ಐಪಿಎಲ್ ಆರಂಭದಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಆರ್ಸಿಬಿ ತಂಡವು, ಕಳೆದ ಐದೂ ಪಂದ್ಯದಲ್ಲಿ ಐದರಲ್ಲಿ ಗೆಲುವು ಸಾಧಿಸುವುದರೊಂದಿಗೆ ತಾನಿನ್ನೂ ಪ್ಲೇ ಆಫ್ ಕನಸನ್ನು ಕೈಬಿಟ್ಟಿಲ್ಲ ಎಂಬ ಸಂದೇಶವನ್ನು ಅಭಿಮಾನಿಗಳಿಗೆ ನೀಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ರೋಚಕ ಜಯ ಗಳಿಸಿದ್ದು, ಇನ್ನೂ ಕೂಡ ಪ್ಲೇ ಆಫ್ ರೇಸ್ನಿಂದ ಹೊರಬಿದ್ದಿಲ್ಲ.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಜತ್ ಪಾಟೀದಾರ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 187 ರನ್ ದಾಖಲಿಸಿತ್ತು.
5TH CONSECUTIVE VICTORY FOR RCB.
– The Playoffs hopes are alive. 🔥❤️ pic.twitter.com/SDBs6ogtM6
— Mufaddal Vohra (@mufaddal_vohra) May 12, 2024
ಆರ್ಸಿಬಿ ನೀಡಿದ್ದ 188 ರನ್ಗಳ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಹಂಗಾಮಿ ನಾಯಕ ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು, 19.1 ಓವರ್ಗಳಲ್ಲಿ 140 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಆ ಮೂಲಕ 47 ರನ್ಗಳಿಂದ ಸೋಲೊಪ್ಪಿಕೊಂಡಿತು. ನಾಯಕ ರಿಷಭ್ ಪಂತ್ ಅವರಿಗೆ ಒಂದು ಪಂದ್ಯಕ್ಕೆ ನಿಷೇಧ ಹೇರಲಾಗಿತ್ತು. ಇದರಿಂದಾಗಿ ವಿಫಲಗೊಂಡ ಡೆಲ್ಲಿ, ಅವರ ಅನುಪಸ್ಥಿತಿಯಲ್ಲಿ ಸೋಲು ಅನುಭವಿಸಿದೆ.
RCB MOVES TO NO.5 IN THE POINTS TABLE. pic.twitter.com/x5t1ObwV3b
— Mufaddal Vohra (@mufaddal_vohra) May 12, 2024
ಡೆಲ್ಲಿ ಪರ ಹಂಗಾಮಿ ನಾಯಕ ಅಕ್ಷರ್ ಪಟೇಲ್ ಅರ್ಧಶತಕ(57 ರನ್, 39 ಎಸೆತ) ಗಳಿಸುವ ಮೂಲಕ ಹೋರಾಟ ನಡೆಸಿದರಾದರೂ, ಆರ್ಸಿಬಿಯ ಸಂಘಟಿತ ಬೌಲಿಂಗ್ ಹಾಗೂ ಉತ್ತಮ ಫೀಲ್ಡಿಂಗ್ನಿಂದಾಗಿ ಸೋಲೊಪ್ಪಿಕೊಳ್ಳಬೇಕಾಯಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಇಬ್ಬರು ಪ್ರಮುಖ ಬ್ಯಾಟರ್ಗಳಾದ ಜೇಕ್ ಫ್ರೇಸರ್(21 ರನ್) ಹಾಗೂ ಸ್ಟಬ್ಸ್(3 ರನ್) ರನೌಟ್ ಆದ್ದರಿಂದ ಆರ್ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು.
ಆರ್ಸಿಬಿ ಪರ ಉತ್ತಮ ಬೌಲಿಂಗ್ ನಡೆಸಿದ ಯಶ್ ದಯಾಳ್ 3 ವಿಕೆಟ್ ಪಡೆದರೆ, ಫರ್ಗ್ಯುಸನ್ 2 ಹಾಗೂ ಮೊಹಮ್ಮದ್ ಸಿರಾಜ್ , ಕ್ಯಾಮರೂನ್ ಗ್ರೀನ್, ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
