ಭಾರತೀಯ ಕ್ರಿಕೆಟ್ ಪ್ರಿಯರಿಗೆ ಶುಭಸುದ್ದಿ: 2028ರ ಒಲಿಂಪಿಕ್ಸ್‌ಗೆ ಟಿ20 ಕ್ರಿಕೆಟ್ ಸೇರ್ಪಡೆ

Date:

ಭಾರತೀಯ ಕ್ರಿಕೆಟ್ ಪ್ರಿಯರಿಗೆ ಇದು ನಿಜಕ್ಕೂ ಶುಭ ಸುದ್ದಿ. ವಿಶ್ವ ಕ್ರೀಡಾ ಹಬ್ಬ ಒಲಿಂಪಿಕ್ಸ್‌ನಲ್ಲಿ ಟಿ20 ಕ್ರಿಕೆಟ್ ಸೇರ್ಪಡೆಗೊಳ್ಳಲಿದೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಟಿ20 ಕ್ರಿಕೆಟ್‌ ಸೇರ್ಪಡೆಗೊಳಿಸಿರುವುದಾಗಿ ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿ (ಐಒಸಿ) ತಿಳಿಸಿದೆ.

- Advertisement -

ಮುಂಬೈನಲ್ಲಿ ನಡೆದ ಐಒಸಿಯ 141ನೇ ಅಧಿವೇಶನದಲ್ಲಿ ಲಾಸ್ ಏಂಜಲೀಸ್ ಒಲಿಂಪಿಕ್ ಕ್ರೀಡಾಕೂಟದದಲ್ಲಿ ಐದು ಹೆಚ್ಚುವರಿ ಕ್ರೀಡೆಗಳಾದ ಕ್ರಿಕೆಟ್, ಸ್ಕ್ವಾಷ್, ಬೇಸ್‌ಬಾಲ್ ಮತ್ತು ಸಾಫ್ಟ್‌ಬಾಲ್, ಫ್ಲ್ಯಾಗ್ ಫುಟ್‌ಬಾಲ್ ಮತ್ತು ಲ್ಯಾಕ್ರೋಸ್‌ಅನ್ನು ಸೇರಿಸಲು ಸರ್ವಾನುಮತದಿಂದ ಅನುಮೋದನೆ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

1896ರಲ್ಲಿ ಒಲಿಂಪಿಕ್ಸ್ ಶುರುವಾದ ನಂತರ ಒಮ್ಮೆ ಮಾತ್ರ 1900ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಕ್ರಿಕೆಟ್ ಪಂದ್ಯಗಳನ್ನು ಆಡಿಸಲು ಅವಕಾಶ ನೀಡಲಾಗಿತ್ತು. ಬೆಲ್ಜಿಯಂ, ಫ್ರಾನ್ಸ್, ಗ್ರೇಟ್ ಬ್ರಿಟನ್ ಮತ್ತು ನೆದರ್ಲ್ಯಾಂಡ್ಸ್ ನಾಲ್ಕು ತಂಡಗಳು ಪದಕಕ್ಕಾಗಿ ಪೈಪೋಟಿ ನಡೆಸಿ ಗ್ರೇಟ್ ಬ್ರಿಟನ್ ಚಿನ್ನ ಗೆದ್ದರೆ, ಫ್ರಾನ್ಸ್‌ ಬೆಳ್ಳಿ ಪದಕ ಜಯಿಸಿತ್ತು.

ಆನಂತರದಲ್ಲಿ ಕ್ರಿಕೆಟ್ ಹೆಚ್ಚು ಜನಪ್ರಿಯವಾಗದ ಕಾರಣ ಒಲಿಂಪಿಕ್ಸ್‌ನಿಂದ ಕೈಬಿಡಲಾಗಿತ್ತು. 1970ರ ದಶಕದಿಂದ ಕ್ರಿಕೆಟ್ ಏಷ್ಯಾ, ಯೂರೋಪ್, ಆಫ್ರಿಕಾ ಖಂಡಗಳಲ್ಲಿ ಹೆಚ್ಚು ಜನಪ್ರಿಯವಾಗಿದೆ. ಭಾರತದ ಕ್ರಿಕೆಟ್ ಆಯೋಜಕ ಬಿಸಿಸಿಐ ವಿಶ್ವದ ಶ್ರೀಮಂತ ಕ್ರೀಡಾಸಂಸ್ಥೆಗಳಲ್ಲಿ ಒಂದಾಗಿದೆ. ಕ್ರಿಕೆಟ್‌ನ ಜನಪ್ರಿಯತೆ ಕಂಡು ವಿಶ್ವದ ಹಲವು ರಾಷ್ಟ್ರಗಳು ತಾವು ವಿಶ್ವಕಪ್‌ನಂಥ ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಪಾಲ್ಗೊಳ್ಳಲು ಹೆಚ್ಚು ಆಸಕ್ತಿ ತೋರುತ್ತಿವೆ.

ಈ ಸುದ್ದಿ ಓದಿದ್ದೀರಾ? ಒಲಿಂಪಿಕ್ಸ್‌: ಟಿ20 ಸೇರ್ಪಡೆಗೆ ಅನುಮತಿ ನೀಡಿದ ಐಒಸಿ

2028 ರ ಅಮೆರಿಕದ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಪುರುಷ ಹಾಗೂ ಮಹಿಳಾ ಟಿ20 ಕ್ರಿಕೆಟ್ ಪಂದ್ಯಗಳು ಇರುತ್ತವೆ. ಒಲಿಂಪಿಕ್ ಕಾರ್ಯಕ್ರಮಕ್ಕೆ ಕ್ರಿಕೆಟ್ ಅನ್ನು ಸೇರಿಸುವುದರಿಂದ ಐಒಸಿಯು ಭಾರತದ ಪ್ರಸಾರ ಹಕ್ಕುಗಳ ಮೌಲ್ಯವನ್ನು 100 ಮಿಲಿಯನ್‌ ಡಾಲರ್‌ಗಿಂತಲೂ ಹೆಚ್ಚು ಹಣವನ್ನು ಹೆಚ್ಚಿಸುವ ನಿರೀಕ್ಷೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...