ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) – 2025 ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿರುವುದಾಗಿ ಬಿಸಿಸಿಐ ಘೋಷಿಸಿದೆ.
ಶುಕ್ರವಾರ ನಡೆದ ಬಿಸಿಸಿಐ ತುರ್ತು ಸಭೆಯಲ್ಲಿ ಐಪಿಎಲ್ ಸ್ಥಗಿಳಿಸಲು ತೀರ್ಮಾನಿಸಲಾಗಿದೆ.
ಜಮ್ಮು ಮತ್ತು ಪಠಾಣ್‌ಕೋಟ್‌ಗಳಲ್ಲಿ ವಾಯುದಾಳಿ ಎಚ್ಚರಿಕೆಗಳು ಬಂದ ಹಿನ್ನೆಲೆ ಗುರುವಾರ ರಾತ್ರಿ ಪಂಜಾಬ್‌ನ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಅರ್ಧಕ್ಕೆ ರದ್ದುಪಡಿಸಲಾಗಿತ್ತು. ಇದೀಗ, ಟೂರ್ನಿಯ ಉಳಿದೆಲ್ಲ ಪಂದ್ಯಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ.
“ದೇಶವು ಯುದ್ಧದಲ್ಲಿರುವಾಗ ಕ್ರಿಕೆಟ್ ನಡೆಯುವುದು ಒಳ್ಳೆಯದಲ್ಲ” ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.