ಐಪಿಎಲ್ 2023 | ಪಂಜಾಬ್‌ ಕಿಂಗ್ಸ್ – ಆರ್‌ಆರ್‌; ಪ್ಲೇ ಆಫ್‌ ಪ್ರವೇಶಕ್ಕೆ ಉಭಯ ತಂಡಗಳಿಗೆ ಗೆಲುವು ಅನಿವಾರ್ಯ

Date:

ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಐಪಿಎಲ್‌ 2023ರ 16ನೇ ಆವೃತ್ತಿಯ 66ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಸೆಣಸಾಡಲಿವೆ. ಎರಡೂ ತಂಡಗಳಿಗೂ ಇದು ಲೀಗ್‌ ಹಂತದಲ್ಲಿ ಕೊನೆಯ ಪಂದ್ಯವಾಗಿದ್ದು ಪ್ಲೇಆಫ್ ಪ್ರವೇಶಕ್ಕೆ ಉಭಯ ತಂಡಗಳು ಗೆಲುವು ಸಾಧಿಸುವ ಅಗತ್ಯವಿದೆ.

- Advertisement -

ಪಂದ್ಯ ಆರಂಭಗೊಂಡಿದ್ದು ಟಾಸ್‌ ಗೆದ್ದ ಆರ್‌ಆರ್‌ ಫೀಲ್ಡಿಂಗ್‌ ಆಯ್ದುಕೊಂಡಿದೆ. ಪಂಜಾಬ್‌ ಕಿಂಗ್ಸ್ ಬ್ಯಾಟಿಂಗ್‌ ಆರಂಭಿಸಿದ್ದು 5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 45 ರನ್‌ ಗಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪಂಜಾಬ್‌ ಹಾಗೂ ರಾಜಸ್ಥಾನ್ ತಲಾ 6 ಪಂದ್ಯಗಳನ್ನು ಗೆದ್ದು, 7ರಲ್ಲಿ ಸೋಲು ಕಂಡಿವೆ. ಆದರೆ ನಿವ್ವಳ ರನ್‌ರೇಟ್‌ನಲ್ಲಿ ಉತ್ತಮ ಸ್ಥಿತಿಯಲ್ಲಿರುವ ಆರ್‌ಆರ್‌ ಗೆಲುವು ಸಾಧಿಸಿದರೆ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. ಪಂಜಾಬ್‌ ಕಿಂಗ್ಸ್ ಕೂಡ ಅಂಕಪಟ್ಟಿಯ ಮೊದಲ ನಾಲ್ಕರ ಪಟ್ಟಿಯಲ್ಲಿ ಸ್ಥಾನ ಪಡೆಯಬೇಕೆಂದರೆ ಭಾರಿ ಅಂತರದಲ್ಲಿ ಜಯಗಳಿಸಬೇಕಿದೆ. ಇನ್ನೊಂದು ಪ್ರಮುಖ ಅಂಶವೆಂದರೆ ಎರಡೂ ತಂಡಗಳಲ್ಲಿ ಯಾರೇ ಗೆದ್ದರೂ ನಂತರದ ಪಂದ್ಯಗಳಲ್ಲಿ ಬರುವ ಫಲಿತಾಂಶದ ರನ್‌ರೇಟ್‌ ಲೆಕ್ಕಾಚಾರದವರೆಗೂ ಕಾಯುವುದು ಅನಿವಾರ್ಯವಾಗಿದೆ.

ಈ ಬಾರಿಯ ಟೂರ್ನಿಯ ಒಂದು ಮುಖಾಮುಖಿಯ ಪಂದ್ಯವೂ ಸೇರಿದಂತೆ ಎರಡೂ ತಂಡಗಳು ಇಲ್ಲಿಯವರೆಗೂ ಒಟ್ಟು 25 ಐಪಿಎಲ್ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ರಾಜಸ್ಥಾನ್ 14 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ ತಂಡ 11 ಪಂದ್ಯಗಳಲ್ಲಿ ಜಯಗಳಿಸಿದೆ. ಎರಡೂ ತಂಡಗಳಿಗೂ ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಮುಖಾಮುಖಿಯಾಗುತ್ತಿರುವ ಎರಡನೇ ಪಂದ್ಯ ಇದಾಗಿದೆ.

