ಐಪಿಎಲ್ | ರಾಜಸ್ಥಾನಕ್ಕೆ ಜಯ: ಆರ್‌ಸಿಬಿ ಕಪ್ ಕನಸು ಮತ್ತೆ ಭಗ್ನ

Date:

ಲೀಗ್ ಹಂತದ ಪ್ರಮುಖ ಆರು ಪಂದ್ಯಗಳನ್ನು ಸತತವಾಗಿ ಗೆದ್ದು, ಪ್ಲೇ ಆಫ್ ಪ್ರವೇಶಿಸುವ ಮೂಲಕ ಪ್ರಶಸ್ತಿ ಸುತ್ತಿಗೆ ತಲುಪುವ ಭರವಸೆ ಮೂಡಿಸಿದ್ದ ಆರ್‌ಸಿಬಿ, ಎಲಿಮಿನೇಟರ್ ಪಂದ್ಯದಲ್ಲಿ ಎಡವಿದ್ದು, ಕಪ್ ಗೆಲ್ಲುವ ಕನಸು ಮತ್ತೆ ಕನಸಾಗಿಯೇ ಉಳಿದಿದೆ.

- Advertisement -

ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿ ಐಪಿಎಲ್‌ನ ಎಲಿಮಿನೇಟರ್‌ನಲ್ಲಿ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡವು ಆರ್‌ಸಿಬಿಯನ್ನು 4 ವಿಕೆಟ್‌ಗಳಿಂದ ಸೋಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರಾಜಸ್ಥಾನ ತಂಡದ ಸಂಘಟಿತ ಬೌಲಿಂಗ್‌ಗೆ ರನ್ ಗಳಿಸಲು ಪರದಾಡಿದ್ದ ಆರ್‌ಸಿಬಿಯ ಬ್ಯಾಟರ್‌ಗಳು, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 172 ರನ್ ದಾಖಲಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ತಂಡವು 19 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 174 ರನ್ ದಾಖಲಿಸುವ ಮೂಲಕ ಗೆಲುವು ದಾಖಲಿಸಿತು.

ಮೊದಲ ವಿಕೆಟಿಗೆ ಯಶಸ್ವಿ ಜೈಸ್ವಾಲ್‌ ಮತ್ತು ಟಾಮ್ ಕ್ಯಾಡ್ಮೋರ್ 33 ಎಸೆತಗಳಲ್ಲಿ 46 ರನ್‌ ಹೊಡೆದರು. ಟಾಮ್ ಕ್ಯಾಡ್ಮೋರ್ 20 ರನ್‌ ಗಳಿಸಿ ಔಟಾದರೆ, ಯಶಸ್ವಿ ಜೈಸ್ವಾಲ್‌ 45 ರನ್‌(30 ಎಸೆತ, 8 ಬೌಂಡರಿ) ಹೊಡೆದು ವಿಕೆಟ್‌ ಒಪ್ಪಿಸಿದರು. ನಾಯಕ ಸಂಜು ಸ್ಯಾಮ್ಸನ್‌ 17 ರನ್‌ ಸಿಡಿಸಿ, ಸ್ಟಂಪ್ ಔಟಾದರು.

112 ರನ್‌ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ರಾಜಸ್ಥಾನ ವಿರಾಟ್‌ ಕೊಹ್ಲಿ ಅವರ ಅತ್ಯುತ್ತಮ ಥ್ರೋನಿಂದಾಗಿ 4ನೇ ವಿಕೆಟ್‌ ಕಳೆದುಕೊಂಡಿತು. 8 ರನ್‌ ಗಳಿಸಿದ್ದ ಧ್ರುವ್ ಜುರೆಲ್ ಎರಡನೇ ರನ್‌ ಓಡುವಾಗ ರನೌಟ್‌ಗೆ ಬಲಿಯಾದರು.

ಕೊನೆಯಲ್ಲಿ ರಿಯಾನ್ ಪರಾಗ್ 26 ಎಸೆತಗಳಲ್ಲಿ 36 ರನ್(2 ಬೌಂಡರಿ, 2 ಸಿಕ್ಸರ್‌) ಹಾಗೂ ಹೆಟ್ಮೇಯರ್‌ 26 ರನ್‌(14 ಎಸೆತ, 3 ಬೌಂಡರಿ, 1 ಸಿಕ್ಸರ್‌) ಗಳಿಸಿ, ಸಿರಾಜ್‌ಗೆ ವಿಕೆಟ್ ಒಪ್ಪಿಸಿದರು. ಪೊವೆಲ್‌ ಔಟಾಗದೇ 16 ರನ್‌ ಹೊಡೆದ ಪರಿಣಾಮ ರಾಜಸ್ಥಾನ ಪಂದ್ಯವನ್ನು 19 ಓವರ್‌ನಲ್ಲೇ ಗೆದ್ದುಕೊಂಡಿತು.

 

ಇಂದು ಗೆದ್ದಿರುವ ರಾಜಸ್ಥಾನ ತಂಡವು ಎರಡನೇ ಕ್ವಾಲಿಫೈಯರ್‌ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದೆ. ಆರ್‌ಸಿಬಿ ಸೋಲುವ ಮೂಲಕ ಟೂರ್ನಿಯಿಂದಲೇ ಹೊರಬಿದ್ದಿದೆ. ಎರಡನೇ ಕ್ವಾಲಿಫೈಯರ್‌ ಪಂದ್ಯವು ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಚೆನ್ನೈಯಲ್ಲಿ ಮೇ 24ರಂದು ನಡೆಯಲಿದೆ. ಈ ಪಂದ್ಯವನ್ನು ಗೆದ್ದವರು ಫೈನಲ್‌ನಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡವನ್ನು ಎದುರಿಸಲಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...