾಗಿ ತುರ್ತು ವೈದ್ಯಕೀಯ ಚಿಕಿತ್ಸೆ ಪಡೆಯಬೇಕಾದ ಅನಿವಾರ್ಯತೆ ಎದುರಾಗಿತ್ತು” ಎಂದು ಸಂತ್ರಸ್ತೆ ದೂರಿನಲ್ಲಿ ವಿವರಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ಖಚಿತಪಡಿಸಿದ್ದಾರೆ.

​ಆದರೆ, ಭಾರತ ‘ಎ’ ತಂಡದ ಪರವಾಗಿ ಯುನೈಟೆಡ್ ಕಿಂಗ್‌ಡಮ್ ಮತ್ತು ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಪೊರೆಲ್, ಈ ಹಿಂದೆ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಸಾರಾಸಗಟಾಗಿ ತಳ್ಳಿಹಾಕಿದ್ದರು. ಎಡಗೈ ಅಗ್ರ ಕ್ರಮಾಂಕದ ಬ್ಯಾಟರ್ ಆಗಿರುವ ಅಭಿಷೇಕ್ ಪೊರೆಲ್, 2023 ರಿಂದ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕಳೆದ ಋತುವಿನಲ್ಲಿ ನಾಲ್ಕು ಇನ್ನಿಂಗ್ಸ್‌ಗಳಿಂದ 108 ರನ್ ಗಳಿಸಿದ್ದರು. 2021-22ರ ಋತುವಿನಲ್ಲಿ ಬಂಗಾಳದ ಪರ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಇವರು, ಇದುವರೆಗೆ 32 ಪ್ರಥಮ ದರ್ಜೆ ಮತ್ತು 23 ಲಿಸ್ಟ್-ಎ ಪಂದ್ಯಗಳನ್ನು ಆಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ...

‘ವೀರಮಣಿ ಅತ್ಯಾಚಾರ ಪ್ರಕರಣ ಮುಚ್ಚುವುದರ ಹಿಂದೆ ಯಾವ ಒಪ್ಪಂದವಿತ್ತು’?; ಡಿಎಂಕೆ ವಿರುದ್ಧ ಸಿಎಂ ವಿಜಯ್‌ ವಾಗ್ದಾಳಿ

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ತಮಿಳುನಾಡಿನ ಆರ್‌....

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ...