“ಇದು ನನ್ನ ಕೊನೆಯ ಟಿ20 ವಿಶ್ವಕಪ್” ಎಂದು ಹೇಳುವ ಮೂಲಕ ಅಂತಾರಾಷ್ಟ್ರೀಯ ಟಿ20 ವಿಶ್ವಕಪ್ ಟೂರ್ನಿಗೆ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದಾರೆ.
ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್ ಮೈದಾನದಲ್ಲಿ ಇಂದು ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ನಿಂದ ರೋಚಕವಾಗಿ ಸೋಲಿಸುವ ಮೂಲಕ 2ನೇ ಬಾರಿಗೆ ಚಾಂಪಿಯನ್ ಆಗಿದೆ.
VIRAT KOHLI HAS RETIRED FROM T20I CRICKET. 🥹
– Thank you for everything, King. ❤️ pic.twitter.com/2PBqgOeDSd
— Mufaddal Vohra (@mufaddal_vohra) June 29, 2024
ಈ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, “ಇದು ನನ್ನ ಕೊನೆಯ ಟಿ20 ವಿಶ್ವಕಪ್. ವಿಶ್ವಕಪ್ ಅದನ್ನು ಗೆದ್ದಿರುವುದು ನನಗೆ ಖುಷಿ ತಂದಿದೆ. ಮುಂದಿನ ಪೀಳಿಗೆಯವರಿಗೆ ಅವಕಾಶ ಕಲ್ಪಿಸಿಕೊಡುವ ಸೂಕ್ತ ಸಂದರ್ಭ ಇದು” ಎಂದು ಹೇಳುವ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಇಂದಿನ ಫೈನಲ್ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ, 59 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸ್‌ನ ನೆರವಿನಿಂದ 76 ರನ್ ಗಳಿಸಿ ಅರ್ಧಶತಕ ಗಳಿಸಿದ್ದರು. ಹೀಗಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