ಈ ಸುದ್ದಿ ಓದಿದ್ದೀರಾ? ಹೊರಗೆ ಮಾತನಾಡುವವರ ಕುರಿತು ತಲೆಕೆಡಿಸಿಕೊಳ್ಳುವುದಿಲ್ಲ; ವಿರಾಟ್ ಕೊಹ್ಲಿ ‌

ರಾಜಸ್ಥಾನ ತಂಡದ ಬ್ಯಾಟಿಂಗ್​ ಶಕ್ತಿ ಎನಿಸಿರುವ ಯಶಸ್ವಿ ಜೈಸ್ವಾಲ್​ ಅವರೇ ತಂಡಕ್ಕೆ ಆಧಾರವಾಗಿದ್ದಾರೆ. ತಂಡದಿಂದ ಗರಿಷ್ಠ ಮೊತ್ತ ಗಳಿಸಿರುವ ಆಟಗಾರ ಆಗಿದ್ದಾರೆ. ಜೋಸ್​ ಬಟ್ಲರ್, ಸಂಜು ಸ್ಯಾಮ್ಸನ್ ಆಗಾಗ್ಗೆ ಅಬ್ಬರಿಸಿದರೆ, ಉಳಿದವರಿಂದ ಅಂತಹ ಪ್ರದರ್ಶನವೂ ಬಂದಿಲ್ಲ. ಬೌಲಿಂಗ್‌ನಲ್ಲಿ​ ಚಹಲ್ ಹೊರತುಪಡಿಸಿ ಇತರೆ ಬೌಲರ್​ಗಳು ವಿಕೆಟ್​ ಪಡೆಯಲು ಪರದಾಟ ನಡೆಸುತ್ತಿದ್ದಾರೆ. ಮತ್ತೊಂದೆಡೆ ಪಂಜಾಬ್​ ತಂಡದಲ್ಲೂ ಲಿಯಾಮ್​ ಲಿವಿಂಗ್​ಸ್ಟೋನ್​ ಹೊರತುಪಡಿಸಿ ಯಾರೂ ಅಬ್ಬರಿಸುತ್ತಿಲ್ಲ. ಬೌಲಿಂಗ್​​ ವಿಭಾಗವೂ ಅತ್ಯಂತ ಕಳಪೆಯಾಗಿದೆ.

ಪಿಚ್​ ರಿಪೋರ್ಟ್​

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಮೈದಾನವು ಬ್ಯಾಟಿಂಗ್ ಸ್ನೇಹಿಯಾಗಿದೆ. ಬ್ಯಾಟರ್​​ಗಳು ಉತ್ತಮವಾಗಿ ರನ್ ಗಳಿಸಲಿದ್ದಾರೆ. ಪಂದ್ಯ ಮುಂದುವರೆದಂತೆ ಸ್ಪಿನ್ನರ್‌ಗಳಿಗೂ ಕೊಂಚ ಮಟ್ಟಿಗೆ ನೆರವಾಗಲಿದೆ.

ಪಂಜಾಬ್​ ಕಿಂಗ್ಸ್​​ ತಂಡ

ಶಿಖರ್ ಧವನ್ (ನಾಯಕ), ಪ್ರಭಾ ಸಿಮ್ರಾನ್ ಸಿಂಗ್, ಅತರ್ವ ತೈಡೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್​ ಕೀಪರ್), ಸ್ಯಾಮ್ ಕರನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಕಗ್ಗಿಸೋ ರಬಾಡ, ಆರ್ಷ್‌ದೀಪ್ ಸಿಂಗ್.

ರಾಜಸ್ಥಾನ್​ ರಾಯಲ್ಸ್​ ತಂಡ

ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ, ವಿಕೆಟ್​ ಕೀಪರ್​), ದೇವದತ್ ಪಡಿಕ್ಕಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ನವದೀಪ್‌ ಸೈನಿ, ಯುಜ್ವೇಂದ್ರ ಚಹಲ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...