ಐಪಿಎಲ್‌ ಪಂದ್ಯ ವೀಕ್ಷಿಸಲು ತೆರಳಿದ್ದ ಐಆರ್‌ಎಸ್ ಅಧಿಕಾರಿಯ ದುಬಾರಿ ಮೊಬೈಲ್‌ ಕಳ್ಳತನ

Date:

ಐಪಿಎಲ್‌ ಪಂದ್ಯ ವೀಕ್ಷಿಸುತ್ತಿದ್ದ ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ದುಬಾರಿ ಮೊಬೈಲ್‌ ಫೋನ್‌ ಕಳ್ಳರ ʻಪಾಲಾಗಿರುವʼ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಏಪ್ರಿಲ್ 17ರಂದು ಉದ್ಯಾನ ನಗರಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆತಿಥೇಯ ಆರ್‌ಸಿಬಿ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳ ನಡುವೆ ಪಂದ್ಯ ನಡೆದಿತ್ತು. ಆದಾಯ ತೆರಿಗೆ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಐಆರ್‌ಎಸ್ ಅಧಿಕಾರಿ ಬಿ ಆರ್ ರಮೇಶ್ ಎಂಬುವವರು ಈ ಪಂದ್ಯವನ್ನು ವೀಕ್ಷಿಸಲು ತೆರಳಿದ್ದರು. ಈ ವೇಳೆ ಇವರ ಬಳಿ ಇದ್ದ ದುಬಾರಿ ಮೌಲ್ಯದ ಮೊಬೈಲ್‌ ಫೋನ್‌ ಅನ್ನು ಕಳ್ಳರು ಎಗರಿಸಿದ್ದಾರೆ.

ಈ ಕುರಿತು ಸಹಕಾರ ನಗರದ ನಿವಾಸಿ ಬಿ ಆರ್ ರಮೇಶ್ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ರುದಾರೆ. ʻನಾನು ಗೇಟ್ ನಂ.6ರ ಮೂಲಕ ಕ್ರೀಡಾಂಗಣಕ್ಕೆ ಪ್ರವೇಶಿಸುತ್ತಿದ್ದ ವೇಳೆ ಕಳ್ಳತನವಾಗಿದೆ. ಕಳುವಾದ ಮೊಬೈಲ್ ಮೌಲ್ಯ 80 ಸಾವಿರ ರೂಪಾಯಿʼ ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಜಾ ಮಾರಾಟ ಆರೋಪ; ಮಾಜಿ ಸಚಿವ ಮುನಿರತ್ನ ವಿರುದ್ಧ ದೂರು

ಬೆಂಗಳೂರಿನ ಆರ್‌ಆರ್‌ ನಗರದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆರ್‌ಆರ್‌ ನಗರದ...

ಕಾವೇರಿ ವಿವಾದ | ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್‌

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು...

ದಂಪತಿಗೆ ಕನ್ನಡ ನಟ ನಾಗಭೂಷಣ್​ ಕಾರು ಡಿಕ್ಕಿ: ಮಹಿಳೆ ಮೃತ್ಯು

ಬೆಂಗಳೂರಿನ ವಸಂತನಗರ ಮುಖ್ಯರಸ್ತೆಯ ಬಳಿ ಶನಿವಾರ ರಾತ್ರಿ ನಡೆದ ಘಟನೆ ರಾತ್ರಿ ವಾಕಿಂಗ್‌...

ಕೋಲಾರ | ಅನರ್ಹರಿಗೆ ಭೂಮಿ ಮಂಜೂರು ಪ್ರಕರಣ; ಕಾಂಗ್ರೆಸ್‌ ಶಾಸಕನ ವಿರುದ್ಧ ತನಿಖೆಗೆ ಆದೇಶ

ಸರ್ಕಾರಿ ಭೂಮಿಯನ್ನು ಮೃತರೂ ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದ ಮಾಲೂರು ಕಾಂಗ್ರೆಸ್‌...