ಮೂರನೇ ಟೆಸ್ಟ್ : ಜಡೇಜಾ ಸ್ಪಿನ್ ದಾಳಿಗೆ ನಲುಗಿದ ಇಂಗ್ಲೆಂಡ್ ;ಭಾರತಕ್ಕೆ 434 ರನ್‍ ಅಂತರದ ಭರ್ಜರಿ ಜಯ

Date:

ರಾಜ್‍ಕೋಟ್‍ನಲ್ಲಿ ನಡೆದ ಮೂರನೇ ಟೆಸ್ಟ್ ನಲ್ಲಿ  ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 434 ರನ್‍ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಭಾರತ ನೀಡಿದ 557 ರನ್‍ ಗುರಿಯನ್ನು  ಬೆನ್ನಟ್ಟಿದ ಆಂಗ್ಲರು ರವೀಂದ್ರ ಜಡೇಜಾ ಅವರ ಸ್ಪಿನ್‍ ದಾಳಿಗೆ ಎರಡನೇ ಇನಿಂಗ್ಸ್‍ನಲ್ಲಿ39.4 ಓವರ್‍ನಲ್ಲಿ  122 ರನ್‍ಗಳಿಗೆ ಆಲೌಟ್‍ ಆದರು.

- Advertisement -

ರವೀಂದ್ರ ಜಡೇಜಾ 41/5,ಕುಲ್‍ದೀಪ್ ಯಾದವ್ 19/2, ಜಸ್‍ಪ್ರೀತ್ ಬೂಮ್ರಾ 18/1 ಹಾಗೂ ಆರ್ ಅಶ್ವಿನ್‍ 19/1 ವಿಕೆಟ್ ಕಬಳಿಸಿ ಭಾರತದ ಗೆಲುವಿನ ರೂವಾರಿಯಾದರು. ಈ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಎರಡನೇ ಇನಿಂಗ್ಸ್‍ನಲ್ಲಿ 196/4 ವಿಕೆಟ್‍ನೊಂದಿಗೆ ನಾಲ್ಕನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾ ಯಶಸ್ವಿ ಜೈಸ್ವಾಲ್ ಅವರ ಸ್ಫೋಟಕ ದ್ವಿಶತಕ 214, ಶುಭಮನ್‍ ಗಿಲ್ 91,ಸರ್ಫರಾಜ್‍ ಖಾನ್ 68 ರನ್‍ ಗಳಿಸಿ  430/4 ರನ್‍ ಕಲೆ ಹಾಕಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ಯಶಸ್ವಿ ಜೈಸ್ವಾಲ್‍  ಒಂದೇ ಸರಣಿಯಲ್ಲಿ  ಎರಡು ದ್ವಿಶತಕ ಬಾರಿಸಿದ ಭಾರತದ ಮೂರನೇ ಆಟಗಾರರಾದರು. ಈ ಮೊದಲು ವಿನು ಮಕಂಡ್ ಹಾಗೂ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು.

ಸತತ ಎರಡನೇ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಭರ್ಜರಿ  200 ರನ್ ಬಾರಿಸಿದರು. 231 ಎಸೆತಗಳ ಅವರ ಆಟದಲ್ಲಿ 14 ಬೌಂಡರಿ ಹಾಗೂ 10 ಸ್ಫೋಟಕ  ಸಿಕ್ಸರ್‍ ಗಳಿದ್ದವು.

ಭಾರತ ಮೊದಲ ಇನಿಂಗ್ಸ್‍ನಲ್ಲಿ ನಾಯಕ ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಅವರ ಶತಕದೊಂದಿಗೆ 445 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ ಬೆನ್ ಡಕೆಟ್ ಶತಕದೊಂದಿಗೆ 319 ರನ್ ಗಳಿಸಿತು.

ನಾಲ್ಕನೇ ಟೆಸ್ಟ್ ರಾಂಚಿಯಲ್ಲಿ ಫೆ.23 ರಂದು ಆರಂಭವಾಗಲಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...