ಐಸಿಸಿ ಕೆಂಗಣ್ಣಿಗೆ ಗುರಿಯಾದ ರಿಷಭ್ ಪಂತ್: ಏನಿದು ವಿವಾದ, ಶಿಕ್ಷೆ?

Date:

ಲೀಡ್ಸ್ ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದ ಟೀಂ ಇಂಡಿಯಾದ ಆಟಗಾರ ರಿಷಭ್ ಪಂತ್​ ಅವರು ಐಸಿಸಿಯಿಂದ ವಾಗ್ದಂಡನೆಗೆ ಗುರಿಯಾಗಿದ್ದಾರೆ.

- Advertisement -

ಐಸಿಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ರಿಷಭ್ ಪಂತ್‌ಗೆ ವಾಗ್ದಂಡನೆ ವಿಧಿಸಲಾಗಿದ್ದು, ಪಂತ್ ಅವರು ಲೆವೆಲ್ 1 ರ ಅಡಿಯಲ್ಲಿ ತಪ್ಪಿತಸ್ಥನೆಂದು ಕಂಡುಬಂದಿದೆ. ಹೀಗಾಗಿ ಮ್ಯಾಚ್ ರೆಫರಿ, ಪಂತ್​ಗೆ ವಾಗ್ದಂಡನೆ ವಿಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪಂತ್ ವಿರುದ್ಧ ಯಾವುದೇ ಮುಂದಿನ ಕ್ರಮ ಕೈಗೊಳ್ಳಲಾಗಿಲ್ಲ. ಐಸಿಸಿ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರ್ ನಿರ್ಧಾರವನ್ನು ಪ್ರತಿಭಟಿಸುವುದು ಅಥವಾ ಆಕ್ಷೇಪಿಸುವುದಕ್ಕೆ ಸಂಬಂಧಿಸಿದ ಆರ್ಟಿಕಲ್ 2.8 ರ ಅಡಿಯಲ್ಲಿ ಪಂತ್ ತಪ್ಪಿತಸ್ಥನೆಂದು ಕಂಡುಬಂದಿದ್ದಾರೆ. ಹೀಗಾಗಿ ಈ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪಂತ್ ಅವರ ಖಾತೆಗೆ 1 ಡಿಮೆರಿಟ್ ಪಾಯಿಂಟ್ ನೀಡಲಾಗಿದೆ ಎಂದು ಐಸಿಸಿ ತಿಳಿಸಿದೆ.

ಇದನ್ನು ಓದಿದ್ದೀರಾ? ಇಂಗ್ಲೆಂಡ್‌ ವಿರುದ್ಧ ಮೊದಲ ಟೆಸ್ಟ್ | ಜೈಸ್ವಾಲ್‌ ಶತಕ: ರಾಹುಲ್‌ – ಗಿಲ್‌ ಐತಿಹಾಸಿಕ ದಾಖಲೆ

ಲೀಡ್ಸ್ ಟೆಸ್ಟ್‌ನ ಮೂರನೇ ದಿನದಂದು ಇಂಗ್ಲೆಂಡ್‌ನ ಮೊದಲ ಇನಿಂಗ್ಸ್‌ನ 61 ನೇ ಓವರ್‌ನಲ್ಲಿ ಚೆಂಡಿನ ಆಕಾರ ಬದಲಾಗಿದ್ದು ಅದನ್ನು ಬದಲಿಸುವಂತೆ ಪಂತ್, ಅಂಪೈರ್ ಬಳಿ ಮನವಿ ಮಾಡಿದರು. ಆದರೆ ಚೆಂಡನ್ನು ಗೇಜ್​ನಿಂದ ಪರೀಕ್ಷಿಸಿದ ಅಂಪೈರ್, ಚೆಂಡು ನಿಯಮಗಳಿಗನುಸಾರವಾಗಿ ಇದ್ದ ಕಾರಣ ಚೆಂಡನ್ನು ಬದಲಾಯಿಸಲು ನಿರಾಕರಿಸಿದರು. ಇದರಿಂದ ಅಸಮಾಧಾನಗೊಂಡ ಪಂತ್, ಅಂಪೈರ್ ಮುಂದೆ ಚೆಂಡನ್ನು ನೆಲದ ಮೇಲೆ ಎಸೆಯುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು. ಇದಕ್ಕಾಗಿ ಪಂತ್​ಗೆ ಇದೀಗ ವಾಗ್ದಂಡನೆ ವಿಧಿಸಲಾಗಿದೆ.

ಐಸಿಸಿ ಪತ್ರಿಕಾ ಪ್ರಕಟಣೆಯ ಪ್ರಕಾರ, ರಿಷಭ್ ಪಂತ್ ಆ ಪ್ರಕರಣದಲ್ಲಿ ತನ್ನ ತಪ್ಪನ್ನು ಮ್ಯಾಚ್ ರೆಫರಿ ರಿಚಿ ರಿಚರ್ಡ್ಸನ್ ಬಳಿ ಒಪ್ಪಿಕೊಂಡಿದ್ದಾರೆ. ಹೀಗಾಗಿ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಯ ಅಗತ್ಯವಿಲ್ಲ. ಆನ್-ಫೀಲ್ಡ್ ಅಂಪೈರ್‌ಗಳಾದ ಪಾಲ್ ರೈಫಲ್ ಮತ್ತು ಕ್ರಿಸ್ ಜಾಫ್ನಿ ಪಂತ್ ಅವರ ಪ್ರತಿಭಟನೆಯ ಬಗ್ಗೆ ಪಂದ್ಯದ ರೆಫರಿಗೆ ದೂರು ನೀಡಿದ್ದರು. ಅವರಲ್ಲದೆ, ಮೂರನೇ ಅಂಪೈರ್ ಶರ್ಫುದುಲ್ಲಾ ಮತ್ತು ನಾಲ್ಕನೇ ಅಂಪೈರ್ ಮೈಕ್ ಬರ್ನ್ಸ್ ಕೂಡ ಆರೋಪಗಳನ್ನು ಮಾಡಿದ್ದರು ಎಂದು ಐಸಿಸಿ ತಿಳಿಸಿದೆ.

ವಾಸ್ತವವಾಗಿ ಐಸಿಸಿ ನಿಯಮಗಳ ಹಂತ 1 ರ ಅಡಿಯಲ್ಲಿ ತಪ್ಪಿತಸ್ಥರೆಂದು ಕಂಡುಬಂದ ಆಟಗಾರರಿಗೆ ಕನಿಷ್ಠ ಶಿಕ್ಷೆ ವಾಗ್ದಂಡನೆಯಾಗಿದೆ. ಗರಿಷ್ಠ ಶಿಕ್ಷೆಯೆಂದರೆ ಅವರ ಪಂದ್ಯ ಶುಲ್ಕದಲ್ಲಿ ಶೇಕಡಾ 50 ರಷ್ಟು ಕಡಿತ ಮತ್ತು ಒಂದು ಅಥವಾ ಎರಡು ಡಿಮೆರಿಟ್ ಅಂಕಗಳನ್ನು ನೀಡಲಾಗುವುದು. ಇದೀಗ ಪಂತ್, ಹಂತ 1 ರ ಅಡಿಯಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದ್ದು, ವಾಗ್ದಂಡನೆ ವಿಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...